Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮೋದಿಯವರಿಗೆ ಚುನಾವಣೆ ಮಾತ್ರ ಮುಖ್ಯ, ಜನರ...

ಮೋದಿಯವರಿಗೆ ಚುನಾವಣೆ ಮಾತ್ರ ಮುಖ್ಯ, ಜನರ ಕಷ್ಟ ಅರ್ಥವಾಗುತ್ತಿಲ್ಲ: ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ23 May 2026 1:58 PM IST
share
ಮೋದಿಯವರಿಗೆ ಚುನಾವಣೆ ಮಾತ್ರ ಮುಖ್ಯ, ಜನರ ಕಷ್ಟ ಅರ್ಥವಾಗುತ್ತಿಲ್ಲ: ದಿನೇಶ್ ಗುಂಡೂರಾವ್

ಬೆಂಗಳೂರು: ಪೆಟ್ರೋಲ್ ದರ ಏರಿಕೆ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಆರ್ಥಿಕ ನೀತಿಯಿಂದ ಮುಂಬರುವ ದಿನಗಳಲ್ಲಿ ಭಾರತ ದೊಡ್ಡ ಸಮಸ್ಯೆಗೆ ಸಿಲುಕಲಿದೆ. ದೇಶದ ಜನರು ಸಂಕಷ್ಟಕ್ಕೆ ಒಳಗಾಗಲಿದ್ದಾರೆ ಎಂದು ರಾಹುಲ್ ಗಾಂಧಿಯವರು ಆರು ತಿಂಗಳ ಹಿಂದೆಯೇ ಹೇಳಿದ್ದರು ಎಂದು ತಿಳಿಸಿದರು.

ಅನಾವಶ್ಯಕವಾಗಿ ನಡೆಯುತ್ತಿರುವ ಯುದ್ಧದಿಂದ ಈ ಪರಿಸ್ಥಿತಿ ಬಂದಿದೆ ಎನ್ನುವುದನ್ನು ಒಪ್ಪಿಕೊಳ್ಳೋಣ. ಕೇಂದ್ರ ಸರ್ಕಾರ ಮೊದಲಿನಿಂದಲೂ ಸರಿಯಾಗಿ ನಡೆದುಕೊಂಡಿಲ್ಲ. ಭಾರತದ ನಿಲುವು ಏನು ಎನ್ನುವುದನ್ನು ಹೇಳಿಲ್ಲ. ಪ್ರವಾಸ ಮಾಡಬೇಡಿ, ಚಿನ್ನ ಖರೀದಿಸಬೇಡಿ ಇಂತಹ ಹೇಳಿಕೆ ನೀಡುತ್ತ ಮೊದಿಯವರು ಕಾಲ ಕಳೆಯುತ್ತಿದ್ದಾರೆ. ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಲ್ಲಿ ಸೋತಿದ್ದಾರೆ ಎಂದು ಟೀಕಿಸಿದರು.

ಹಿಂದೆ ಮನಮೋಹನ್ ಸಿಂಗ್ ಪ್ರಧಾನಿ ಇದ್ದಾಗ, ಬ್ಯಾರಲ್ ಗೆ 120 ಡಾಲರ್ ವರೆಗೂ ಹೋಗಿತ್ತು. ಆದರೆ ಜನರಿಗೆ ತೊಂದರೆ ಆಗದಂತೆ ಅವರು ಕ್ರಮ ಕೈಗೊಂಡಿದ್ದರು. ಆದರೆ ಈಗ ಎನಾಗಿದೆ ನೋಡಿ. ಈವರೆಗೆ ಕಡಿಮೆ ದರ ಇದ್ದಾಗಲೂ ಕೇಂದ್ರ ಸರ್ಕಾರ ಪೆಟ್ರೋಲ್ ದರ ಇಳಿಸಿರಲಿಲ್ಲ. ಬೇಕಾದಷ್ಟು ಲಾಭ ಮಾಡಿಕೊಂಡಿತ್ತು. ಈಗ ಯುದ್ಧದ ಕಾರಣದಿಂದ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಏರಿಕೆ ಆದಾಗ ಟಾಕ್ಸ್ ದರ ಇಳಿಸಿ ಜನರಿಗೆ ಅನುಕೂಲ ಮಾಡುವ ಬದಲು ತೈಲದರ ಏರಿಕೆಯನ್ನು ನಿರಂತರವಾಗಿ ಮಾಡುತ್ತಿದೆ. ಜನಸಾಮಾನ್ಯರ ಬದುಕನ್ನೇ ತೊಂದರೆಗೆ ಸಿಲುಕಿಸಿದೆ ಎಂದು ಆರೋಪಿಸಿದರು.

