Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಕಾಯಕ ಪಂಚಾಯಿತಿ’ ಪರಿಕಲ್ಪನೆ...

‘ಕಾಯಕ ಪಂಚಾಯಿತಿ’ ಪರಿಕಲ್ಪನೆ ಅನುಷ್ಠಾನಕ್ಕೆ ಚಿಂತನೆ : ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ23 Oct 2024 8:51 PM IST
share
‘ಕಾಯಕ ಪಂಚಾಯಿತಿ’ ಪರಿಕಲ್ಪನೆ ಅನುಷ್ಠಾನಕ್ಕೆ ಚಿಂತನೆ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗಾಂಧೀ ಮತ್ತು ಬಸವಣ್ಣನವರ ವಿಚಾರಗಳಿಗೆ ಸಂಬಂಧಿಸಿದಂತೆ ಕಾಯಕ ಪಂಚಾಯಿತಿ ಪರಿಕಲ್ಪನೆಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೇಸ್ ಅಧಿವೇಶನದ ನೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬುಧವಾರ ವಿಧಾನಸೌಧದಲ್ಲಿ ನಡೆದ ಶತಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ಆಗಿ 30 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರಾದೇಶಿಕವಾರು ರಾಷ್ಟ್ರೀಯ ಸ್ವರಾಜ್ ಸಮ್ಮೇಳನಗಳನ್ನು ಆಯೋಜಿಸಲಾಗುವುದು ಎಂದರು.

ಹೊಸ ತಂತ್ರಜ್ಞಾನದ ಮೂಲಕ ಬೆರಳ ತುದಿಯಲ್ಲಿ ಗಾಂಧೀಜಿಯವರ ಮಹತ್ವ ಕುರಿತ ಮಾಹಿತಿಗಳನ್ನು ಯುವಜನರು ಮತ್ತು ಹೊಸ ಪೀಳಿಗೆಗೆ ಮರುಪರಿಚಯಿಸುವ ಹಾಗೂ ಜಾಗತಿಕವಾಗಿ ಸುಮಾರು 100ಕ್ಕೂ ಹೆಚ್ಚು ದೇಶಗಳಲ್ಲಿರುವ ಗಾಂಧೀಜಿಯವರ ಪ್ರತಿಮೆ ಮತ್ತು ಸಂಬಂಧಿತ ಸ್ಥಳಗಳ ಕುರಿತ ಮಾಹಿತಿಯನ್ನು ಯುವಜನರು ಮತ್ತು ಹೊಸಪೀಳಿಗೆಗೆ ಪರಿಚಯಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಗಳ ಮೂಲಕ ಚಟುವಟಿಕೆಗಳನ್ನು ಕೈಗೊಳ್ಳಲಾಗುವುದು ಎಂದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾತನಾಡಿ, ರಾಜ್ಯದಲ್ಲಿ 57 ಸಾವಿರಕ್ಕೂ ಹೆಚ್ಚು ಶಾಲೆಗಳಿವೆ. ಶೈಕ್ಷಣಿಕ ಕ್ಯಾಲೆಂಡರ್‌ ಗೆ ವ್ಯತ್ಯಯವಾಗದಂತೆ ಗಾಂಧೀಜಿಯವರ ಕುರಿತು ಪ್ರಬಂಧ, ಭಾಷಣ, ಚಿತ್ರಕಲೆ ಮತ್ತಿತರ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಗಾಂಧೀಜಿಯವರ ಉಕ್ತಿಗಳು ಹಾಗೂ ಅವರು ಹೇಳಿದ ಏಳು ಸಾಮಾಜಿಕ ಪಾತಕಗಳ ಕುರಿತು ಡಿಜಿಟಲ್ ಮುದ್ರಣಗಳನ್ನು ಎಲ್ಲ ಸರಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಅನಾವರಣಗೊಳಿಸಲು ಕ್ರಮ ವಹಿಸಲಾಗುವುದು ಎಂದರು.

ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಮಾತನಾಡಿ, ಇಲಾಖೆಯ ವಿವಿಧ ಅಕಾಡೆಮಿಗಳ ಮೂಲಕ ಹಿಂದಿ, ಉರ್ದು, ತುಳು, ಕೊಡವ, ಕೊಂಕಣಿ, ಲಂಬಾಣಿ ಮತ್ತಿತರ ಭಾಷೆಗಳಲ್ಲಿ ಮಹಾತ್ಮಾ ಗಾಂಧೀಜಿಯವರ ಕುರಿತು ಕಿರುಪುಸ್ತಕಗಳನ್ನು ಪ್ರಕಟಿಸಿ ವಿತರಿಸಲಾಗುವುದು ಎಂದರು.

ಅರಣ್ಯ, ಜೀವಿ ಪರಿಸ್ಥಿತಿ ಹಾಗೂ ಪರಿಸರ ಸಚಿವ ಈಶ್ವರ್ ಖಂಡ್ರೆ ಮಾತನಾಡಿ, ಗಾಂಧಿ ಭಾರತ ಕಾರ್ಯಕ್ರಮದ ಸ್ಮರಣಾರ್ಥ ರಾಜ್ಯದ ಪ್ರಮುಖ ಸ್ಥಳಗಳಲ್ಲಿ 100 ಲಕ್ಷ ಸಸಿಗಳನ್ನು ಹೆಚ್ಚುವರಿಯಾಗಿ ನೆಡಲು ಕ್ರಮವಹಿಸಲಾಗುವುದು ಎಂದರು.

ಇಂಧನ ಸಚಿವ ಕೆ.ಜೆ.ಜಾರ್ಜ್ ಮಾತನಾಡಿ, ಶತಮಾನೋತ್ಸವ ಸಂದರ್ಭದಲ್ಲಿ ಬೆಳಗಾವಿ ನಗರದಲ್ಲಿ ಆಕರ್ಷಕವಾಗಿ ವಿದ್ಯುತ್ ದೀಪಾಲಂಕಾರ ಮಾಡಲಾಗುವುದು. ಗಾಂಧೀಜಿಯವರು ಕರ್ನಾಟಕದಲ್ಲಿ ಭೇಟಿ ನೀಡಿದ ಪ್ರಮುಖ ಸ್ಥಳಗಳಲ್ಲಿ ಸ್ಥಳೀಯ ಆಡಳಿತ ಹಾಗೂ ಸಂಸ್ಥೆಗಳ ಸಹಯೋಗದಲ್ಲಿ ದೀಪಾಲಂಕಾರ ಮಾಡಲು ಕ್ರಮ ವಹಿಸುವುದಾಗಿ ತಿಳಿಸಿದರು.

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮಾತನಾಡಿ, ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಗಾಂಧೀ ಅಧ್ಯಯನ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಈಗಾಗಲೇ ಕೆಲವು ವಿಶ್ವವಿದ್ಯಾಲಯಗಳಲ್ಲಿರುವ ಗಾಂಧೀ ಅಧ್ಯಯನ ವಿಭಾಗಗಳ ಚಟುವಟಿಕೆಗಳನ್ನು ಪುನಶ್ಚೇತನಗೊಳಿಸಲಾಗುವುದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X