Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅರೆ ಹುಚ್ಚನನ್ನು ಪ್ರಧಾನಿ ಮಾಡಬೇಕೆಂದು...

ಅರೆ ಹುಚ್ಚನನ್ನು ಪ್ರಧಾನಿ ಮಾಡಬೇಕೆಂದು ಹುಚ್ಚರು ಕೂಡಿ ದೇಶ ಹಾಳು ಮಾಡಲು ಮುಂದಾಗಿದ್ದಾರೆ: ಶಾಸಕ ಯತ್ನಾಳ್

ವಾರ್ತಾಭಾರತಿವಾರ್ತಾಭಾರತಿ4 Oct 2023 4:50 PM IST
share
ಅರೆ ಹುಚ್ಚನನ್ನು ಪ್ರಧಾನಿ ಮಾಡಬೇಕೆಂದು ಹುಚ್ಚರು ಕೂಡಿ ದೇಶ ಹಾಳು ಮಾಡಲು ಮುಂದಾಗಿದ್ದಾರೆ: ಶಾಸಕ ಯತ್ನಾಳ್

ಬೆಂಗಳೂರು: ಕರ್ನಾಟಕದಲ್ಲಿ ಮುಸ್ಲಿಮರನ್ನು ಪ್ರಚೋದನೆ ಮಾಡುವ ಕೆಲಸ ಸಿದ್ದರಾಮಯ್ಯರ ಸರಕಾರ ಇವತ್ತು ಮಾಡುತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಆಕ್ಷೇಪಿಸಿದರು.

ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇವಲ ಲೋಕಸಭಾ ಚುನಾವಣೆ ಸಲುವಾಗಿ ಯಾವನೋ ಒಬ್ಬ ಅರೆಹುಚ್ಚನನ್ನು ಪ್ರಧಾನಿ ಮಾಡಬೇಕೆಂದು ಈ ಹುಚ್ಚರು ಕೂಡಿ ದೇಶ ಹಾಳು ಮಾಡಲು ಮುಂದಾಗಿದ್ದಾರೆ. ಇದಕ್ಕೆ ಈ ದೇಶದ ಜನರು ಅವಕಾಶ ಕೊಡುವುದಿಲ್ಲ ಎಂದು ಹೇಳಿದರು. ಹಿಂದೂ, ಸನಾತನ ಧರ್ಮದ ಕುರಿತು ಡೆಂಗ್ಯೂ, ಮಲೇರಿಯಾ ಎನ್ನುವವರು ಕ್ರಾಸ್‍ಬ್ರೀಡ್‍ಗಳು ಎಂದು ಟೀಕಿಸಿದರು.

ರಾಜ್ಯದಲ್ಲಿ 11 ಕಡೆ ಗಣೇಶ ಚತುರ್ಥಿ ಕಾರ್ಯಕ್ರಮಕ್ಕೆ ಹೋಗಿದ್ದೇನೆ. ಹಿಂದೂಗಳಿಂದ ಕಲ್ಲೆಸೆತ, ಚಾಕು, ಚೂರಿ ಪ್ರದರ್ಶನ ನಡೆದಿಲ್ಲ. ಪ್ರಚೋದನೆಯ ಘೋಷಣೆ ಕೇಳಿಲ್ಲ. ಆದರೆ, ಶಾಂತಿ ಸಂದೇಶ ಕೊಡುವ ಧಾರ್ಮಿಕ ಕಾರ್ಯಕ್ರಮದಲ್ಲಿ ನಮ್ಮೆಲ್ಲರನ್ನು ನಾಶ ಮಾಡುವುದಾಗಿ, ರಕ್ತ ಕುಡಿಯುವುದಾಗಿ ತಿಳಿಸಿದ್ದಾರೆ. ಇದು ಖಂಡನೀಯ ಎಂದರು.

