Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಾಂಕ್ರಾಮಿಕ ರೋಗ ತಡೆಗಟ್ಟಲು ಶಾಸಕರ...

ಸಾಂಕ್ರಾಮಿಕ ರೋಗ ತಡೆಗಟ್ಟಲು ಶಾಸಕರ ಸಮಿತಿ ರಚನೆಗೆ ತೀರ್ಮಾನ: ಆರೋಗ್ಯ ಸಚಿವ ಯು.ಟಿ. ಖಾದರ್

ವಾರ್ತಾಭಾರತಿವಾರ್ತಾಭಾರತಿ20 July 2026 9:32 PM IST
share
ಸಾಂಕ್ರಾಮಿಕ ರೋಗ ತಡೆಗಟ್ಟಲು ಶಾಸಕರ ಸಮಿತಿ ರಚನೆಗೆ ತೀರ್ಮಾನ: ಆರೋಗ್ಯ ಸಚಿವ ಯು.ಟಿ. ಖಾದರ್
‘ಎಬೋಲಾ ಹರಡುವಿಕೆ ತಡೆಗೆ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್’

ಬೆಂಗಳೂರು: ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಲು ಪ್ರತಿಯೊಂದು ಕ್ಷೇತ್ರದ ಜನಪ್ರತಿನಿಧಿಗಳನ್ನು ಒಳಗೊಂಡ ಸಮಿತಿ ರಚಿಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.

ಸೋಮವಾರ ಸಾಂಕ್ರಾಮಿಕ ರೋಗಗಳ ಹರಡುವಿಕೆ ನಿಯಂತ್ರಣ ಕುರಿತು ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾತನಾಡಿದ ಅವರು, ಎಬೋಲಾ ಸೋಂಕಿನ ಆತಂಕ ಹಿನ್ನೆಲೆಯಲ್ಲಿ ಕಾಂಗೋ, ಉಗಾಂಡಾ ಸೇರಿದಂತೆ ಕೆಲವು ಆಫ್ರಿಕಾ ದೇಶಗಳಿಂದ ಬರುವ ಪ್ರಯಾಣಿಕರಿಗೆ ವಿಮಾನ ನಿಲ್ದಾಣಗಳಲ್ಲಿ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಆರೋಗ್ಯ ತುರ್ತು ಪರಿಸ್ಥಿತಿ ನಿರ್ವಹಣೆಗೆ ಹೊಸ ವ್ಯವಸ್ಥೆ ಜಾರಿಗೆ ತರಲಾಗಿದೆ. ಇದರ ಮೂಲಕ ಎಲ್ಲ ಜಿಲ್ಲೆಗಳಿಗೂ ತ್ವರಿತವಾಗಿ ಮಾಹಿತಿ ರವಾನಿಸಿ, ರೋಗ ನಿಯಂತ್ರಣ ಕ್ರಮಗಳನ್ನು ಇನ್ನಷ್ಟು ಸಮನ್ವಯದಿಂದ ಕೈಗೊಳ್ಳಲು ಸಾಧ್ಯವಾಗಲಿದೆ ಎಂದರು.

ಸಾಂಕ್ರಾಮಿಕ ರೋಗಗಳ ನಿಯಂತ್ರಣದಲ್ಲಿ ಸ್ಥಳೀಯ ಮಟ್ಟದ ಮೇಲ್ವಿಚಾರಣೆ ಅಗತ್ಯವಾಗಿರುವುದರಿಂದ, ಪ್ರತಿ ಕ್ಷೇತ್ರದ ಶಾಸಕರ ನೇತೃತ್ವದಲ್ಲಿ ಜನಪ್ರತಿನಿಧಿಗಳನ್ನು ಒಳಗೊಂಡ ಸಮಿತಿಗಳನ್ನು ರಚಿಸಲಾಗುವುದು. ಸ್ಥಳೀಯ ಸಮಸ್ಯೆಗಳನ್ನು ತ್ವರಿತವಾಗಿ ಗುರುತಿಸಿ ಕ್ರಮ ಕೈಗೊಳ್ಳಲು ಈ ಸಮಿತಿಗಳು ನೆರವಾಗಲಿವೆ. ಕಾಂಗೋ, ಉಗಾಂಡಾ, ಆಫ್ರಿಕಾದ ಇತರೆ ಸೋಂಕು ಪೀಡಿತ ದೇಶಗಳಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ ವಿಮಾನ ನಿಲ್ದಾಣಗಳಲ್ಲಿ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಗಡಿ ಭಾಗಗಳಲ್ಲಿಯೂ ಆರೋಗ್ಯ ಇಲಾಖೆ ನಿಗಾ ವಹಿಸಿದ್ದು, ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಲಾಗುತ್ತಿದೆ ಎಂದು ಯು.ಟಿ. ಖಾದರ್ ಮಾಹಿತಿ ನೀಡಿದರು.

