Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅಕ್ರಮ ಹಣ ವರ್ಗಾವಣೆ ಆರೋಪ; ಶಾಸಕ...

ಅಕ್ರಮ ಹಣ ವರ್ಗಾವಣೆ ಆರೋಪ; ಶಾಸಕ ವೀರೇಂದ್ರ ಪಪ್ಪಿ ಬಂಧನ ಎತ್ತಿ ಹಿಡಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ15 Oct 2025 3:33 PM IST
share
ಅಕ್ರಮ ಹಣ ವರ್ಗಾವಣೆ ಆರೋಪ; ಶಾಸಕ ವೀರೇಂದ್ರ ಪಪ್ಪಿ ಬಂಧನ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ (ಪಿಎಂಎಲ್ಎ) ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಅಲಿಯಾಸ್ ವೀರೇಂದ್ರ ಪಪ್ಪಿ ಅವರನ್ನು ಬಂಧಿಸಿರುವ ಜಾರಿ ನಿರ್ದೇಶನಾಲಯದ (ಈಡಿ) ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಇದರಿಂದ, ಶಾಸಕ ವೀರೇಂದ್ರ ಅವರಿಗೆ ಮತ್ತಷ್ಟು ದಿನ ಜೈಲಿನಲ್ಲಿ ಕಳೆಯುವ ಪರಿಸ್ಥಿತಿ ಎದುರಾಗಿದೆ.

ವೀರೇಂದ್ರ ಅವರ ಬಂಧನವನ್ನು ಕಾನೂನುಬಾಹಿರವೆಂದು ಘೋಷಿಸಿ, ತಕ್ಷಣವೇ ಬಿಡುಗಡೆಗೊಳಿಸಲು ಆದೇಶಿಸುವಂತೆ ಕೋರಿ ವೀರೇಂದ್ರ ಪತ್ನಿ ಆರ್.ಡಿ.ಚೈತ್ರಾ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಪೂರ್ಣಗೊಳಿಸಿ, ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಪ್ರಕಟಿಸಿತು.

ವೀರೇಂದ್ರ ಅವರ ಬಂಧನವನ್ನು ಎತ್ತಿಹಿಡಿದಿರುವ ಹೈಕೋರ್ಟ್, ಅರ್ಜಿದಾರರ ಪತಿಯ ವಿರುದ್ಧದ 4 ಎಫ್‌ಐಆರ್‌ಗಳು ಮುಕ್ತಿ ಕಂಡಿರುವುದರಿಂದ ಜಾರಿ ನಿರ್ದೇಶನಾಲಯ ಬಂಧಿಸಲು ಸಾಧ್ಯವಿರಲಿಲ್ಲ. ಆದರೆ, ಕನಕಪುರ ತಾಲೂಕಿನ ಹಾರೋಹಳ್ಳಿ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಪೊಲೀಸರು ಸಕ್ಷಮ ನ್ಯಾಯಾಲಯಕ್ಕೆ ಬಿ ರಿಪೋರ್ಟ್‌ ಸಲ್ಲಿಸಿದ್ದರೂ, ಎಫ್‌ಐಆರ್‌ ಜೀವಂತವಾಗಿದೆ. ಪಿಎಂಎಲ್‌ಎ ಸೆಕ್ಷನ್‌ 2(1)(ಯು)ಗೆ ತಿದ್ದುಪಡಿ ಮಾಡಿರುವುದು ಜಾರಿ ನಿರ್ದೇಶನಾಲಯಕ್ಕೆ ಪ್ರಕರಣದಲ್ಲಿ ಮುಂದುವರಿಯಲು ಅವಕಾಶ ಕಲ್ಪಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ.

ಹೈಕೋರ್ಟ್ ಆದೇಶವೇನು?

