Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೋಚಿಂಗ್ ಸೆಂಟರ್‌ಗಳ ಮನಸೋ ಇಚ್ಛೆ ವಸೂಲಿ...

ಕೋಚಿಂಗ್ ಸೆಂಟರ್‌ಗಳ ಮನಸೋ ಇಚ್ಛೆ ವಸೂಲಿ ತಡೆಗೆ ಕಟ್ಟುನಿಟ್ಟಿನ ನಿಯಮ : ಸಚಿವ ಯು.ಟಿ.ಖಾದರ್

ವಾರ್ತಾಭಾರತಿವಾರ್ತಾಭಾರತಿ4 Sept 2026 6:56 PM IST
share
ಕೋಚಿಂಗ್ ಸೆಂಟರ್‌ಗಳ ಮನಸೋ ಇಚ್ಛೆ ವಸೂಲಿ ತಡೆಗೆ ಕಟ್ಟುನಿಟ್ಟಿನ ನಿಯಮ : ಸಚಿವ ಯು.ಟಿ.ಖಾದರ್

ಬೆಂಗಳೂರು : ‘ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳಿಗೆ ಸಂಪೂರ್ಣ ತಡೆ, ಎಲ್ಲ ಸರಕಾರಿ ಪರೀಕ್ಷೆಗಳು ಹಾಗೂ ನೇಮಕಾತಿಗಳಿಗೆ ನಿರ್ದಿಷ್ಟ ಸಮಯದ ಕ್ಯಾಲೆಂಡರ್ ನಿಗದಿಪಡಿಸುವುದು, ಖಾಸಗಿ ಶಿಕ್ಷಣ ಸಂಸ್ಥೆಗಳ ಶುಲ್ಕ ಹಾಗೂ ಕೋಚಿಂಗ್ ಸೆಂಟರ್‌ ಗಳ ಮನಸೋ ಇಚ್ಛೆ ವಸೂಲಿ ತಡೆಗೆ ಕಟ್ಟುನಿಟ್ಟಿನ ನಿಯಮ ರೂಪಿಸಿ, ಪೋಷಕರ ಮೇಲಿನ ಆರ್ಥಿಕ ಹೊರೆ ತಗ್ಗಿಸಲು ಕ್ರಮ ವಹಿಸಲಾಗುವುದು’ ಎಂದು ‘ಶೈಕ್ಷಣಿಕ ಸುಧಾರಣೆ’ ಸಂಬಂಧದ ಸಚಿವ ಸಂಪುಟ ಉಪಸಮಿತಿ ಅಧ್ಯಕ್ಷರೂ ಆಗಿರುವ ಆರೋಗ್ಯ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.

ಶುಕ್ರವಾರ ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ‘ಸರಕಾರಿ ಶಾಲೆ, ಪಿಯು ಕಾಲೇಜು ಹಾಗೂ ವಿಶ್ವ ವಿದ್ಯಾಲಯಗಳಲ್ಲಿ ಶಿಕ್ಷಕರ ಹುದ್ದೆ ಭರ್ತಿ, ಸುಸಜ್ಜಿತ ಗ್ರಂಥಾಲಯ, ಪ್ರಯೋಗಾಲಯ ಹಾಗೂ ವಸತಿ ನಿಲಯಗಳ ಸೌಲಭ್ಯಗಳನ್ನು ಮೇಲ್ದರ್ಜೆಗೇರಿಸುವುದು. ಪ್ರಸ್ತುತ ಮಾರುಕಟ್ಟೆ ಮತ್ತು ಉದ್ಯಮ ರಂಗದ ಅಗತ್ಯಕ್ಕೆ ತಕ್ಕಂತೆ ಪಠ್ಯಕ್ರಮದಲ್ಲಿ ಬದಲಾವಣೆ ತಂದು, ವಿದ್ಯಾರ್ಥಿಗಳಿಗೆ ತರಬೇತಿ ಮತ್ತು ಇಂಟರ್ನ್‍ಶಿಪ್ ಅವಕಾಶಗಳನ್ನು ಹೆಚ್ಚಿಸಲಾಗುವುದು’ ಎಂದು ಹೇಳಿದ್ದಾರೆ.

