Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗುಜರಾತ್ ಮಾದರಿ ನಕಲಿ, ಯುಪಿ ದ್ವೇಷಕ್ಕೆ...

ಗುಜರಾತ್ ಮಾದರಿ ನಕಲಿ, ಯುಪಿ ದ್ವೇಷಕ್ಕೆ ಮಾತ್ರ ಮಾಡೆಲ್ : ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ24 May 2024 7:56 PM IST
share
ಗುಜರಾತ್ ಮಾದರಿ ನಕಲಿ, ಯುಪಿ ದ್ವೇಷಕ್ಕೆ ಮಾತ್ರ ಮಾಡೆಲ್ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬಿಜೆಪಿ ನಾಯಕರು ಜಪಿಸುತ್ತಿದ್ದ ಗುಜರಾತ್ ಮಾದರಿ ನಕಲಿ ಎಂಬುದು ದೇಶಕ್ಕೆ ತಿಳಿಯಿತು. ಉತ್ತರ ಪ್ರದೇಶ (ಯುಪಿ) ಮಾದರಿ-ದ್ವೇಷಕ್ಕೆ ಮಾತ್ರ ಮಾಡೆಲ್ ಎಂದು ರಾಜ್ಯದ ಜನತೆ ತಿರಸ್ಕರಿಸಿದರು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟಿದ್ದಾರೆ.

ಶುಕ್ರವಾರ ಈ ಕುರಿತು ಎಕ್ಸ್‌ ನಲ್ಲಿ ಪೋಸ್ಟ್ ಮಾಡಿರುವ ಅವರು, ಅಭಿವೃದ್ಧಿಯ ಅಸಲಿ ಮಾದರಿಯಾಗಿ ‘ಕರ್ನಾಟಕ ಮಾದರಿ’ ಹೊರಹೊಮ್ಮುತ್ತಿದೆ. ಉತ್ತರ ಪ್ರದೇಶದ ಸಾರಿಗೆ ಅಧಿಕಾರಿಗಳ ನಿಯೋಗವು ಕರ್ನಾಟಕದ ಸಾರಿಗೆ ವ್ಯವಸ್ಥೆಯ ಸಮರ್ಥ ಕಾರ್ಯವೈಖರಿಯ ಬಗ್ಗೆ ಅರಿಯಲು ಬಿಎಂಟಿಸಿಗೆ ಭೇಟಿ ನೀಡಿ ರಾಜ್ಯ ಸಾರಿಗೆ ಇಲಾಖೆ ಅಳವಡಿಸಿಕೊಂಡಿರುವ ವಿವಿಧ ವಿನೂತನ ವ್ಯವಸ್ಥೆಗಳ ಮಾಹಿತಿ ಪಡೆದರು ಎಂದು ತಿಳಿಸಿದ್ದಾರೆ.

ದೇಶದ ಬೇರೆ ಬೇರೆ ರಾಜ್ಯಗಳಿಗಷ್ಟೇ ಅಲ್ಲದೇ, ಸ್ವತಃ ಕೇಂದ್ರ ಸರಕಾರಕ್ಕೆ, ಪ್ರಧಾನಿ ಮೋದಿಯವರನ್ನೂ ಕರ್ನಾಟಕ ಮಾಡೆಲ್ ಪ್ರೇರೇಪಿಸಿದೆ ಎನ್ನುವುದಕ್ಕೆ ಅವರು ಅಪಹರಿಸಿದ ‘ಗ್ಯಾರಂಟಿ’ ಪದವೇ ಸಾಕ್ಷಿಯಾಗಿದೆ ಎಂದು ಅವರು ಹೇಳಿದ್ದಾರೆ.

‘ಐಟಿ, ಬಿಟಿ ಕ್ಷೇತ್ರದಲ್ಲಿ, ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ, ಆರ್ಥಿಕ ವ್ಯವಸ್ಥೆಯಲ್ಲಿ, ತೆರಿಗೆ ಸಂಗ್ರಹದಲ್ಲಿ ಈಗಾಗಲೇ ನಾವು ನಂ1 ಸ್ಥಾನದಲ್ಲಿದ್ದೇವೆ. ನಮ್ಮ ಸರಕಾರ ಕರ್ನಾಟಕವನ್ನು ಹಲವು ಕ್ಷೇತ್ರಗಳಲ್ಲಿ ದೇಶಕ್ಕೆ ಮಾದರಿ ರಾಜ್ಯವನ್ನಾಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನಗಳನ್ನು ನಡೆಸುತ್ತಿದೆ’ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಬಿಜೆಪಿ ನಾಯಕರು ಜಪಿಸುತ್ತಿದ್ದಗುಜರಾತ್ ಮಾಡೆಲ್ - ನಕಲಿ ಎಂದು ದೇಶಕ್ಕೆ ತಿಳಿಯಿತು,ಯುಪಿ ಮಾಡೆಲ್ - ದ್ವೇಷಕ್ಕೆ ಮಾತ್ರ ಮಾಡೆಲ್ ಎಂದು ರಾಜ್ಯದ ಜನತೆ ತಿರಸ್ಕರಿಸಿದರು.ಅಭಿವೃದ್ಧಿಯ ಅಸಲಿ ಮಾದರಿಯಾಗಿ "ಕರ್ನಾಟಕ ಮಾಡೆಲ್" ಹೊರಹೊಮ್ಮುತ್ತಿದೆ.ಉತ್ತರ ಪ್ರದೇಶದ ಸಾರಿಗೆ ಅಧಿಕಾರಿಗಳ ನಿಯೋಗವು ಕರ್ನಾಟಕದ ಸಾರಿಗೆ ವ್ಯವಸ್ಥೆಯ ಸಮರ್ಥ… pic.twitter.com/vQ5XWLYQAu

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) May 24, 2024

share
ವಾರ್ತಾಭಾರತಿ
ವಾರ್ತಾಭಾರತಿ
Next Story
X