ಮುಂಗಾರು ಅಧಿವೇಶನ | ವಿಧಾನಸಭೆಯಲ್ಲಿ 21 ವಿಧೇಯಕಗಳ ಮಂಡನೆ

ಬೆಂಗಳೂರು, ಆ.12: 2025ನೆ ಸಾಲಿನ ಬಾಲ್ಯ ವಿವಾಹ ನಿಷೇಧ(ಕರ್ನಾಟಕ ತಿದ್ದುಪಡಿ) ವಿಧೇಯಕ, ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ(ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ) ವಿಧೇಯಕ ಸೇರಿದಂತೆ 21 ವಿಧೇಯಕಗಳನ್ನು ಮಂಗಳವಾರ ವಿಧಾನಸಭೆಯಲ್ಲಿ ಮಂಡಿಸಲಾಯಿತು.
2025ನೆ ಸಾಲಿನ ಕರ್ನಾಟಕ ಅಗ್ನಿಶಾಮಕದಳ(ತಿದ್ದುಪಡಿ) ವಿಧೇಯಕ, ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ(ವೈದ್ಯಾಧಿಕಾರಿಗಳ ಮತ್ತು ಇತರ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ)(ತಿದ್ದುಪಡಿ) ವಿಧೇಯಕ, ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ(ತಿದ್ದುಪಡಿ) ವಿಧೇಯಕ.
ಕರ್ನಾಟಕ ವೈದ್ಯಕೀಯ ನೋಂದಣಿ(ತಿದ್ದುಪಡಿ) ವಿಧೇಯಕ, ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ(ತಿದ್ದುಪಡಿ) ವಿಧೇಯಕ, ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ(ತಿದ್ದುಪಡಿ) ವಿಧೇಯಕ, ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ(ತಿದ್ದುಪಡಿ) ವಿಧೇಯಕ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ(ತಿದ್ದುಪಡಿ) ವಿಧೇಯಕ, ಕೂಡಲ ಸಂಗಮ ಅಭಿವೃದ್ಧಿ ಮಂಡಳಿ(ತಿದ್ದುಪಡಿ) ವಿಧೇಯಕ.
ಬನವಾಸಿ ಅಭಿವೃದ್ಧಿ ಪ್ರಾಧಿಕಾರ(ತಿದ್ದುಪಡಿ) ವಿಧೇಯಕ, ಸರ್ವಜ್ಞ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ(ತಿದ್ದುಪಡಿ) ವಿಧೇಯಕ, ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ(ತಿದ್ದುಪಡಿ) ವಿಧೇಯಕ, ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ(ತಿದ್ದುಪಡಿ) ವಿಧೇಯಕವನ್ನು ಮಂಡಿಸಲಾಯಿತು.
2025ನೆ ಸಾಲಿನ ಕರ್ನಾಟಕ ಸರಕಾರಿ ವ್ಯಾಜ್ಯ ನಿರ್ವಹಣೆ ತಿದ್ದುಪಡಿ ವಿಧೇಯಕ, ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ ಸೌಲಭ್ಯ ಮತ್ತು ನಿಯಂತ್ರಣ ತಿದ್ದುಪಡಿ ವಿಧೇಯಕ, ಕರ್ನಾಟಕ ಅತ್ಯಾವಶ್ಯಕ ನಿರ್ವಹಣಾ ತಿದ್ದುಪಡಿ ವಿಧೇಯಕ, ನೋಂದಣಿ (ಕರ್ನಾಟಕ ತಿದ್ದುಪಡಿ) ವಿಧೇಯಕ, ಕರ್ನಾಟಕ ಭೂ ಸುಧಾರಣೆಗಳು ಮತ್ತು ಕೆಲವು ಇತರೆ ತಿದ್ದುಪಡಿ ವಿಧೇಯಕ, ಕರ್ನಾಟಕ ಬಂದರುಗಳ ಸರಕು ಹಡಗುನಿಂದ ಇಳಿಸುವ ಮತ್ತು ಹಡಗಿಗೆ ತುಂಬ ಶುಲ್ಕಗಳ ವಿಧೇಯಕವನ್ನು ಮಂಡಿಸಲಾಯಿತು.







