Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸ್ಪೀಕರ್ ಪೀಠದ ಕುರಿತು ಸಚಿವ ಝಮೀರ್...

ಸ್ಪೀಕರ್ ಪೀಠದ ಕುರಿತು ಸಚಿವ ಝಮೀರ್ ಹೇಳಿಕೆ ವಿಧಾನಸಭೆಯಲ್ಲಿ ಪ್ರಸ್ತಾಪ; ಬಿಜೆಪಿ-ಜೆಡಿಎಸ್ ಧರಣಿ

ವಾರ್ತಾಭಾರತಿವಾರ್ತಾಭಾರತಿ11 Dec 2023 6:54 PM IST
share
ಸ್ಪೀಕರ್ ಪೀಠದ ಕುರಿತು ಸಚಿವ ಝಮೀರ್ ಹೇಳಿಕೆ ವಿಧಾನಸಭೆಯಲ್ಲಿ ಪ್ರಸ್ತಾಪ; ಬಿಜೆಪಿ-ಜೆಡಿಎಸ್ ಧರಣಿ

ಬೆಳಗಾವಿ: ಸ್ಪೀಕರ್ ಸ್ಥಾನದ ಕುರಿತು ತೆಲಂಗಾಣ ಚುನಾವಣೆ ಸಂದರ್ಭದಲ್ಲಿ ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಅವರು ನೀಡಿದ್ದ ಹೇಳಿಕೆಯನ್ನು ಪ್ರಸ್ತಾಪಿಸಿ ಬಿಜೆಪಿ ಹಾಗೂ ಜೆಡಿಎಸ್ ಸ್ಪೀಕರ್ ಪೀಠದ ಮುಂದಿನ ಬಾವಿಗಿಳಿದು ಧರಣಿ ನಡೆಸಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಗ್ವಾದ, ಏರಿದ ಧ್ವನಿಯಲ್ಲಿ ಗದ್ದಲ, ಕೋಲಾಹಲಕ್ಕೆ ಕಾರಣವಾಯಿತು.

ಸೋಮವಾರ ನಟಿ ಲೀಲಾವತಿ ಅವರಿಗೆ ಸಂತಾಪ ಸೂಚನೆ ಬಳಿಕ ಸ್ಪೀಕರ್ ಖಾದರ್ ಅವರು ಪ್ರಶ್ನೋತ್ತರ ಕಲಾಪವನ್ನು ಕೈಗೆತ್ತಿಕೊಂಡು, ಪ್ರಶ್ನೆ ಕೇಳಲು ಬಿಜೆಪಿ ಸದಸ್ಯ ಕೃಷ್ಣ ನಾಯ್ಕ್ ಹೆಸರು ಕರೆದರು. ಆಗ ಉತ್ತರಿಸಲು ಎದ್ದುನಿಂತ ವಸತಿ ಸಚಿವ ಝಮೀರ್ ಅಹ್ಮದ್ ಖಾನ್‍ಗೆ ಬಿಜೆಪಿ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿ, ‘ಸ್ಪೀಕರ್ ಪೀಠದ ಬಗ್ಗೆ ಅಗೌರವ ತೋರಿಸಿರುವ ಝಮೀರ್ ಅವರಿಂದ ಉತ್ತರ ಪಡೆಯುವುದಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಪ್ರತಿಪಕ್ಷ ನಾಯಕ ಆರ್.ಅಶೋಕ್, ‘ಮುಸ್ಲಿಮ್ ಸ್ಪೀಕರ್ ಮುಂದೆ ಬಿಜೆಪಿ ಶಾಸಕರು ಸಲಾಂ ಸಾಬ್ ಎಂದು ಕೈಮುಗಿದು ನಿಲ್ಲುವಂತೆ ಮಾಡಿದ್ದು ಕಾಂಗ್ರೆಸ್ ಪಕ್ಷ’ ಎಂದು ಸಚಿವ ಝಮೀರ್, ರಾಜ್ಯದ ಜನರ ಭಾವನೆ ಕೆದಕಿದ್ದು, ನಾವೇನು ಗುಲಾಮರೇ...ಝಮೀರ್ ಅವರಿಗೆ ಮಾತನಾಡಲು ಅವರಿಗೆ ಅವಕಾಶ ನೀಡುವುದಿಲ್ಲ. ಅವರನ್ನು ಕೂಡಲೇ ಸಚಿವ ಸಂಪುಟದಿಂದ ವಜಾ ಮಾಡಬೇಕು. ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಕಂದಾಯ ಸಚಿವ ಕೃಷ್ಣಬೈರೇಗೌಡ, ಯಾವುದೇ ನೋಟಿಸ್ ನೀಡದೆ ಏಕಾಏಕಿ ಮಾತನಾಡಿದರೆ ಹೇಗೆ? ನೋಟಿಸ್ ನೀಡಿ ಮಾತನಾಡಲಿ, ಪ್ರಶ್ನೋತ್ತರ ಅವಧಿಯಲ್ಲಿ ಈ ರೀತಿ ಗದ್ದಲ ಮಾಡುವುದು ಸರಿಯಲ್ಲ ಎಂದು ತಿರುಗೇಟು ನೀಡಿದರು. ಇದರಿಂದ ಆಡಳಿತ ಮತ್ತು ವಿಪಕ್ಷಗಳ ನಡುವೆ ವಾಗ್ವಾದ ಸೃಷ್ಟಿಸಿತು. ಈ ಗದ್ದಲ ಹಿನ್ನೆಲೆಯಲ್ಲಿ ಸದನವನ್ನು 10 ನಿಮಿಷಗಳ ಕಾಲ ಮುಂದೂಡಿದ ಸ್ಪೀಕರ್ ಕೊಠಡಿಯಲ್ಲಿ ಸಂಧಾನ ಸಭೆ ಕರೆದರು.

ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರತಿಪಕ್ಷದ ನಾಯಕ ಆರ್.ಅಶೋಕ್, ಕಾನೂನು ಸಚಿವ ಎಚ್.ಕೆ ಪಾಟೀಲ್, ಸಚಿವ ಝಮೀರ್ ಅಹ್ಮದ್ ಖಾನ್, ಮಾಜಿ ಸಚಿವರಾದ ಡಾ.ಅಶ್ವತ್ಥನಾರಾಯಣ, ಆರಗ ಜ್ಞಾನೇಂದ್ರ ಮತ್ತಿತರರು ಭಾಗವಹಿಸಿದ್ದರು. ಆದರೆ, ಸಂಧಾನ ಸಭೆ ವಿಫಲವಾಯಿತು. ಮತ್ತೆ ಸದನ ಸೇರಿದಾಗ ಬಿಜೆಪಿ ಸದಸ್ಯರು ಸದನದ ಬಾವಿಗೆ ಇಳಿದು ಧರಣಿ ಮುಂದುವರಿಸಿದರು.

ಈ ಹಂತದಲ್ಲಿ ಮಧ್ಯಪ್ರವೇಶಿಸಿದ ಸಚಿವ ಕೃಷ್ಣಬೈರೇಗೌಡ, ‘ಝಮೀರ್ ಅಹ್ಮದ್ ಸ್ಪೀಕರ್ ಪೀಠದ ಬಗ್ಗೆ ಯಾವುದೇ ಅಗೌರವದ ಹೇಳಿಕೆ ನೀಡಿಲ್ಲ. ಉನ್ನತ ಸ್ಥಾನ ನೀಡಿದ್ದೇವೆ ಎಂದು ಉಲ್ಲೇಖಿಸಿದ್ದಾರೆ. ಆದರೆ, ಬಿಜೆಪಿ ಕ್ಷುಲ್ಲಕ ರಾಜಕೀಯಕ್ಕಾಗಿ ಸದನದ ಅಮೂಲ್ಯ ಸಮಯ ವ್ಯರ್ಥ ಮಾಡುವ ಮೂಲಕ ತಮ್ಮ ಹೊಣೆಗಾರಿಕೆಯನ್ನು ಮರೆತಿದೆ’ ಎಂದು ಟೀಕಿಸಿದರು.

ಸ್ಪೀಕರ್ ಖಾದರ್ ಅವರು ಗದ್ದಲದ ಮಧ್ಯೆ, ‘ಮಹತ್ವದ ಪ್ರಶ್ನೋತ್ತರ, ಉತ್ತರ ಕರ್ನಾಟಕ ಮತ್ತು ಬರ ಚರ್ಚೆಗೆ ಅವಕಾಶ ಮಾಡಿಕೊಡಿ. ಸರಕಾರ ಉತ್ತರ ನೀಡಬೇಕಿದೆ. ಹೀಗಾಗಿ ಕಲಾಪದ ಸಮಯ ವ್ಯರ್ಥ ಮಾಡಬೇಡಿ ರಾಜಕೀಯ ವಿಚಾರ ಬಿಟ್ಟು ತಮ್ಮ ಸ್ಥಾನಗಳಿಗೆ ತೆರಳಿ ಎಂದು ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಲಿಲ್ಲ.

ಕೋಮುವಾದಿ ಝಮೀರ್ ಅಹ್ಮದ್ ಖಾನ್‍ಗೆ ಧಿಕ್ಕಾರ ಎಂದು ಬಿಜೆಪಿ ಸದಸ್ಯರು ಘೋಷಣೆ ಕೂಗಿದರು. ಈ ಗದ್ದಲದ ಮಧ್ಯೆಯೇ ಪ್ರಶ್ನೋತ್ತರ ಕಲಾಪ, ಐದು ವಿಧೇಯಕಗಳ ಅನುಮೋದನೆ ಹಾಗೂ ಬರ ಪರಿಸ್ಥಿತಿಯ ಬಗ್ಗೆ ನಡೆದ ಚರ್ಚೆಗೆ ಸರಕಾರದಿಂದ ಉತ್ತರವನ್ನು ಕೊಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X