Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದಲ್ಲಿ ʼಮಂಕಿ ಫಾಕ್ಸ್ʼ ಆತಂಕ ಬೇಡ...

ರಾಜ್ಯದಲ್ಲಿ ʼಮಂಕಿ ಫಾಕ್ಸ್ʼ ಆತಂಕ ಬೇಡ : ಸಚಿವ ಶರಣ ಪ್ರಕಾಶ್‌ ಪಾಟೀಲ್‌

ವಾರ್ತಾಭಾರತಿವಾರ್ತಾಭಾರತಿ23 Aug 2024 3:55 PM IST
share
ರಾಜ್ಯದಲ್ಲಿ ʼಮಂಕಿ ಫಾಕ್ಸ್ʼ  ಆತಂಕ ಬೇಡ : ಸಚಿವ ಶರಣ ಪ್ರಕಾಶ್‌ ಪಾಟೀಲ್‌

ಬೆಂಗಳೂರು : ಆಫ್ರಿಕಾ ಖಂಡದಲ್ಲಿ ಆತಂಕ ಮೂಡಿಸಿರುವ ಮಂಕಿ ಫಾಕ್ಸ್ ಬಗ್ಗೆ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ವಿಶ್ವ ಆರೋಗ್ಯಸಂಸ್ಥೆ ಘೋಷಿಸಿದ್ದರೂ ಈ ಸೋಂಕು ಭಾರತದಲ್ಲಿ ಹರಡುವ ಅಪಾಯ ಕಡಿಮೆ. ಹೀಗಾಗಿ ಯಾರೊಬ್ಬರು ಆತಂಕಕ್ಕೆ ಒಳಗಾಗಬಾರದೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ ಪಾಟಿಲ್‌ ತಿಳಿದಿದ್ದಾರೆ.

ಶುಕ್ರವಾರ ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮಂಕಿಫಾಕ್ಸ್ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆ ನಡೆಸಿ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

ಕಳೆದ ಆ.14ರಂದು ವಿಶ್ವ ಆರೋಗ್ಯ ಸಂಸ್ಥೆ ಮಂಕಿಫಾಕ್ಸ್‌ ಅನ್ನು ಜಾಗತಿಕ ಆರೋಗ್ಯ ತುರ್ತುಸ್ಥಿತಿಯಾಗಿ ಘೋಷಿಸಿದೆ. ಆಫ್ರಿಕಾದಲ್ಲಿ ಹರಡಿರುವ ಕಾಣಿಸಿಕೊಂಡಿರುವ ಸೋಂಕನ್ನು ಎದುರಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು.

ಈ ಸೋಂಕು ಇಲ್ಲಿಯವರೆಗೆ ಭಾರತದಲ್ಲಿ ಕಂಡು ಬಂದಿಲ್ಲ. ಈ ಹಿನ್ನೆಲೆ ಯಾವುದೇ ಆತಂಕ ಬೇಡ. ಎನ್‌ಸಿಡಿಸಿ ಜಂಟಿ ನಿರ್ವಹಣೆ ಸಂಸ್ಥೆ ಇದರ ಹರಡುವಿಕೆ ಅಪಾಯದ ಮೌಲ್ಯಮಾಪನ ನಡೆಸುತ್ತಿದೆ. ಒಂದು ವೇಳೆ ಪ್ರಕರಣಗಳಿದ್ದರೆ ಪ್ರವೇಶ ಹಂತದಲ್ಲೇ ಎಚ್ಚರಿಸಲಾಗುವುದು ಎಂದು ಪಾಟೀಲ್‌ ಮಾಹಿತಿ ನೀಡಿದರು.

“ಸರ್ಕಾರದ ಮಾರ್ಗಸೂಚಿ ಪ್ರಕಾರ ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗಿದೆ. ಮಂಕಿಫಾಕ್ಸ್‌ ಬಗ್ಗೆ ಬಹಳಷ್ಟು ಸುದ್ದಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಸಂಬಂಧ ಅಧಿಕಾರಿಗಳ ಸಭೆ ನಡೆಸಿ ಸೂಕ್ತ ನಿರ್ದೇಶನ ನೀಡಲಾಗಿದೆ. ನಮ್ಮ ರಾಜ್ಯದಲ್ಲಿ ಮಂಕಿ ಫಾಕ್ಸ್‌ ಒಂದು ಪ್ರಕರಣವೂ ಕಂಡು ಬಂದಿಲ್ಲ. ಇದರಿಂದ ರಾಜ್ಯದ ಜನರು ಆತಂಕಕ್ಕೆ ಒಳಗಾಗುವುದು ಬೇಡ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇದರ ಟೆಸ್ಟ್‌ ಮಾಡುವ ಸೌಲಭ್ಯವಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಯಲ್ಲಿ ಬೆಡ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ” ಎಂದು ಸಚಿವರು ಹೇಳಿದರು.

ಇದು ವೈರಲ್‌ ಇನ್ಫೆಕ್ಷನ್ ಆಗಿರಲಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗ ಪರೀಕ್ಷೆ ಉಚಿತವಾಗಿರುತ್ತದೆ. ಸದ್ಯಕ್ಕೆ 50 ಹಾಸಿಗೆಯ ಐದು ಐಸಿಯು ವ್ಯವಸ್ಥೆ ಮಾಡಲಾಗಿದೆ. ಇಲ್ಲಿಯವರೆಗೂ ಒಂದೇ ಒಂದು ಕೇಸ್‌‍ ಪತ್ತೆಯಾಗಿಲ್ಲದಿದ್ದರೂ ಏಕಾಏಕಿ ಕಂಡುಬಂದರೆ ಸಮಸ್ಯೆಯಾಗದಿರಲಿ ಎಂಬ ಉದ್ದೇಶದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಪಾಟೀಲ್ ತಿಳಿಸಿದರು.

ಈ ಸಂಬಂಧ ಆರೋಗ್ಯ ಇಲಾಖೆ ಜೊತೆಗೂ ಚರ್ಚೆ ನಡೆಸಲಾಗಿದೆ. ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್‌ ಮಾಡುವ ಬಗ್ಗೆ ಆರೋಗ್ಯಇಲಾಖೆಗೆ ಕೇಂದ್ರ ಸರ್ಕಾರ ಸೂಚನೆ ನೀಡುತ್ತದೆ ಎಂದು ಸಚಿವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X