Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಟೋಕಿಯೊದಲ್ಲಿ ಹಿಟಾಚಿ, ನಿಸಿನ್‌...

ಟೋಕಿಯೊದಲ್ಲಿ ಹಿಟಾಚಿ, ನಿಸಿನ್‌ ಫುಡ್ಸ್‌, ನಿಸಾನ್‌ ಮೋಟರ್‌ ಮುಖ್ಯಸ್ಥರನ್ನು ಭೇಟಿ ಮಾಡಿದ ಸಚಿವ ಎಂ.ಬಿ.ಪಾಟೀಲ್

ರಾಜ್ಯದಲ್ಲಿ ಬಂಡವಾಳ ಹೂಡಿಕೆ‌ ; ಜಪಾನ್‌ ಕಂಪನಿಗಳ ಜೊತೆ ಪಾಲುದಾರಿಕೆ ಚರ್ಚೆ

ವಾರ್ತಾಭಾರತಿವಾರ್ತಾಭಾರತಿ24 Jun 2024 10:27 PM IST
share
ಟೋಕಿಯೊದಲ್ಲಿ ಹಿಟಾಚಿ, ನಿಸಿನ್‌ ಫುಡ್ಸ್‌, ನಿಸಾನ್‌ ಮೋಟರ್‌ ಮುಖ್ಯಸ್ಥರನ್ನು ಭೇಟಿ ಮಾಡಿದ ಸಚಿವ ಎಂ.ಬಿ.ಪಾಟೀಲ್

ಟೋಕಿಯೊ (ಜಪಾನ್) : ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಸೋಮವಾರ ಬಹುರಾಷ್ಟ್ರೀಯ ಕಂಪನಿಗಳಾದ ಹಿಟಾಚಿ, ನಿಸಿನ್‌ಫುಡ್ಸ್‌ ಮತ್ತು ನಿಸಾನ್‌ ಮೋಟರ್‌ ಕಂಪನಿಗಳ ಮುಖ್ಯಸ್ಥರ ಜೊತೆ ಸಮಾಲೋಚನೆ ನಡೆಸಿದರು.

ರಾಜ್ಯದ ಉನ್ನತ ಮಟ್ಟದ ನಿಯೋಗದ 5 ದಿನಗಳ ಜಪಾನ್‌ ಭೇಟಿಯ ಮೊದಲ ದಿನ ನಡೆದ ಸಭೆಗಳಲ್ಲಿ ಬಂಡವಾಳ ಹೂಡಿಕೆಯ ಸಾಧ್ಯತೆಗಳು ಮತ್ತು ರಾಜ್ಯ ಸರಕಾರದ ಜೊತೆಗಿನ ಸಹಯೋಗ ವೃದ್ಧಿಸುವುದಕ್ಕೆ ಗಮನ ಕೇಂದ್ರೀಕರಿಸಲಾಗಿತ್ತು. ಹಿಟಾಚಿ ಕಂಪನಿ ಜೊತೆಗಿನ ಸಭೆಯಲ್ಲಿ, ಭವಿಷ್ಯದ ತಂತ್ರಜ್ಞಾನ, ಪರಿಸರ ಸ್ನೇಹಿ ಸುಸ್ಥಿರ ಇಂಧನ, ನಿರ್ವಹಣೆಯ ಮುನ್ಸೂಚನೆ, ಸೈಬರ್‌ ಸುರಕ್ಷತೆ ಪಾಲುದಾರಿಕೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಯಿತು, ನಿರ್ದಿಷ್ಟವಾಗಿ ಹಣಕಾಸು ಸೇವೆಗಳಲ್ಲಿ ವಹಿವಾಟು ವಿಸ್ತರಿಸಲು ಹಿಟಾಚಿ ಕಂಪನಿಯು ಆಸಕ್ತಿ ವ್ಯಕ್ತಪಡಿಸಿದೆ.

ರಾಜ್ಯದಲ್ಲಿ ಉದ್ಯಮ ವಿಸ್ತರಣೆ ಸಾಧ್ಯತೆಗಳ ಬಗ್ಗೆ ನಿಸಿನ್‌ ಫುಡ್ಸ್‌ ಕಂಪನಿ ಜೊತೆಗೆ ನಿಯೋಗವು ಮಾತುಕತೆ ನಡೆಸಿತು. ʼಬೆಂಗಳೂರು ನಗರ ಕೇಂದ್ರವಾಗಿರಿಸಿ ವಹಿವಾಟು ವಿಸ್ತರಿಸಲು ವಿಪುಲ ಅವಕಾಶಗಳಿವೆ. ವಿಜಯಪುರ, ಧಾರವಾಡ ಜಿಲ್ಲೆಗಳಲ್ಲಿ ಸ್ಥಾಪಿಸಲಿರುವ ಆಹಾರ ಪಾರ್ಕ್‌ಗಳಲ್ಲಿ ಬಂಡವಾಳ ಹೂಡಿಕೆಗೆ ಅಗತ್ಯ ಬೆಂಬಲ ನೀಡಲಾಗುವುದುʼ ಎಂದು ಸಚಿವರು ಭರವಸೆ ನೀಡಿದರು.

ಕರ್ನಾಟಕದಲ್ಲಿ ವಿದ್ಯುತ್‌ ಚಾಲಿತ ವಾಹನಗಳ ತಯಾರಿಕೆ ಉಪಕ್ರಮಕ್ಕೆ ಸಂಬಂಧಿಸಿದಂತೆ ಪಾಲುದಾರಿಕೆ ಮತ್ತು ವಿಸ್ತರಣೆ ಕುರಿತು ಸಚಿವರು ನಿಸಾನ್‌ ಮೋಟರ್‌ನ ಹಿರಿಯ ಉಪಾಧ್ಯಕ್ಷ ಜೋಜಿ ತಗಾವಾ ಅವರ ಜೊತೆ ಮಾತುಕತೆ ನಡೆಸಿದರು, ನಿಸಾನ್‌ ಇಂಡಿಯಾದ ಅಧ್ಯಕ್ಷ ಫ್ರ್ಯಾಂಕ್‌ ಟೊರೆಸ್‌ ಅವರೂ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್ ಸೆಲ್ವಕುಮಾರ್, ವಾಣಿಜ್ಯ, ಕೈಗಾರಿಕೆ ಇಲಾಖೆಯ ಆಯುಕ್ತರಾದ ಗುಂಜನ್ ಕೃಷ್ಣ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X