ಬೆಂಗಳೂರಿನಲ್ಲಿ ʼಮಾಕ್ ಡ್ರಿಲ್ʼ ; ರಾಜಧಾನಿಯ ವಿವಿಧ ಸ್ಥಳಗಳಲ್ಲಿ ಮೊಳಗಿದ ಸೈರನ್

ಬೆಂಗಳೂರು : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತ ʼಆಪರೇಷನ್ ಸಿಂಧೂರʼ ಕಾರ್ಯಾಚರಣೆಯ ಮೂಲಕ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದೆ.
ಪಾಕಿಸ್ತಾನದ ಜೊತೆಗಿನ ಉದ್ವಿಗ್ನತೆ ಮಧ್ಯೆ ಕೇಂದ್ರದ ಗೃಹ ಇಲಾಖೆಯ ಸೂಚನೆ ಮೇರೆಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಮೇ 7) ಸಂಜೆ 4 ಗಂಟೆಗೆ ನಾಗರಿಕ ರಕ್ಷಣಾ ಅಣುಕು ಕವಾಯತು (ಮಾಕ್ ಡ್ರಿಲ್) ನಡೆದಿದೆ.
ಬೆಂಗಳೂರಿನಲ್ಲಿ ಮಾಕ್ ಡ್ರಿಲ್ ಪ್ರಯುಕ್ತ ಎರಡು ನಿಮಿಷಗಳ ಕಾಲ ಸುದೀರ್ಘವಾಗಿ ಸೈರನ್ ಮೊಳಗಿದೆ.
ಮಧ್ಯಾಹ್ನ 3:58 ರಿಂದ ಸಂಜೆ 4ರ ವರೆಗೆ ಸೈರನ್ ಮೊಳಗಿತು. ಬೆಂಗಳೂರಿನ ವೈಯಾಲಿಕಾವಲ್, ಉಪ್ಪಾರಪೇಟೆ ಪೊಲೀಸ್ ಠಾಣೆ, ಕಮರ್ಷಿಯಲ್ ಸ್ಟ್ರೀಟ್, ರಾಜಾಜಿನಗರ ಅಗ್ನಿಶಾಮಕ ಠಾಣೆ, ಹಲಸೂರು ಗೇಟ್ ಕೆರೆ, ಚಾಮರಾಜಪೇಟೆ ಅಗ್ನಿಶಾಮಕ ಠಾಣೆ, ಹಲಸೂರು ಗೇಟ್ ಅಗ್ನಿಶಾಮಕ ಠಾಣೆ ಸೇರಿದಂತೆ 35 ಸ್ಥಳಗಳಲ್ಲಿ ಸೈರನ್ ಮೊಳಗಿತು.
Next Story







