ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ಶಾಸಕ ಬಿ.ಆರ್.ಪಾಟೀಲ್ ರಾಜೀನಾಮೆ

ಬಿ.ಆರ್.ಪಾಟೀಲ್
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಸಲಹೆಗಾರ (ನೀತಿ ಮತ್ತು ಕಾರ್ಯಕ್ರಮ) ಸ್ಥಾನಕ್ಕೆ ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಬಿ.ಆರ್.ಪಾಟೀಲ್ ಅವರು ರಾಜೀನಾಮೆ ಸಲ್ಲಿಕೆ ಮಾಡಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಮುಖ್ಯಮಂತ್ರಿಯವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ಸ್ವತಃ ಬಿ.ಆರ್.ಪಾಟೀಲ್ ಮಾಹಿತಿ ನೀಡಿದ್ದು, ರಾಜ್ಯ ಸರಕಾರ ನೀಡಿರುವ ಸಚಿವ ದರ್ಜೆ ಸ್ಥಾನಮಾನವು ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಹಿಂದಿರುಗಿಸಿರುವುದಾಗಿಯೂ ಪ್ರಕಟಿಸಿದ್ದಾರೆ. ಆದರೆ, ಯಾವ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬುದು ದೃಢಪಡಿಸಿಲ್ಲ.
2024ರ ಜನವರಿ ತಿಂಗಳಿನಲ್ಲಿ ಬಿ.ಆರ್. ಪಾಟೀಲ್ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರನಾಗಿ ನೇಮಿಸಲಾಗಿತ್ತು. ಇದೀಗ ದಿಢೀರ್ ರಾಜೀನಾಮೆ ನೀಡಿರುವುದು ಆಡಳಿತ ಪಕ್ಷದ ವಲಯದಲ್ಲಿ ತೀವ್ರ ಅಚ್ಚರಿಗೆ ಕಾರಣವಾಗಿದೆ.
Next Story





