Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕರ್ನಾಟಕ-ಅಮೆರಿಕ ವಾಣಿಜ್ಯೋದ್ಯಮ ಸಂಬಂಧ |...

ಕರ್ನಾಟಕ-ಅಮೆರಿಕ ವಾಣಿಜ್ಯೋದ್ಯಮ ಸಂಬಂಧ | ಯು.ಎಸ್.ರಾಯಭಾರಿ ಜೊತೆ ಚರ್ಚೆ : ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ20 Sept 2024 6:36 PM IST
share
ಕರ್ನಾಟಕ-ಅಮೆರಿಕ ವಾಣಿಜ್ಯೋದ್ಯಮ ಸಂಬಂಧ | ಯು.ಎಸ್.ರಾಯಭಾರಿ ಜೊತೆ ಚರ್ಚೆ : ಸಚಿವ ಪ್ರಿಯಾಂಕ್ ಖರ್ಗೆ

ಹೊಸದಿಲ್ಲಿ : ಕರ್ನಾಟಕ ಮತ್ತು ಅಮೆರಿಕ ನಡುವೆ ವಾಣಿಜ್ಯೋದ್ಯಮ ಸಂಬಂಧಗಳನ್ನು ಬಲ ಪಡಿಸುವ ನಿಟ್ಟಿನಲ್ಲಿ ಹೊಸದಿಲ್ಲಿಯಲ್ಲಿರುವ ಅಮೆರಿಕ ರಾಯಭಾರಿ ಎರಿಕ್ ಗಾರ್ಸೆಟಿ ಅವರೊಂದಿಗೆ ಚರ್ಚೆ ನಡೆಸಲಾಯಿತು ಎಂದು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಶುಕ್ರವಾರ ಹೊಸದಿಲ್ಲಿಯಲ್ಲಿರುವ ಕರ್ನಾಟಕ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಮುಖವಾಗಿ ಕೆಲವು ಸಿಸ್ಟರ್ ಸಿಟಿ ಕಾರಿಡಾರ್ ರೂಪಿಸುವ ಬಗ್ಗೆ ಪ್ರಸ್ತಾವನೆಯನ್ನು ಅವರ ಮುಂದೆ ಇರಿಸಿದ್ದೇನೆ. ಬಹಳ ಪ್ರಮುಖವಾಗಿ ಬೆಂಗಳೂರು ಮತ್ತು ಸ್ಯಾನ್ ಫ್ರಾನ್ರ್ಸಿಸ್ಕೊ ನಡುವೆ ನವೋದ್ಯಮಗಳು ಹಾಗೂ ಆವಿಷ್ಕಾರಗಳಲ್ಲಿ ಸಮಾನ ಸಂಗತಿ ಇದೆ ಎಂದು ಹೇಳಿದರು.

ಅಲ್ಲಿನ ಪರಿಸರ, ವಾತಾವರಣ, ಎಕೋಸಿಸ್ಟಂಗಳಲ್ಲಿನ ಆವಿಷ್ಕಾರಗಳನ್ನು ಕರ್ನಾಟಕದಲ್ಲಿ ಅಳವಡಿಸುವುದು, ಇಲ್ಲಿನ ಕಲಿಕೆಗಳನ್ನು ಅಲ್ಲಿ ಬಳಸುವುದು, ವಿಶೇಷವಾಗಿ ಕರ್ನಾಟಕದಲ್ಲಿ ಬೆಳೆಯುತ್ತಿರುವ ನವೋದ್ಯಮಗಳಿಗೆ ಅಮೆರಿಕದಲ್ಲಿ ಮಾರುಕಟ್ಟೆ ಕಲ್ಪಿಸುವ ಸಾಧ್ಯತೆಗಳನ್ನು ಪರಿಶೀಲಿಸುವ ಬಗ್ಗೆಯೂ ಚರ್ಚೆ ನಡೆಯಿತು ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.

ವಾಷಿಂಗ್ಟನ್ ಜೊತೆ ಫಿಂಟೆಕ್ಸ್ ಹಾಗೂ ಎಐ, ಆಸ್ಟಿನ್ ಜೊತೆ ಸೆಮಿಕಂಡಕ್ಟರ್ ಉತ್ಪಾದನೆ ಸೇರಿದಂತೆ ಮಾರುಕಟ್ಟೆ ಜೊತೆಗೆ ಸ್ಕಿಲ್ ಕಾರಿಡಾರ್ ಮಾಡುವ ಬಗ್ಗೆ ಮಾತುಕತೆ ನಡೆಯಿತು ಎಂದು ಪ್ರಿಯಾಂಕ್ ಖರ್ಗೆ ವಿವರಿಸಿದರು.