ಮೋದಿಯವರಿಗೆ ಚುನಾವಣೆ ಗೆಲ್ಲುವುದು ಮಾತ್ರ ಪ್ರಾಮುಖ್ಯ. ಜನರ ಕಷ್ಟ ಬೇಕಾಗಿಲ್ಲ. ಸಮಾಜವನ್ನು ವಿಭಜಿಸಿ, ಶಾಂತಿ, ಸಹಬಾಳ್ವೆಯನ್ನು ಹಾಳುಮಾಡಿ, ಇಸ್ಟಾಗ್ರಾಂ ನಲ್ಲಿ ಫೋಟೋ, ವಿಡಿಯೋ ಹಾಕುತ್ತ ಕಾಲ ಕಳೆಯುತ್ತಿದ್ದಾರೆ. ಸಾರ್ವಜನಿಕರು ತೊಂದರೆಯಲ್ಲಿ ಬೇಯುತ್ತಿದ್ದಾರೆ ಎಂದು ಹೇಳಿದರು.

ನೀಟ್ ಪರೀಕ್ಷೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ಕೇಂದ್ರ ಅನುಮತಿ ನೀಡಿದರೆ ರಾಜ್ಯಮಟ್ಟದಲ್ಲಿ ನಾವು ನೀಟ್ ಪರೀಕ್ಷೆ ನಡೆಸಲು ಸಿದ್ಧ. ಪ್ರತಿ ವರ್ಷವೂ ಕೇಂದ್ರ ಸರಕಾರ ನೀಟ್ ಪರೀಕ್ಷೆಯಲ್ಲಿ ಒಂದಲ್ಲ ಒಂದು ಎಡವಟ್ಟು ಮಾಡುವ ಮೂಲಕ ವಿದ್ಯಾರ್ಥಿಗಳನ್ನು ಸಂಕಷ್ಟಕ್ಕೆ ದೂಡಿದೆ. ಜವಾಬ್ದಾರಿಯುತವಾಗಿ ಪರೀಕ್ಷೆ ನಡೆಸದೆ, ಹೊಣೆಗಾರಿಕೆಯಿಲ್ಲದಂತೆ ವ್ಯವಹರಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹಲವಾರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡರು. ಪೋಷಕರ ಗೋಳು ಕೇಳುವವರು ಯಾರು? ಜನಸಾಮಾನ್ಯರ ಕಷ್ಟ ಕೇಂದ್ರ ಸರ್ಕಾರಕ್ಕೆ ಅರ್ಥವೇ ಆಗುತ್ತಿಲ್ಲ. ನಾವು ಪ್ರಾರಂಭಿಸಿದ ಸಿಇಟಿ ಮಾದರಿಯಾಗಿ ನಡೆಯುತ್ತಿದೆ. ಹಾಗಾಗಿ ನೀಟ್ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ನಾವು ಸಿದ್ಧರಿದ್ದೇವೆ ಎಂದು ಹೇಳಿದರು.

Tags

ModielectionDinesh Gundu Rao
share
ವಾರ್ತಾಭಾರತಿ
ವಾರ್ತಾಭಾರತಿ
Next Story
X