ನಂದಿನಿ ಉತ್ಪನ್ನಗಳ ವಿರುದ್ಧ ಅಪಪ್ರಚಾರ ಆರೋಪ: ಎಫ್ಐಆರ್ ದಾಖಲು

ಸಾಂದರ್ಭಿಕ ಚಿತ್ರ | PC : kmfnandini
ಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ ಮಾಡಿರುವ ಆರೋಪದಡಿ ಇಲ್ಲಿನ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಈ ಕುರಿತಂತೆ ಕೆಎಂಎಫ್ನ ಪದ್ಮಾವತಿ ಆರ್. ಎಂಬುವರು ನೀಡಿದ ದೂರಿನ್ವಯ ಡಾ.ಶರಣ್ಯ ಎಂಬುವರ ವಿರುದ್ಧ ಬಿಎನ್ ಎಸ್ ಕಾಯ್ದೆಯ 353(1)(ಬಿ) ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ 2000ರ 66(ಡಿ) ಅಡಿಯಲ್ಲಿ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story