ಅರ್ಜಿದಾರರ ಪತಿ ವೀರೇಂದ್ರ ಅವರ ಬಂಧನಕ್ಕೆ ಈಡಿ ನೀಡಿರುವ ಕಾರಣಗಳನ್ನು ಪರಿಶೀಲಿಸಿದರೆ, ವೀರೇಂದ್ರ ಅವರು ಅಕ್ರಮ ಬೆಟ್ಟಿಂಗ್ ಅಪ್ಲಿಕೇಶನ್‌ಗಳನ್ನು ನಡೆಸುವಲ್ಲಿ ಭಾಗಿಯಾಗಿದ್ದಾರೆ ಹಾಗೂ ಅವುಗಳ ಮೂಲಕ ಲಾಭ ಪಡೆದಿದ್ದಾರೆ ಎಂಬುದನ್ನು ಪ್ರಾಥಮಿಕ ತನಿಖೆ ಬಹಿರಂಗಪಡಿಸುತ್ತದೆ. ಇದಕ್ಕೆ ವಿವರವಾದ ತನಿಖೆಯ ಅಗತ್ಯವಿದೆ. ಬೆಟ್ಟಿಂಗ್ ಅಪ್ಲಿಕೇಶನ್‌ಗಳ ಮೂಲಕ ಜನರನ್ನು ವಂಚಿಸುವ ಹಾಗೂ ಆ ಮೂಲಕ ಆದಾಯಗಳಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಶದಲ್ಲಿರಿಸಿಕೊಂಡು ವಿಚಾರಣೆ ನಡೆಸುವ (Custodial Interrogation) ಅಗತ್ಯವಿದೆ ಎಂಬುದನ್ನು ಲಭ್ಯ ಸಾಕ್ಷ್ಯಾಧಾರಗಳು ಬಹಿರಂಗಪಡಿಸುತ್ತವೆ. ಆದ್ದರಿಂದ, ಪಿಎಂಎಲ್‌ಎ ಸೆಕ್ಷನ್ 19ರ ಅಡಿಯಲ್ಲಿ ಅರ್ಜಿದಾರರ ಪತಿಯನ್ನು ಬಂಧಿಸಲು ಈಡಿಗೆ ಸಕಾರಣವಿದೆ ಎಂದು ಹೈಕೋರ್ಟ್ ಹೇಳಿದೆ.

ಈ ಹಿನ್ನೆಲೆಯಲ್ಲಿ, ಪ್ರಕರಣದಲ್ಲಿ ಪಿಎಂಎಲ್‌ಎ ಅಡಿಯಲ್ಲಿ ಪರಿಗಣಿಸಲಾದ ಪೂರ್ವನಿಗದಿತ (ಪ್ರೆಡಿಕೇಟ್) ಅಪರಾಧವಿದೆ ಹಾಗೂ ಅರ್ಜಿದಾರರ ಪತಿ ಪಿಎಂಎಲ್ ಕಾಯ್ದೆ ಅಡಿಯಲ್ಲಿ ಶಿಕ್ಷಾರ್ಹ ಅಪರಾಧದಲ್ಲಿ ತಪ್ಪಿತಸ್ಥನೆಂದು ನಂಬಲು ಸಾಕಷ್ಟು ಪುರಾವೆಗಳು ಪ್ರತಿವಾದಿ ಜಾರಿ ನಿರ್ದೇಶನಾಲಯದ ಬಳಿ ಇವೆ ಎಂದು ಪರಿಗಣಿಸಬೇಕಾಗುತ್ತದೆ. ಇದು ಕಾಯ್ದೆಯ ಅಡಿಯಲ್ಲಿ ಅರ್ಜಿದಾರರ ಪತಿ ವಿರುದ್ಧ ಇಸಿಐಆರ್ ದಾಖಲು ಹಾಗೂ ಬಂಧವನ್ನು ಸಮರ್ಥಿಸುತ್ತದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಅರ್ಜಿ ವಜಾಗೊಳಿಸಿ ಆದೇಶಿಸಿದೆ.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X