Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅವಧಿ ಮೀರಿದ ಔಷಧ ವಿತರಣೆಯಾದರೆ ಕಠಿಣ...

ಅವಧಿ ಮೀರಿದ ಔಷಧ ವಿತರಣೆಯಾದರೆ ಕಠಿಣ ಕ್ರಮ : ಸಚಿವ ಯು.ಟಿ.ಖಾದರ್

ವಾರ್ತಾಭಾರತಿವಾರ್ತಾಭಾರತಿ21 Aug 2026 7:24 PM IST
share
ಅವಧಿ ಮೀರಿದ ಔಷಧ ವಿತರಣೆಯಾದರೆ ಕಠಿಣ ಕ್ರಮ : ಸಚಿವ ಯು.ಟಿ.ಖಾದರ್
"ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 33,745 ಹುದ್ದೆಗಳ ಭರ್ತಿಗೆ ಕ್ರಮ"

ಬೆಂಗಳೂರು : ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಅವಧಿ ಮೀರಿದ ಔಷಧವನ್ನು ರೋಗಿಗಳಿಗೆ ಕೊಟ್ಟರೆ ಅಂತಹವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ತಿಳಿಸಿದರು.

ಶುಕ್ರವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಡಾ.ಕೆ.ಗೋವಿಂದರಾಜು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇತ್ತೀಚಿಗೆ 5 ಕೋಟಿ ರೂ. ವೆಚ್ಚದ ನಕಲಿ ಔಷಧ ಜಾಲವನ್ನು ಪತ್ತೆ ಹಚ್ಚಲಾಗಿದೆ. ಎಲ್ಲೆಲ್ಲಿ ನಕಲಿ ಔಷಧ ಪೂರೈಕೆಯಾಗುತ್ತಿತ್ತು ಎಂಬುದರ ಕುರಿತು ಸಹ ತನಿಖೆ ಮುಂದುವರೆದಿದೆ. ಗೃಹ ಇಲಾಖೆ ಮತ್ತು ಆರೋಗ್ಯ ಇಲಾಖೆ ಸೇರಿ ನಕಲಿ ಔಷಧ ಪೂರೈಸಿದ್ದನ್ನು ಎಸ್‍ಐಟಿಯಿಂದ ತನಿಖೆಗೆ ಒಳಪಡಿಸಲಾಗಿದೆ ಎಂದರು.

ಜನೌಷಧಿ ಹಾಗೂ ಔಷಧ ಮಾರಾಟಗಾರರು ಮತ್ತು ಆಸ್ಪತ್ರೆಗಳಲ್ಲಿ ಔಷಧ ಪರಿಶೀಲಿಸಿ ರೋಗಿಗಳಿಗೆ ನೀಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಇನ್ನೂ ಸರಕಾರಿ ಆಸ್ಪತ್ರೆಗಳಲ್ಲಿ ಸ್ವಚ್ಛತೆ ಕೈಗೊಳ್ಳಲು ಆದೇಶ ನೀಡಲಾಗಿದೆ ಎಂದು ಯು.ಟಿ.ಖಾದರ್ ಹೇಳಿದರು.

ರಾಜ್ಯದಲ್ಲಿ ಶೇ.80ರಷ್ಟು ಜನರಿಗೆ ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ಸಿಗುತ್ತಿದೆ. ಖಾಸಗಿ ಆಸ್ಪತ್ರೆಯಲ್ಲಿ ಸಿಗದ ಮೂಲಭೂತ ಸೌಕರ್ಯ ಸಹ ಸರಕಾರಿ ಆಸ್ಪತ್ರೆಗಳಲ್ಲಿ ಸಿಗುತ್ತಿದೆ. ಹೀಗಾಗಿ ಸರಕಾರಿ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ಜಾಸ್ತಿಯಾಗಿದೆ ಎಂದು ಯು.ಟಿ.ಖಾದರ್ ತಿಳಿಸಿದರು.

‘33,745 ಹುದ್ದೆಗಳ ಭರ್ತಿಗೆ ಕ್ರಮ’: ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 33,745 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಅನುಕಂಪದ ಆಧಾರದಲ್ಲಿ 513, ಕೆಪಿಎಸ್‍ಸಿ ಮುಖಾಂತರ 530, ನೇರ ನೇಮಕಾತಿ ಮೂಲಕ 558, ಕಲ್ಯಾಣ ಕರ್ನಾಟಕ ವೃಂದದಲ್ಲಿ 320 ಹುದ್ದೆಗಳನ್ನು ಮೂರು ವರ್ಷದಲ್ಲಿ ಭರ್ತಿ ಮಾಡಲಾಗಿದೆ. ಇಲಾಖೆಯಲ್ಲಿ ಖಾಲಿ ಇರುವ 120 ತಜ್ಞ ವೈದ್ಯರ ಮತ್ತು 100 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಭರ್ತಿ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ಸೂಚಿಸಿದೆ. ಕಲ್ಯಾಣ ಕರ್ನಾಟಕ ವೃಂದದಲ್ಲಿ ಖಾಲಿ ಇರುವ 877 ವೈದ್ಯಕೀಯ ಅರೆ ನೇಮಕಾತಿ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಯು.ಟಿ. ಖಾದರ್ ಹೇಳಿದರು.

Tags

Minister U.T. Khader
share
ವಾರ್ತಾಭಾರತಿ
ವಾರ್ತಾಭಾರತಿ
Next Story
X