ತಿರುಚಿದ ವೀಡಿಯೋ ಪ್ರಸಾರ ಆರೋಪ: ಸಚಿವ ವಿಜಯಾನಂದ ಕಾಶಪ್ಪನವರ್ ದೂರು

ವಿಜಯಾನಂದ ಕಾಶಪ್ಪನವರ್
ಬೆಂಗಳೂರು : ತಮ್ಮ ವಿರುದ್ಧ ತಿರುಚಿದ ಆಡಿಯೋ ಬಳಸಿ ಅಪಪ್ರಚಾರದ ವೀಡಿಯೋ ಪ್ರಸಾರ ಮಾಡಲಾಗಿದೆ ಎಂದು ಆರೋಪಿಸಿ ಸಣ್ಣ ಕೈಗಾರಿಕಾ ಸಚಿವ ವಿಜಯಾನಂದ ಕಾಶಪ್ಪನವರ್ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ತಮ್ಮ ಆಪ್ತ ಸಹಾಯಕ ವಿಕಾಸ್ ಮೂಲಕ ದೂರು ಸಲ್ಲಿಸಿರುವ ಅವರು, ಕೆಲ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯೊಬ್ಬರೊಂದಿಗೆ ವಾಟ್ಸಾಪ್ ಕಾಲ್ನಲ್ಲಿ ಮಾತನಾಡಿದ್ದಾರೆ ಎನ್ನಲಾದ ಆಡಿಯೋವನ್ನು ತಿರುಚಿ ವೀಡಿಯೋ ಅಪ್ಲೋಡ್ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ತಮ್ಮ ತೇಜೋವಧೆ ಮಾಡುವ ಉದ್ದೇಶದಿಂದ ವೀಡಿಯೋ ಹರಿಬಿಡಲಾಗಿದ್ದು, ಅದನ್ನು ಅಪ್ಲೋಡ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ವೀಡಿಯೋ ಲಿಂಕ್ಗಳನ್ನು ಡಿಲೀಟ್ ಮಾಡಿಸಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Next Story