ರಾಜ್ಯದಲ್ಲಿ ಮಲೇರಿಯಾ ಪ್ರಕರಣಗಳು ಶೇ.70ರಷ್ಟು ಹಾಗೂ ಡೆಂಗ್ಯೂ ಪ್ರಕರಣಗಳು ಶೇ.33ರಷ್ಟು ಕಡಿಮೆಯಾಗಿವೆ. ಮನೆಮನೆಗೆ ತೆರಳಿ ಲಾರ್ವಾ ಸಮೀಕ್ಷೆ ನಡೆಸಲು ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. ಅಗತ್ಯವಿರುವ ಲ್ಯಾಬ್ ಟೆಕ್ನಿಷಿಯನ್ ಮತ್ತು ಫಾರ್ಮಸಿಸ್ಟ್‍ಗಳ ನೇಮಕಾತಿಗೂ ಕ್ರಮ ಕೈಗೊಳ್ಳಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಸಾಂಕ್ರಾಮಿಕ ರೋಗಿಗಳಿಗೆ ಚಿಕಿತ್ಸೆ ನೀಡಿದರೆ, ಅದರ ಮಾಹಿತಿಯನ್ನು ಆರೋಗ್ಯ ಇಲಾಖೆಗೆ ಕಡ್ಡಾಯವಾಗಿ ಸಲ್ಲಿಸಬೇಕು. ಅಲ್ಲದೆ, ಸಾಂಕ್ರಾಮಿಕ ರೋಗಗಳ ಹೆಸರಿನಲ್ಲಿ ಆಸ್ಪತ್ರೆಗಳು ಅನಗತ್ಯವಾಗಿ ಹೆಚ್ಚಿನ ಶುಲ್ಕ ವಿಧಿಸದಂತೆ ನಿಗಾ ವಹಿಸಲು ಎಸ್‍ಒಪಿ ರೂಪಿಸಲಾಗಿದೆ ಎಂದು ಖಾದರ್ ತಿಳಿಸಿದರು.


‘ಕೋವಿಡ್ ಕುರಿತು ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ಮುನ್ನೆಚ್ಚರಿಕಾ ಕ್ರಮವಾಗಿ ಗಡಿ ಭಾಗಗಳಲ್ಲೆಲ್ಲಾ ತೀವ್ರ ನಿಗಾ ವಹಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಟೆಸ್ಟಿಂಗ್ ನಡೆಸುತ್ತಿರುವುದರಿಂದ ಪ್ರಕರಣಗಳ ಸಂಖ್ಯೆ ಕೊಂಚ ಹೆಚ್ಚಾಗಿ ಕಾಣಿಸುತ್ತಿದೆ. ಆದರೆ, ಸೋಂಕಿತರೆಲ್ಲರೂ ಗುಣಮುಖರಾಗುತ್ತಿದ್ದು, ಯಾವುದೇ ಮರಣ ಪ್ರಮಾಣ ವರದಿಯಾಗಿಲ್ಲ’

-ಯು.ಟಿ.ಖಾದರ್, ಆರೋಗ್ಯ ಸಚಿವ

Tags

EpidemicsUT KhaderEbola
share
ವಾರ್ತಾಭಾರತಿ
ವಾರ್ತಾಭಾರತಿ
Next Story
X