ಹೆಚ್ಚುವರಿ ಸರಕಾರಿ ಅಭಿಯೋಜಕರಾಗಿ ಮುಹಮ್ಮದ್ ಅಯುಬ್ ಅಲಿ ನೇಮಕ

ಬೆಂಗಳೂರು: ನ್ಯಾಯವದಿ ಮುಹಮ್ಮದ್ ಅಯುಬ್ ಅಲಿ ಬಿನ್ ಮುಹಮ್ಮದ್ ಸಾದತ್ ಅಲಿ ಅವರನ್ನು ಹೆಚ್ಚುವರಿ ಸರಕಾರಿ ಅಭಿಯೋಜಕರಾಗಿ ನೇಮಕ ಮಾಡಲಾಗಿದೆ.
ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳಡಿ ಹೊಸದಾಗಿ ಸೃಜಿಸಿರುವ ಹೆಚ್ಚುವರಿ ರಾಜ್ಯ ಸರಕಾರಿ ಅಭಿಯೋಜಕರ ಹುದ್ದೆಗೆ ಹುದ್ದೆಯ ಪ್ರಭಾರವನ್ನು ವಹಿಸಿಕೊಳ್ಳುವ ದಿನಾಂಕದಿಂದ ಜಾರಿಗೆ ಬರುವಂತೆ ಎರಡು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಇವೆರಡರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ನೇಮಿಸಲಾಗಿದೆ ಎಂದು ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಗಳ ಅಧೀನ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





