Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಹಾಸನ ಜಿಲ್ಲಾಧಿಕಾರಿ ವಿರುದ್ಧ ಶಾಸಕ...

ಹಾಸನ ಜಿಲ್ಲಾಧಿಕಾರಿ ವಿರುದ್ಧ ಶಾಸಕ ಸ್ವರೂಪ್ ಆಕ್ರೋಶ: ಜೆಡಿಎಸ್ ಕಾರ್ಯಕರ್ತರಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ4 Nov 2023 1:28 PM IST
share
ಹಾಸನ ಜಿಲ್ಲಾಧಿಕಾರಿ ವಿರುದ್ಧ ಶಾಸಕ ಸ್ವರೂಪ್ ಆಕ್ರೋಶ: ಜೆಡಿಎಸ್ ಕಾರ್ಯಕರ್ತರಿಂದ ಪ್ರತಿಭಟನೆ

ಹಾಸನ, ನ.4: ಹಾಸನಾಂಬ ಹಾಗೂ ಸಿದ್ದೇಶ್ವರ ಜಾತ್ರಾ ಮಹೋತ್ಸವ ಕಾರ್ಯಕ್ರಮಗಳಲ್ಲಿ ಹಾಸನ ಜಿಲ್ಲಾಧಿಕಾರಿ ಸಿ. ಸತ್ಯಭಾಮಾ ಅವರು ಶಾಸಕ ಸ್ವರೂಪ್ ಪ್ರಕಾಶ್ ಅವರನ್ನು ಕಡೆಗಣಿಸಿ ಅಗೌರವ ತೋರಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರು ಹಾಸನಾಂಬ ದೇವಾಲಯದ ಎದುರು ಶನಿವಾರ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಶಾಸಕ ಸ್ವರೂಪ್ ಪ್ರಕಾಶ್, ಜಿಲ್ಲಾಧಿಕಾರಿಶಿಷ್ಟಾಚಾರ ಉಲ್ಲಂಘನೆ ಮಾಡಿದ್ದು, ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಕಡೆಗಣಿಸಿದ್ದಾರೆ. ದೇವಾಲಯದ ನೂತನ ಕಳಸ ಪ್ರತಿಷ್ಠಾಪನೆಗೂ ನನ್ನನ್ನು ಆಹ್ವಾನಿಸಿಲ್ಲ. ದೇವಾಲಯದಲ್ಲಿ ಜಿಲ್ಲಾಧಿಕಾರಿ ಪತಿಯೊಂದಿಗೆ ಹೋಮ ಹವನ ಮಾಡಿದ್ದು, ತಮ್ಮ ಸಂಬಂಧಿಕರನ್ನು ಕರೆದು ದೇವಾಲಯದಲ್ಲಿ ವಿಶೇಷ ಕಾರ್ಯಕ್ರಮವನ್ನು ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು

‘ಹೆಲಿಟೂರಿಸಂ ಉದ್ಘಾಟನೆ, ಪ್ಯಾರಾ ಸೈಲಿಂಗ್ ಹಾಗೂ ಇತರ ಕಾರ್ಯಕ್ರಮಗಳಿಗೆ ತನ್ನನ್ನು ಆಹ್ವಾನಿಸಿಲ್ಲ ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿಭಟನೆ ವೇಳೆ ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿಯನ್ನು ಸ್ವರೂಪ್ ಪ್ರಕಾಶ್ ಹಾಗೂ ಸ್ಥಳೀಯ ಜೆಡಿಎಸ್ ಮುಖಂಡರು ತರಾಟೆಗೈದರು.

ದೇವಾಲಯದ ಕಾರ್ಯಕ್ರಮಕ್ಕೆ ತನ್ನನ್ನು ಏಕೆ ಕರೆದಿಲ್ಲ ಎಂದು ಪ್ರಶ್ನಿಸಿದ ಶಾಸಕ ಸ್ವರೂಪ್, ‘ಸ್ಥಳೀಯ ಶಾಸಕನಾಗಿ ನಾನು ದನ ಕಾಯಲು ಇರೋದಾ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಉತ್ತರಿಸಿದ ಜಿಲ್ಲಾಧಿಕಾರಿ ಸಿ. ಸತ್ಯಭಾಮಾ, ‘ಧಾರ್ಮಿಕ ದತ್ತಿ ಇಲಾಖೆ ಆಗಮಿಕರು ಹೇಳಿದಂತೆ ಮಾಡಲಾಗಿದೆ’ ಎಂದರು.

ಇದಕ್ಕೆ ಒಪ್ಪದ ಸ್ವರೂಪ್, ಕಳಸ ಪ್ರತಿಷ್ಠಾಪನೆಯನ್ನು ಶಾಸ್ತ್ರೋಕ್ತವಾಗಿ ಮಾಡಬೇಕು. ಶೃಂಗೇರಿ ಶ್ರೀಗಳನ್ನು ಕರೆಸಿ, ಹೋಮ, ಹವನ ಮಾಡಬೇಕು’ ಎಂದು ಹೇಳಿದರು.

ಈ ವೇಳೆ ಸ್ವರೂಪ್ ಜೊತೆಗಿದ್ದ ನಗರಸಭೆ ಸದಸ್ಯರು, ಜೆಡಿಎಸ್ ಮುಖಂಡರು, ಜಿಲ್ಲಾಧಿಕಾರಿ ಜೊತೆ ವಾಗ್ವಾದಕ್ಕೆ ಮುಂದಾದರು. ಇದರಿಂದ ಬೇಸತ್ತ ಜಿಲ್ಲಾಧಿಕಾರಿ ಸತ್ಯಭಾಮಾ, ದೇಗುಲದ ಆವರಣದಿಂದ ಹೊರನಡೆದರು. ಜೆಡಿಎಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ವ್ಯಕ್ತಪಡಿಸಿದರು.

ದೇವಾಯಲದ ಕಳಶ ಪ್ರತಿಷ್ಠಾಪನೆಯ ಪ್ರಯುಕ್ತ ಶುಕ್ರವಾರ ಸಂಜೆ ಹೋಮ–ಹವನ ನಡೆದಿದ್ದು, ಜಿಲ್ಲಾಧಿಕಾರಿ ಸಿ. ಸತ್ಯಭಾಮಾ, ಅವರ ಪತಿ ಹಾಗೂ ಕುಟುಂಬದವರು ಪಾಲ್ಗೊಂಡಿದ್ದು, ಇದರ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X