ಈ ಸರಕಾರ ಹಿಂದೂಗಳ ರಕ್ಷಣೆ ಮಾಡುತ್ತಿದೆಯೇ ಎಂದು ಕೇಳಿದರು. ಪ್ರಿಯಾಂಕ್ ಖರ್ಗೆಗೆ ನಾಚಿಕೆ ಆಗಬೇಕು. ಖರ್ಗೆಯವರು ಇದಕ್ಕೆ ಉತ್ತರ ಕೊಡಬೇಕು. ಹಿಂದೂಗಳ, ಸನಾತನದ ಬಗ್ಗೆ ಬಂದರೆ ಇವರು ಅಪ್ಪ- ಮಗ ಕೂಡಿ ಹೇಳಿಕೆ ಕೊಡುತ್ತಾರೆ. ಕೋಲಾರದಲ್ಲಿ ತಮ್ಮ ಸಮುದಾಯದ ಸಂಸದರ ವಿರುದ್ಧ ಎಸ್ಪಿ ಉದ್ಧಟತನದಿಂದ ವರ್ತಿಸಿದರೆ, ಕುತ್ತಿಗೆ ಪಟ್ಟಿ ಹಿಡಿದು ಹೊರಹಾಕಿದರೆ ಖರ್ಗೆ ಮಾತನಾಡಿಲ್ಲ. ಇದನ್ನು ತಾಲಿಬಾನಿ ಸರಕಾರ ಎನ್ನದಿರಲು ಸಾಧ್ಯವೇ ಎಂದು ಪ್ರಶ್ನೆ ಮಾಡಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಕರ್ನಾಟಕದಲ್ಲಿ ತಾಲಿಬಾನ್ ಸರಕಾರ ಅಧಿಕಾರ ವಹಿಸಿಕೊಂಡಂತಾಗಿದೆ ಎಂದು ತಿಳಿಸಿದರು. ಇವತ್ತು ನಡೆಯುತ್ತಿರುವ ಘಟನೆಗಳಿಂದ ಕರ್ನಾಟಕದಲ್ಲಿ ಹಿಂದೂಗಳ ರಕ್ಷಣೆ ಮಾಡುವವರು ಯಾರು ಎಂಬ ಪ್ರಶ್ನೆ ಉದ್ಭವಿಸಲು ಕಾರಣವಾಗಿದೆ ಎಂದು ತಿಳಿಸಿದರು.

ಶಿವಮೊಗ್ಗದ ರಾಗಿಗುಡ್ಡದಲ್ಲಿ ಸಂಭಾವ್ಯ ಗಲಭೆಯ ಪೂರ್ಣ ಮಾಹಿತಿ ಪೊಲೀಸ್ ಇಲಾಖೆಗೆ ಇತ್ತು. ಅನುಮತಿ ಇಲ್ಲದೆ ಬೃಹತ್ ಖಡ್ಗ ಪ್ರತಿಷ್ಠಾಪಿಸಿದ್ದಾರೆ. ಅಖಂಡ ಭಾರತದ ನಕ್ಷೆಯಲ್ಲಿ ಹಸಿರು ಬಣ್ಣ ಬಳಿದು ಔರಂಗಜೇಬನನ್ನು ವೈಭವೀಕರಿಸಿದ್ದಾರೆ. ಇಷ್ಟೆಲ್ಲ ಆಗಲು ಪೊಲೀಸ್ ಇಲಾಖೆ ಬಿಟ್ಟಿದ್ಯಾಕೆ ಎಂದು ಕೇಳಿದರು.

ಕೆಜೆ ಹಳ್ಳಿ, ಡಿಜೆ ಹಳ್ಳಿಯಲ್ಲಿ ನಡೆದ ದಲಿತ ಶಾಸಕನ ಮನೆ ಮೇಲಿನ ಬೆಂಕಿ ಪ್ರಕರಣವನ್ನೂ ವಾಪಸ್ ಪಡೆಯಲು ಮುಂದಾಗಿದ್ದಾರೆ. ನೀವು ಕೇವಲ ಮುಸ್ಲಿಮರ ಮತದಿಂದಲೇ ಅಧಿಕಾರಕ್ಕೆ ಬಂದಿದ್ದೀರಾ ಎಂದು ಪ್ರಶ್ನಿಸಿದರು.

ಮಾಜಿ ಸಚಿವ ಸಿ.ಟಿ.ರವಿ, ಶಾಸಕ ಅರವಿಂದ ಬೆಲ್ಲದ್, ಮಾಜಿ ಶಾಸಕ ಪಿ.ರಾಜೀವ್, ವಿಧಾನಪರಿಷತ್ ಸದಸ್ಯ ಅ. ದೇವೇಗೌಡ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X