Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಚೈತ್ರಾ ವಂಚನೆ ಪ್ರಕರಣದಲ್ಲಿ ಹೆಸರು...

ಚೈತ್ರಾ ವಂಚನೆ ಪ್ರಕರಣದಲ್ಲಿ ಹೆಸರು ದುರ್ಬಳಕೆ: ಪೊಲೀಸ್ ಆಯುಕ್ತರಿಗೆ ಸಾಲು ಮರದ ತಿಮ್ಮಕ್ಕ ದೂರು

ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ20 Sept 2023 5:41 PM IST
share
ಚೈತ್ರಾ ವಂಚನೆ ಪ್ರಕರಣದಲ್ಲಿ ಹೆಸರು ದುರ್ಬಳಕೆ: ಪೊಲೀಸ್ ಆಯುಕ್ತರಿಗೆ ಸಾಲು ಮರದ ತಿಮ್ಮಕ್ಕ ದೂರು

ಬೆಂಗಳೂರು, ಸೆ.20: ಬಿಜೆಪಿ ಎಂಎಲ್‍ಎ ಟಿಕೆಟ್ ವಂಚನೆ ಪ್ರಕರಣ ಸಂಬಂಧ ತಮ್ಮ ಹಾಗೂ ತಮ್ಮ ಪುತ್ರನ ಹೆಸರನ್ನು ಬಳಸಿಕೊಂಡು ಸುಳ್ಳು ಸುದ್ದಿ ಹಬ್ಬಿಸಿ ತೇಜೋವಧೆ ಮಾಡುತ್ತಿರುವವರ ವಿರುದ್ಧ ಸೂಕ್ರ ಕಾನೂನು ಕ್ರಮ ಕೈಗೊಳ್ಳುವಂತೆ ಸಾಲುಮರದ ತಿಮ್ಮಕ್ಕ ಅವರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಬುಧವಾರ ನಗರದಲ್ಲಿರುವ ಪೊಲೀಸ್ ಆಯುಕ್ತರ ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಿರುವ ಅವರು, ಪೊಲೀಸ್ ಆಯುಕ್ತರಿಗೆ ಲಿಖಿತ ದೂರು ನೀಡಿದ ಅವರು, ಸುಳ್ಳು ಸುದ್ದಿ ಹರಡಿಸಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದರು.

ವೃಕ್ಷ ಸಂಪತ್ತಿಗಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟು ಬದುಕಿದ್ದೇನೆ. ತಮ್ಮ ಪುತ್ರ ಉಮೇಶ್ ಕೂಡ ಎರಡು ದಶಕಗಳಿಂದಲೂ ಮರ, ಗಿಡಗಳನ್ನು ಸಾಕು ಸಲಹುದುವರಲ್ಲೇ ತೊಡಗಿಸಿಕೊಂಡಿದ್ದೇನೆ. ತಮ್ಮ ಈ ಇಳಿವಯಸ್ಸಿನಲ್ಲಿ ಸುಳ್ಳು ಹಾಗೂ ಅಪಪ್ರಚಾರ ಕಂಡು ಮಾನಸಿಕವಾಗಿ ನೊಂದಿದ್ದೇನೆ. ಸುದ್ದಿ ಹಬ್ಬಿಸುವವರಿಗೆ ಅದು ದೈನಂದಿನ ಕೆಲಸ ಆಗಿರಬಹುದು. ಆದರೆ ನಮ್ಮ ಮನಸ್ಸಿನ ಮೇಲೆ ಭಾರೀ ಆಘಾತ ಬೀರಿದೆ ಎಂದು ದೂರಿನಲ್ಲಿ ವಿವರಿಸಿದ್ದಾರೆ.

ಒಂದು ವೇಳೆ ಈ ಪ್ರಕರಣದಲ್ಲಿ ತಾವು ಭಾಗಿಯಾಗಿದ್ದರೆ ಕಾನೂನು ರೀತಿಯ ಕ್ರಮ ಜರುಗಿಸಿ, ಇಲ್ಲವಾದರೆ ಸುಳ್ಳು ಸುದ್ದಿ ಹರಡಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ತಿಮ್ಮಕ್ಕ ಒತ್ತಾಯಿಸಿದ್ದಾರೆ.

ಏನಿದು ಆರೋಪ?: ಸಾಲುಮರದ ತಿಮ್ಮಕ್ಕ ಅವರನ್ನು ಪರಿಸರ ರಾಯಭಾರಿಯಾಗಿ ರಾಜ್ಯ ಸರಕಾರ ನೇಮಿಸಿದ್ದು, ಸಂಪುಟದ ದರ್ಜೆಯ ಸ್ಥಾನಮಾನ ನೀಡಲಾಗಿದೆ. ಉದ್ಯಮಿ ಗೋಪಾಲಬಾಬು ಪೂಜಾರಿಗೆ ವಿಧಾನಸಭೆಯ ಟಿಕೆಟ್ ಕೊಡಿಸುವುದಾಗಿ ಸಂಘ ಪರಿವಾರದ ಕಾರ್ಯಕರ್ತೆ ಚೈತ್ರಾ ಕುಂದಾಪುರ ಹಾಗೂ ಬಿಜೆಪಿ ಮುಖಂಡ ಗಗನ್ ಕಡೂರು ವಂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಬಾಬು ಪೂಜಾರಿಯವರನ್ನು ನಂಬಿಸಲು ಸಾಲುಮರದ ತಿಮ್ಮಕ್ಕ ಅವರಿಗೆ ಸರಕಾರದಿಂದ ನೀಡಲಾಗಿರುವ ಕಾರನ್ನು ಬಳಕೆ ಮಾಡಿಕೊಳ್ಳಲಾಗಿತ್ತು ಮತ್ತು ವಿಧಾನಸೌಧದಲ್ಲಿರುವ ಸಾಲುಮರದ ತಿಮ್ಮಕ್ಕ ಅವರ ಕಚೇರಿಯನ್ನು ಆರೋಪಿ ಗಗನ್ ನವೀಕರಣ ಮಾಡಿದ್ದ ಎಂಬ ಆರೋಪಗಳು ಕೇಳಿಬಂದಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X