Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿಜೆಪಿಯ ಗೆಲುವಿನಲ್ಲಿ ಹಣ ಮತ್ತು...

ಬಿಜೆಪಿಯ ಗೆಲುವಿನಲ್ಲಿ ಹಣ ಮತ್ತು ಕೋಮುವಾದಿ ರಾಜಕಾರಣದ ಪಾತ್ರ ಇದೆ: ಸಿಎಂ ಸಿದ್ದರಾಮಯ್ಯ

"ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ"

ವಾರ್ತಾಭಾರತಿವಾರ್ತಾಭಾರತಿ3 Dec 2023 6:41 PM IST
share
ಬಿಜೆಪಿಯ ಗೆಲುವಿನಲ್ಲಿ ಹಣ ಮತ್ತು ಕೋಮುವಾದಿ ರಾಜಕಾರಣದ ಪಾತ್ರ ಇದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೂರು ರಾಜ್ಯಗಳಲ್ಲಿ ಬಿಜೆಪಿಯ ಗೆಲುವಿನಲ್ಲಿ ಹಣ ಮತ್ತು ಕೋಮುವಾದಿ ರಾಜಕಾರಣದ ಪಾತ್ರ ಇದೆ. ಅದರ ಜೊತೆ ಧರ್ಮದ ಆಧಾರದಲ್ಲಿ ಸಮಾಜವನ್ನು ಒಡೆಯುವ ತಮ್ಮ ಹಳೆಯ ಆಟವನ್ನು ಮುಂದುವರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ರವಿವಾರ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶದ ಬಳಿಕ ಮಾತನಾಡಿದ ಅವರು, ನಾಲ್ಕು ರಾಜ್ಯಗಳ ಚುನಾವಣೆಗಳ ಪೈಕಿ ತೆಲಂಗಾಣದಲ್ಲಿ ಕಾಂಗ್ರೆಸ್ ಸ್ಪಷ್ಟ ಗೆಲುವು ಸಾಧಿಸಿದೆ. ಮಧ್ಯಪ್ರದೇಶ, ರಾಜಸ್ಥಾ ನ, ಛತ್ತೀಸ್‍ಗಡಗಳಲ್ಲಿ ಹಿನ್ನಡೆ ಆಗಿದೆ ಎಂದರು.

ರಾಹುಲ್ ಗಾಂಧಿಯವರ ಭಾರತ್ ಜೋಡೋ ಕಾರ್ಯಕ್ರಮ ಅಲ್ಲಿನ ಪಕ್ಷದ ಕಾರ್ಯಕರ್ತರನ್ನು ಇನ್ನಷ್ಟು ಹುರಿದುಂಬಿಸಿದ್ದು ನಿಜ. ಅದರ ನಂತರ ಬಹಳ ವ್ಯವಸ್ಥಿತವಾದ ಪ್ರಚಾರ ನಡೆಯಿತು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಮತ್ತು ನುಡಿದಂತೆ ನಡೆದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಗೊಳಿಸಿದ್ದು ತೆಲಂಗಾಣದ ಮತದಾರರು ಕಾಂಗ್ರೆಸ್ ಪಕ್ಷದ ಮೇಲೆ ಭರವಸೆ ಇಡುವಂತಾಯಿತು ಎಂದು ಸಿದ್ದರಾಮಯ್ಯ ನುಡಿದರು.

ತೆಲಂಗಾಣ ನಮ್ಮ ನೆರೆಯ ರಾಜ್ಯವಾಗಿರುವ ಕಾರಣ ಅಲ್ಲಿನ ಗೆಲುವಿನಲ್ಲಿ ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಗಳ ಯಶಸ್ಸು ಮತ್ತು ಕಾಂಗ್ರೆಸ್ ಪಕ್ಷದ ನಾಯಕರ ಶ್ರಮದ ದೊಡ್ಡ ಪಾತ್ರ ಇದೆ. ವರ್ಷದ ಹಿಂದೆ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎನ್ನುವುದನ್ನು ಯಾರೂ ನಿರೀಕ್ಷಿಸಿರಲಿಲ್ಲ ಎಂದು ಹೇಳಿದರು.

ಬಿಜೆಪಿ, ಬಿಆರ್ ಎಸ್ ಪಕ್ಷದ ಜೊತೆ ಒಳ ಒಪ್ಪಂದ ಮಾಡಿಕೊಂಡದ್ದು ಮತದಾರರು ಎರಡು ಪಕ್ಷಗಳ ಮೇಲೆ ಭರವಸೆ ಕಳೆದುಕೊಳ್ಳುವಂತೆ ಮಾಡಿತು. ಈ ಒಳ ಒಪ್ಪಂದದ ತಂತ್ರಗಾರಿಕೆಯನ್ನು ಕಾಂಗ್ರೆಸ್ ಪಕ್ಷ ಪ್ರಚಾರದ ಸಮಯದಲ್ಲಿ ಬಯಲು ಮಾಡಿದ್ದು ಕೂಡಾ ನಮ್ಮ ಗೆಲುವಿಗೆ ಕಾರಣ ಎಂದು ಅವರು ತಿಳಿಸಿದರು.

ತಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಸಾಧ್ಯತೆಯೇ ಇಲ್ಲದೆ ಇರುವ ಕಾರಣಕ್ಕೆ ಬಿಜೆಪಿ ಅಲ್ಲಿ ಹೆಚ್ಚು ಹಣವನ್ನು ವ್ಯರ್ಥಮಾಡಲು ಹೋಗಿಲ್ಲ. ಅಲ್ಲಿ ಬಿಜೆಪಿ ಕೋಮುವಾದಿ ರಾಜಕಾರಣಕ್ಕೆ ಅವಕಾಶ ಇರಲಿಲ್ಲ. ರಾಜಸ್ತಾನದಲ್ಲಿ ಸಾಮಾನ್ಯವಾಗಿ ಪ್ರತಿ ಚುನಾವಣೆಯಲ್ಲಿ ಪಕ್ಷವನ್ನು ಬದಲಾಯಿಸುವ ಕಾರಣದಿಂದಾಗಿ ಅಶೋಕ್ ಗೆಹ್ಲೋತ್ ಸರಕಾರ ಒಳ್ಳೆಯ ಕೆಲಸ ಮಾಡಿದ್ದರೂ ಮರಳಿ ಅಧಿಕಾರಕ್ಕೆ ಬರಲು ಸಾಧ್ಯವಾಗಿಲ್ಲ ಎಂದು ಸಿದ್ದರಾಮಯ್ಯ ವಿಶ್ಲೇಷಣೆ ಮಾಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು-ಗೆಲುವು ಸ್ವಾಭಾವಿಕ. ಪ್ರತಿಯೊಂದು ಚುನಾವಣಾ ಫಲಿತಾಂಶದಲ್ಲಿ ರಾಜಕೀಯ ಪಕ್ಷಗಳು ಕಲಿಯುವ ಪಾಠ ಇದೆ. ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X