ಬೆಂಗಳೂರಿನಲ್ಲಿ ಯು.ಎಸ್ ರಾಯಭಾರಿ ಕಚೇರಿಯನ್ನು ಆದ್ಯತೆ ಮೇರೆಗೆ ಆರಂಭಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎರಿಕ್ ಗಾರ್ಸೆಟಿ ಭರವಸೆ ನೀಡಿದ್ದಾರೆ. ಬೆಂಗಳೂರಿನಲ್ಲಿ ರಾಯಭಾರಿ ಕಚೇರಿ ಮಾಡುವುದರಿಂದ ಕನ್ನಡಿಗರಿಗೆ ಉದ್ಯೋಗಾವಕಾಶಗಳು ಹೆಚ್ಚುತ್ತವೆ, ಕನ್ನಡಿಗ ವಿದ್ಯಾರ್ಥಿಗಳಿಗೆ ಹಾಗೂ ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ವಿಸಾ ಲಭ್ಯತೆ ಹೆಚ್ಚುತ್ತದೆ ಎಂಬ ರಾಜ್ಯದ ಅಭಿಪ್ರಾಯವನ್ನು ಅವರು ಸಮ್ಮತಿಸಿದರು ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.

ಅಮೆರಿಕ ರಾಯಭಾರ ಕಚೇರಿ ತೆರೆಯಲು ಕರ್ನಾಟಕ ಹಾಗೂ ಬೆಂಗಳೂರು ನಮಗೆ ನೈಸರ್ಗಿಕ ಆಯ್ಕೆ ಎಂದು ಅವರು ಹೇಳಿದರು. ಕರ್ನಾಟಕ ಈಗ ವಿಶ್ವದ ನಾಲ್ಕನೆ ಅತಿ ದೊಡ್ಡ ತಂತ್ರಜ್ಞಾನ ಕೇಂದ್ರವಾಗಿರುವುದರಿಂದ ಹಾಗೂ ಅಮೆರಿಕ ಹಾಗೂ ಕರ್ನಾಟಕದ ನಡುವೆ ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಮ್ಯತೆ ಇರುವುದರಿಂದ ಬೆಂಗಳೂರು ನಮಗೆ ಸ್ವಾಭಾವಿಕ ಆಯ್ಕೆ ಎಂಬ ಅಭಿಪ್ರಾಯವೂ ಅವರದ್ದಾಗಿತ್ತು ಎಂದು ಸಚಿವರು ತಿಳಿಸಿದರು.

ಎಐ ಕ್ಷೇತ್ರದಲ್ಲಿ ಬೆಂಗಳೂರು ಈಗ ಜಗತ್ತಿನ ಐದು ಪ್ರಮುಖ ನಗರಗಳಲ್ಲಿ ಒಂದಾಗಿದೆ. ಕೌಶಲ್ಯ ಅಭಿವೃದ್ಧಿ ಹಾಗೂ ಎಐ ಕೌಶಲ್ಯದಲ್ಲಿ ಪ್ರಪಂಚದಲ್ಲಿ ಮೂರನೇ ಸ್ಥಾನದಲ್ಲಿದ್ದೇವೆ, ಜೈವಿಕ ತಂತ್ರಜ್ಞಾನ, ಬಾಹ್ಯಾಕಾಶ, ರಕ್ಷಣೆ ಮುಂತಾದ ಕ್ಷೇತ್ರಗಳಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದರಿಂದ ಬಂಡವಾಳ ಹಾಗೂ ವ್ಯಾಪಾರೋದ್ಯಮಕ್ಕೆ ಭಾರತದಲ್ಲಿ ಕರ್ನಾಟಕ ಸೂಕ್ತವಾಗಿದೆ ಎಂದು ರಾಯಭಾರಿ ಎರಿಕ್ ಗಾರ್ಸೆಟಿ ಅಭಿಪ್ರಾಯ ಹೊಂದಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.

ನಮ್ಮ ಮಾನವ ಸಂಪನ್ಮೂಲ ಇಡೀ ಜಗತ್ತಿಗೆ ಮಾದರಿಯಾಗಿದೆ ಎಂದೂ ರಾಯಭಾರಿಗಳು ಮೆಚ್ಚಿಕೊಂಡಿದ್ದಾರೆ, ಕರ್ನಾಟಕದಲ್ಲಿ ರಾಯಭಾರಿ ಕಚೇರಿ ತೆರೆಯುವದರಿಂದ ಅಮೆರಿಕ ಹಾಗೂ ಭಾರತಕ್ಕೆ ನೆರವಾಗುವುದು ಎಂದೂ ಅವರು ಹೇಳಿದ್ದಾರೆ. ಬೆಂಗಳೂರಿನಲ್ಲಿ ರಾಯಭಾರಿ ಕಚೇರಿ ತೆರೆಯಲು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನೀಡಿದ್ದ ಸಂದೇಶವನ್ನು ನಾನು ಅಮೆರಿಕ ರಾಯಭಾರಿಗೆ ತಲುಪಿಸಿದ್ದೇನೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X