‘ಪರೀಕ್ಷಾ ಒತ್ತಡ ನಿವಾರಣೆಗೆ ಕೌನ್ಸೆಲಿಂಗ್ ವ್ಯವಸ್ಥೆ ಬಲಪಡಿಸುವುದು ಹಾಗೂ ಹಾಸ್ಟೆಲ್, ಕೋಚಿಂಗ್ ಸೆಂಟರ್‍ಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ನೆಮ್ಮದಿಗೆ ಅಗತ್ಯ ಕ್ರಮ ಕೈಗೊಳ್ಳುವುದು. ಎಸ್‍ಸಿ-ಎಸ್‍ಟಿ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳಿಗೆ ಸ್ಕಾಲರ್‍ಶಿಪ್ ಮತ್ತು ಹಾಸ್ಟೆಲ್ ಸೌಲಭ್ಯಗಳನ್ನು ತಲುಪಿಸುವುದು. ಮೇಲ್ಕಂಡ ಎಲ್ಲ ವಿಷಯಗಳ ಕುರಿತು ಶೀಘ್ರದಲ್ಲೇ ವಿದ್ಯಾರ್ಥಿ, ಪೋಷಕರು, ಶಿಕ್ಷಕರು ಹಾಗೂ ಶಿಕ್ಷಣ ತಜ್ಞರೊಂದಿಗೆ ವ್ಯಾಪಕ ಸಮಾಲೋಚನೆ ನಡೆಸಿ ಸರಕಾರಕ್ಕೆ ಅಂತಿಮ ವರದಿ ಸಲ್ಲಿಸಲಾಗುವುದು’ ಎಂದು ಹೇಳಿದ್ದಾರೆ.

‘ಶಿಕ್ಷಣ ಎಂಬುದು ಕೇವಲ ಅಕ್ಷರ ಕಲಿಯುವುದಲ್ಲ, ಅದು ಮಕ್ಕಳ ಬದುಕಿಗೆ ದಾರಿದೀಪವಾಗಬೇಕು. ವಿದ್ಯಾರ್ಥಿಗಳ ಪ್ರತಿಯೊಂದು ಸವಾಲು ಮತ್ತು ಕನಸುಗಳಿಗೆ ಸ್ಪಂದಿಸಿ, ಅವರ ಅಭ್ಯುದಯಕ್ಕೆ ಅಗತ್ಯವಿರುವ ಶೈಕ್ಷಣಿಕ ಸುಧಾರಣೆಗಳನ್ನು ತರಲು ಸಂಪುಟ ಉಪಸಮಿತಿಯು ಆಸ್ಥೆವಹಿಸಿ ಗಂಭೀರವಾಗಿ ಚರ್ಚಿಸಿ ಹಲವು ಮಹತ್ವದ ತೀರ್ಮಾನಗಳನ್ನು ಕೈಗೊಂಡಿದೆ. ನಾಡಿನ ವಿದ್ಯಾರ್ಥಿಗಳ ಆಶೋತ್ತರಗಳಿಗೆ ಸೂಕ್ತ ಅವಕಾಶ ಕಲ್ಪಿಸಿ, ಅವರ ಮನೋಬಲವನ್ನು ಸಶಕ್ತಗೊಳಿಸಿ, ಶೈಕ್ಷಣಿಕ ಹಾದಿಯಲ್ಲಿ ಸದೃಢರಾಗಿ ಸಾಗುತ್ತಾ ನೈತಿಕ ಜವಾಬ್ದಾರಿಗಳನ್ನು ಸ್ವಂತಿಕೆಯಿಂದ ನಿರ್ವಹಿಸುವ ಯುವ ಸಮೂಹ ಸಜ್ಜುಗೊಳಿಸುವುದು ನಮ್ಮ ಮುಖ್ಯ ಉದ್ದೇಶ’ ಎಂದು ಅವರು ತಿಳಿಸಿದ್ದಾರೆ.

ಸಭೆಯಲ್ಲಿ ಸಂಪುಟದ ಉಪಸಮಿತಿ ಸದಸ್ಯರೂ ಆಗಿರುವ ಸಚಿವರಾದ ಪ್ರಿಯಾಂಕ್ ಖರ್ಗೆ, ಬಸವರಾಜ ರಾಯರೆಡ್ಡಿ, ಡಾ.ಶರಣಪ್ರಕಾಶ್ ಪಾಟೀಲ್, ಮಧು ಬಂಗಾರಪ್ಪ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

Tags

Minister U.T. Khader
share
ವಾರ್ತಾಭಾರತಿ
ವಾರ್ತಾಭಾರತಿ
Next Story
X