Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾಡುಗೊಲ್ಲ ಅಭಿವೃದ್ಧಿ ನಿಗಮ | 50 ಕೋಟಿ...

ಕಾಡುಗೊಲ್ಲ ಅಭಿವೃದ್ಧಿ ನಿಗಮ | 50 ಕೋಟಿ ರೂ.ಕ್ರಿಯಾ ಯೋಜನೆಗೆ ಅನುಮೋದನೆ : ಸಚಿವ ಶಿವರಾಜ್ ತಂಗಡಗಿ

ವಾರ್ತಾಭಾರತಿವಾರ್ತಾಭಾರತಿ19 July 2024 7:04 PM IST
share
ಕಾಡುಗೊಲ್ಲ ಅಭಿವೃದ್ಧಿ ನಿಗಮ |  50 ಕೋಟಿ ರೂ.ಕ್ರಿಯಾ ಯೋಜನೆಗೆ ಅನುಮೋದನೆ : ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು : ಕಾಡುಗೊಲ್ಲ ಅಭಿವೃದ್ಧಿ ನಿಗಮದ ವತಿಯಿಂದ 50 ಕೋಟಿ ರೂ.ಗಳ ಅನುದಾನದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲು ಜೂ.28ರಂದು ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ್ ತಂಗಡಗಿ ಉತ್ತರಿಸಿದ್ದಾರೆ.

ಶುಕ್ರವಾರ ವಿಧಾನ ಪರಿಷತ್‍ನಲ್ಲಿ ಕಾಂಗೆಸ್‍ನ ಸದಸ್ಯ ಎಂ. ನಾಗರಾಜ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಡುಗೊಲ್ಲ ಅಭಿವೃದ್ದಿ ನಿಗಮಕ್ಕೆ 2022-23ನೆ ಸಾಲಿನಲ್ಲಿ ಸರಕಾರವು ನಿಗಮಕ್ಕೆ 20 ಕೋಟಿ ರೂ.ಗಳನ್ನು ಮೀಸಲಿಟ್ಟು, 20 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದರು.

2023-24ನೆ ಸಾಲಿನಲ್ಲಿ ನಿಗಮಕ್ಕೆ 15 ಕೋಟಿ ರೂ.ಗಳನ್ನು ಮೀಸಲಿಟ್ಟು, 15 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. 2024-25ನೆ ಸಾಲಿನಲ್ಲಿ 15 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಈಗಾಗಲೇ 2022-23ನೆ ಮತ್ತು 2023-24ನೆ ಸಾಲಿನಲ್ಲಿ ಬಿಡುಗಡೆಯಾದ 35 ಕೋಟಿ ರೂ. ಹಾಗೂ ಪ್ರಸಕ್ತ ಸಾಲಿನ 15 ಕೋಟಿ ರೂ. ಸೇರಿ 50 ಕೋಟಿ ರೂ.ಗಳ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದರು.

ಸಮುದಾಯಕ್ಕೆ ಮೀಸಲಿಟ್ಟ ಹಣ ಇನ್ನು ಬಿಡುಗಡೆಯಾಗದಿರಲು ಕೆಲವು ತಾಂತ್ರಿಕ ಕಾರಣಗಳು ತೊಡಕ್ಕಾಗಿವೆ. ಈ ಸಂಬಂಧ ಅಧಿಕಾರಿಗಳ ಜೊತೆ ಚರ್ಚಿಸಿ ಮುಂದಿನ ದಿನಗಳಲ್ಲಿ ಸಮುದಾಯಕ್ಕೆ ಅನುಕೂಲವಾಗುವಂತಹ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುವುದು ಎಂದರು.

ಕಾಡುಗೊಲ್ಲ ಅಭಿವೃದ್ಧಿ ನಿಗಮಕ್ಕೆ ಸದ್ಯ ನಾನೇ ಅಧ್ಯಕ್ಷನಾಗಿದ್ದೇನೆ. ಈ ಸಮುದಾಯದ ಬಗ್ಗೆ ಕಳಕಳಿ ಇರುವ ವ್ಯಕ್ತಿಯೊಬ್ಬರನ್ನು ಅಧ್ಯಕ್ಷರನ್ನಾಗಿ ಮಾಡಬೇಕು ಎಂಬ ಬೇಡಿಕೆಯೂ ಇದೆ. ಶೀಘ್ರದಲ್ಲೇ ಇದರ ಬಗ್ಗೆ ಕ್ರಮಕೈಗೊಳ್ಳಲಾಗುವುದು.

ಈ ಸಮುದಾಯವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಬೇಕೆಂಬ ಸದಸ್ಯ ನಾಗರಾಜ್ ಅವರ ಮನವಿಗೆ ಉತ್ತರಿಸಿದ ಅವರು, ಈಗಾಗಲೇ ರಾಜ್ಯ ಸರಕಾರವು ಕೇಂದ್ರಕ್ಕೆ ಶಿಫಾರಸ್ಸನ್ನು ಮಾಡಿದೆ. ಮುಖ್ಯಮಂತ್ರಿಗಳೂ ಸಂಬಂಧಪಟ್ಟವರ ಜೊತೆ ಚರ್ಚಿಸಿದ್ದಾರೆ. ಕೇಂದ್ರವು ಸ್ಪಂದಿಸುತ್ತದೆ ಎಂಬ ವಿಶ್ವಾಸವನ್ನು ತಂಗಡಗಿ ವ್ಯಕ್ತಪಡಿಸಿದರು.

Tags

Shivraj ThandagiKadugolla Corporationಶಿವರಾಜ್ ತಂಗಡಗಿ
share
ವಾರ್ತಾಭಾರತಿ
ವಾರ್ತಾಭಾರತಿ
Next Story
X