Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಶೀಘ್ರದಲ್ಲೇ ಎಪಿಎಂಸಿಗಳ ಡಿಜಿಟಲೀಕರಣ...

ಶೀಘ್ರದಲ್ಲೇ ಎಪಿಎಂಸಿಗಳ ಡಿಜಿಟಲೀಕರಣ ಕಾರ್ಯ ಪೂರ್ಣ : ಸಚಿವ ಶಿವಾನಂದ ಪಾಟೀಲ್‌

ವಾರ್ತಾಭಾರತಿವಾರ್ತಾಭಾರತಿ27 Sept 2024 3:47 PM IST
share
  • ಶೀಘ್ರದಲ್ಲೇ ಎಪಿಎಂಸಿಗಳ ಡಿಜಿಟಲೀಕರಣ ಕಾರ್ಯ ಪೂರ್ಣ : ಸಚಿವ ಶಿವಾನಂದ ಪಾಟೀಲ್‌
  • ಶೀಘ್ರದಲ್ಲೇ ಎಪಿಎಂಸಿಗಳ ಡಿಜಿಟಲೀಕರಣ ಕಾರ್ಯ ಪೂರ್ಣ : ಸಚಿವ ಶಿವಾನಂದ ಪಾಟೀಲ್‌

ಬೆಂಗಳೂರು : ರಾಜ್ಯದಲ್ಲಿರುವ ಎಪಿಎಂಸಿಗಳ ಡಿಜಟಲೀಕರಣಗೊಳಿಸುವ ನಿಟ್ಟಿನಲ್ಲಿ ಈಗಾಗಲೇ ಕಾರ್ಯ ಪ್ರಾರಂಭಿಸಲಾಗಿದ್ದು, ಶೀಘ್ರದಲ್ಲೇ ಇದನ್ನು ಪೂರ್ಣಗೊಳಿಸಲಾಗುವುದು ಎಂದು ಕೃಷಿ ಮಾರುಕಟ್ಟೆ, ಜವಳಿ ಮತ್ತು ಸಕ್ಕರೆ ಇಲಾಖೆ ಸಚಿವ ಶಿವಾನಂದ ಪಾಟೀಲ್‌ ತಿಳಿಸಿದರು.

ಶುಕ್ರವಾರ ಎಫ್‌ಕೆಸಿಸಿಐನ 107ನೇ ಸರ್ವಸದಸ್ಯರ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, "ಐದು ಸಾವಿರ ಸದಸ್ಯರನ್ನು ಹೊಂದಿರುವ ಕೈಗಾರಿಕಾ ಸಂಸ್ಥೆ ರಾಜ್ಯದ ಆರ್ಥಿಕ ಅಭಿವೃದ್ದಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದೆ. ನಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ರೀತಿಯಲ್ಲೇ ರಾಜ್ಯದ ಕೃಷಿ ಮಾರುಕಟ್ಟೆಯನ್ನು ಪುನರುಜ್ಜೀವನಗೊಳಿಸು ಅಗತ್ಯ ಕಾನೂನು ಕೂಡಾ ಜಾರಿಗೆ ತಂದಿದ್ದೇವೆ. ಈ ವಿಷಯದಲ್ಲಿ ಎಫ್‌ಕೆಸಿಸಿಐ ಬಹಳಷ್ಟು ಸಲಹೆ ಹಾಗೂ ಸೂಚನೆಗಳನ್ನು ನೀಡಿದ್ದನ್ನು ಇಲ್ಲಿ ಹೃದಯಪೂರ್ವಕವಾಗಿ ಸ್ಮರಿಸಿಕೊಳ್ಳುತ್ತೇನೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಈ ಬಗ್ಗೆ ಸಭೆಗಳನ್ನು ನಡೆಸುವ ಮೂಲಕ ಅಗತ್ಯ ಸಲಹೆಗಳನ್ನು ಸಂಗ್ರಹಿಸಲಾಗಿದೆ. ಇದರಲ್ಲಿ ಮಾರುಕಟ್ಟೆಯ ಡಿಜಟಲೀಕರಣದ ಬೇಡಿಕೆ ಪ್ರಮುಖವಾಗಿದೆ. ಈಗಾಗಲೇ ಈ ಕಾರ್ಯವನ್ನು ಪ್ರಾರಂಭಿಸಲಾಗಿದ್ದು, ಈ ವ್ಯವಸ್ಥೆಯಲ್ಲಿ ಹಲವಾರು ಪಾಲುದಾರರು ಇದ್ದಾರೆ. ಯಾರಿಗೂ ಸಮಸ್ಯೆ ಆಗದೇ ಇರುವ ರೀತಿಯಲ್ಲಿ ಹೊಸ ವ್ಯವಸ್ಥೆಯನ್ನು ಅಳವಡಿಸುವ ಕಾರ್ಯ ಮಾಡಬೇಕಾಗಿದ್ದು, ಆ ನಿಟ್ಟಿನಲ್ಲಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ" ಎಂದು ತಿಳಿಸಿದರು.

ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್‌ ಮಾತನಾಡಿ, ʼಬೆಂಗಳೂರು ನಗರ ವಿಶ್ವದಲ್ಲೇ ವಿಶೇಷ ಸ್ಥಾನ ಪಡೆದುಕೊಳ್ಳುವ ನಿಟ್ಟಿನಲ್ಲಿ ಎಫ್‌ಕೆಸಿಸಿಐ ಕೊಡುಗೆ ಅಪಾರವಾಗಿದೆ. ಯಾವುದೇ ನಗರ ತಾನೇ ತಾನಾಗಿ ಅಭಿವೃದ್ದಿ ಆಗಲು ಸಾಧ್ಯವಿಲ್ಲ. ಆರ್ಥಿಕ ಚಟುವಟಿಕೆಗಳು ನಡೆಯುವುದರಿಂದ ಮಾತ್ರ ಅಭಿವೃದ್ದಿ ಸಾಧ್ಯ. ಎಫ್‌ಕೆಸಿಸಿಐ ಸಂಸ್ಥೆಯ ಸದಸ್ಯರು ರಾಜ್ಯದಲ್ಲಿ ಉತ್ತಮ ಆರ್ಥಿಕ ಚಟುವಟಿಕೆಗಳು ನಡೆಯುವ ವಾತಾವರಣ ನಿರ್ಮಾಣ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ರಾಜ್ಯದಲ್ಲಿ ಬಂಡವಾಳ ಹೂಡಿಕೆ ಹೆಚ್ಚಾಗಲು ಉತ್ತಮ ವಾತಾವರಣ ನಿರ್ಮಾಣ ಮಾಡುವಲ್ಲಿ ನಿಮ್ಮ ಪಾತ್ರ ಹಿರಿದಾಗಿದೆ. ಭವಿಷ್ಯದ ಜನಾಂಗವನ್ನು ಗಮನದಲ್ಲಿಟ್ಟುಕೊಂಡು ಅವರನ್ನು ಮುಂದಿನ ಸವಾಲುಗಳಿಗೆ ಸಜ್ಜು ಮಾಡುವ ಕಾರ್ಯದಲ್ಲಿ ನಿವೆಲ್ಲರೂ ತೊಡಗಿಕೊಳ್ಳಬೇಕುʼ ಎಂದು ಇದೇ ಸಂಧರ್ಭದಲ್ಲಿ ಕರೆ ನೀಡಿದರು.

ಎಫ್‌ಕೆಸಿಸಿಐ ಅಧ್ಯಕ್ಷ ರಮೇಶ್‌ ಚಂದ್ರ ಲಹೋಟಿ ಮಾತನಾಡಿ, ಕಳೆದ ಒಂದು ವರ್ಷದಲ್ಲಿ ಎಫ್‌ಕೆಸಿಸಿಐ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಇದಕ್ಕೆ ರಾಜ್ಯ ಸರಕಾರದಿಂದ ಹಾಗೂ ಸದಸ್ಯರುಗಳಿಂದ ಉತ್ತಮ ಸಹಕಾರ ದೊರೆತಿದೆ. ಎಪಿಎಂಸಿ ಡಿಜಟಲೀಕರಣದಿಂದ ನಮ್ಮ ಕೈಗಾರಿಕಾ ಸಮುದಾಯಕ್ಕೆ ಬಹಳಷ್ಟು ಅನುಕೂಲವಾಗಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎಫ್‌ಕೆಸಿಸಿಐ ನಿಯೋಜಿತ ಅಧ್ಯಕ್ಷ ಎಂ.ಜಿ ಬಾಲಕೃಷ್ಣ, ಉಪಾಧ್ಯಕ್ಷ ಉಮಾ ರೆಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X