Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ನ್ಯಾಯಬೆಲೆ ಅಂಗಡಿ’ಗಳಲ್ಲಿನ ಸರ್ವರ್...

‘ನ್ಯಾಯಬೆಲೆ ಅಂಗಡಿ’ಗಳಲ್ಲಿನ ಸರ್ವರ್ ಸಮಸ್ಯೆ ಪರಿಹಾರಕ್ಕೆ ಕ್ರಮ : ಸಚಿವ ರಿಝ್ವಾನ್ ಅರ್ಶದ್

ವಾರ್ತಾಭಾರತಿವಾರ್ತಾಭಾರತಿ27 Aug 2026 9:22 PM IST
share
‘ನ್ಯಾಯಬೆಲೆ ಅಂಗಡಿ’ಗಳಲ್ಲಿನ ಸರ್ವರ್ ಸಮಸ್ಯೆ ಪರಿಹಾರಕ್ಕೆ ಕ್ರಮ : ಸಚಿವ ರಿಝ್ವಾನ್ ಅರ್ಶದ್

ಬೆಂಗಳೂರು : ನ್ಯಾಯಬೆಲೆ ಅಂಗಡಿಗಳಲ್ಲಿನ ಸರ್ವರ್ ಸಮಸ್ಯೆಯಿಂದ ಸಾರ್ವಜನಿಕರಿಗೆ ಪಡಿತರ ಪಡೆಯಲು ತೊಂದರೆಯಾಗುತ್ತಿರುವ ಕುರಿತು ಸಾರ್ವಜನಿಕರಿಂದ ಹಲವು ದೂರುಗಳು ಬಂದಿರುವ ಹಿನ್ನೆಲೆಯಲ್ಲಿ, ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ತಾಂತ್ರಿಕ ತಂಡದೊಂದಿಗೆ ಆದ್ಯತೆ ಮೇರೆಗೆ ಸಭೆ ನಡೆಸಿ ಚರ್ಚಿಸಲಾಗಿದೆ ಎಂದು ಸಚಿವ ರಿಝ್ವಾನ್ ಅರ್ಶದ್ ತಿಳಿಸಿದ್ದಾರೆ.

ಅಸ್ತಿತ್ವದಲ್ಲಿರುವ ಸಾಫ್ಟ್‌ ವೇರ್‌ ನ ಸಾಮಥ್ರ್ಯವನ್ನು ಪರಿಶೀಲಿಸಲು ಲೋಡ್ ಟೆಸ್ಟಿಂಗ್ ನಡೆಸಿ, ಅಗತ್ಯಕ್ಕೆ ಅನುಗುಣವಾಗಿ ಸಾಫ್ಟ್‌ ವೇರ್ ಅನ್ನು ಉನ್ನತೀಕರಿಸುವಂತೆ ತಾಂತ್ರಿಕ ತಂಡ ಸಲಹೆ ನೀಡಿದೆ. ಸರ್ವರ್ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಕಲ್ಪಿಸಿ, ಅರ್ಹ ಫಲಾನುಭವಿಗಳಿಗೆ ಯಾವುದೇ ಅನಗತ್ಯ ತೊಂದರೆಯಾಗದಂತೆ ಸಕಾಲದಲ್ಲಿ ಪಡಿತರ ದೊರೆಯುವಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯಾದ್ಯಂತ ಪಡಿತರ ವಿತರಣಾ ವ್ಯವಸ್ಥೆಯನ್ನು ಮತ್ತಷ್ಟು ಸುಗಮ, ಪರಿಣಾಮಕಾರಿ ಹಾಗೂ ವಿಶ್ವಾಸಾರ್ಹಗೊಳಿಸಲು ಸಾಫ್ಟ್‌ ವೇರ್ ಉನ್ನತೀಕರಣ ಸೇರಿದಂತೆ ಅಗತ್ಯ ತಾಂತ್ರಿಕ ಕ್ರಮಗಳನ್ನು ಕೈಗೊಳ್ಳಲಾಗುವುದು. ಸಾರ್ವಜನಿಕರಿಗೆ ಉತ್ತಮ ಹಾಗೂ ತಡೆರಹಿತ ಸೇವೆ ಒದಗಿಸುವುದು ಸರಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ರಿಝ್ವಾನ್ ಅರ್ಶದ್ ತಿಳಿಸಿದ್ದಾರೆ.

ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲಾವಾರು ನಿಗದಿಪಡಿಸಿರುವ ಆಹಾರ ಧಾನ್ಯಗಳ ಕೋಟಾದ ಎತ್ತುವಳಿಯನ್ನು ಚುರುಕುಗೊಳಿಸಲಾಗುತ್ತಿದೆ. ಧಾರವಾಡ, ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ಗದಗ, ಹಾಸನ, ಉಡುಪಿ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳು ಈಗಾಗಲೇ ಶೇ.100ರಷ್ಟು ಆಹಾರ ಧಾನ್ಯಗಳನ್ನು ಎತ್ತುವಳಿ ಮಾಡಿಕೊಂಡು ಮುಂಚೂಣಿಯಲ್ಲಿವೆ ಎಂದು ಅವರು ಹೇಳಿದ್ದಾರೆ.

ಕಡಿಮೆ ಪ್ರಮಾಣದ ಎತ್ತುವಳಿ ಇರುವ ಜಿಲ್ಲೆಗಳಲ್ಲಿ ಪ್ರಕ್ರಿಯೆಯನ್ನು ಮತ್ತಷ್ಟು ವೇಗಗೊಳಿಸಿ, ಈ ತಿಂಗಳ ಅಂತ್ಯದೊಳಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಶೇ.100ರಷ್ಟು ಆಹಾರ ಧಾನ್ಯಗಳ ಎತ್ತುವಳಿ ಪೂರ್ಣಗೊಳ್ಳುವಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ರಿಝ್ವಾನ್ ಅರ್ಶದ್ ತಿಳಿಸಿದ್ದಾರೆ

ನ್ಯಾಯಬೆಲೆ ಅಂಗಡಿಗಳಲ್ಲಿನ ಸರ್ವರ್ ಸಮಸ್ಯೆಯಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಯನ್ನು ನಮ್ಮ ಸರಕಾರ ಗಂಭೀರವಾಗಿ ಪರಿಗಣಿಸಿದೆ. ಕೇಂದ್ರ ಸರಕಾರದ ಸೂಚನೆಯಂತೆ ಎರಡು ತಿಂಗಳ ಪಡಿತರವನ್ನು ಒಟ್ಟಿಗೆ ವಿತರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಸರ್ವರ್ ಮೇಲೆ ಹೆಚ್ಚಿದ ಒತ್ತಡ ಉಂಟಾಗಿದೆ ಎಂದು ಅವರು ಹೇಳಿದ್ದಾರೆ.

ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಪಾಲುದಾರರೊಂದಿಗೆ ಸಭೆ ನಡೆಸಿ, ಸಾಫ್ಟ್‌ ವೇರ್‌ ನ ಸಾಮಥ್ರ್ಯವನ್ನು ಪರಿಶೀಲಿಸಲು ಲೋಡ್ ಟೆಸ್ಟಿಂಗ್ ನಡೆಸಲಾಗಿದೆ. ಅಗತ್ಯವಿರುವಂತೆ ಸಾಫ್ಟ್‌ ವೇರ್ ಉನ್ನತೀಕರಣಕ್ಕೆ ತಾಂತ್ರಿಕ ತಂಡಕ್ಕೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯಾದ್ಯಂತ ಪಡಿತರ ವಿತರಣಾ ವ್ಯವಸ್ಥೆಯನ್ನು ಹೆಚ್ಚು ಸುಗಮ, ವೇಗ, ಪರಿಣಾಮಕಾರಿ ಹಾಗೂ ವಿಶ್ವಾಸಾರ್ಹಗೊಳಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು. ಜನರ ಹಕ್ಕಿನ ಪಡಿತರವನ್ನು ತಲುಪಿಸುವಲ್ಲಿ ಯಾವುದೇ ರಾಜಿ ಇಲ್ಲ. ಅರ್ಹ ಪ್ರತಿಯೊಬ್ಬ ಫಲಾನುಭವಿಗೂ ಸಕಾಲದಲ್ಲಿ ಪಡಿತರ ತಲುಪಿಸುವುದು ನಮ್ಮ ಬದ್ಧತೆ ಎಂದು ರಿಝ್ವಾನ್ ಅರ್ಶದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags

Minister Rizwan Arshad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X