Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ʼಬಿಜೆಪಿ-ಜೆಡಿಎಸ್ ಸಭಾತ್ಯಾಗʼ |...

ʼಬಿಜೆಪಿ-ಜೆಡಿಎಸ್ ಸಭಾತ್ಯಾಗʼ | ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ಸಮಸ್ಯೆಗೆ ಕಾರಣ : ಎನ್.ಚಲುವರಾಯಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ13 Aug 2025 9:36 PM IST
share
ʼಬಿಜೆಪಿ-ಜೆಡಿಎಸ್ ಸಭಾತ್ಯಾಗʼ | ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ಸಮಸ್ಯೆಗೆ ಕಾರಣ : ಎನ್.ಚಲುವರಾಯಸ್ವಾಮಿ

ಬೆಂಗಳೂರು, ಆ.13 : ಕೇಂದ್ರದಿಂದ ರಸಗೊಬ್ಬರ ಪೂರೈಕೆಯಲ್ಲಿ ಆಗಿರುವ ಕೊರತೆಯಿಂದಾಗಿ ರಾಜ್ಯದಲ್ಲಿ ರಸಗೊಬ್ಬರ ಸಮಸ್ಯೆ ಉಂಟಾಗಿದ್ದು, ಇದರಲ್ಲಿ ಯಾವುದೇ ರಾಜಕೀಯ ಮಾಡದೆ ಎಲ್ಲರೂ ಒಂದಾಗಿ ರೈತರ ಹಿತ ಕಾಯಬೇಕಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಬುಧವಾರ ವಿಧಾನಸಭೆಯಲ್ಲಿ ನಿಯಮ 69ರಡಿ ರಾಜ್ಯದಲ್ಲಿ ತಲೆದೋರಿರುವ ರಸಗೊಬ್ಬರ ಸಮಸ್ಯೆಯ ಕುರಿತು ನಡೆದ ಚರ್ಚೆಗೆ ಉತ್ತರ ನೀಡಿದ ಅವರು, ರಾಜ್ಯದಲ್ಲಿ ಮುಂಗಾರು ಒಂದು ತಿಂಗಳು ಮುಂಚಿತವಾಗಿ ಪ್ರಾರಂಭವಾಗಿದ್ದು, ಬಿತ್ತನೆ ನಿರೀಕ್ಷೆಗೂ ಮುಂಚೆ ಚಾಲನೆಯಾಗಿದೆ ಎಂದು ಹೇಳಿದರು.

ಅಲ್ಲದೇ 2 ಲಕ್ಷ ಹೆಕ್ಟರ್ ಬಿಳಿ ಜೋಳ ಬಿತ್ತನೆ ಪ್ರದೇಶ ಹೆಚ್ಚಳವಾಯಿತು. ಹಾಗೂ ಕೇಂದ್ರದಿಂದ ಈವರೆಗೆ 2.77 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಪೂರೈಕೆ ಕೊರತೆಯಾಗಿರುವುದು ಸಮಸ್ಯೆಗೆ ಕಾರಣವಾಗಿದೆ. ಆದರೂ ಲಭ್ಯವಿದ್ದ ಕಾಪು ದಾಸ್ತಾನು ಬಳಸಿ ಬಹುತೇಕ ತೊಂದರೆಯನ್ನು ನಿಭಾಯಿಸಲಾಗಿದೆ ಎಂದು ಚಲುವರಾಯಸ್ವಾಮಿ ತಿಳಿಸಿದರು.

ರಸಗೊಬ್ಬರ ಪೂರೈಕೆ ಸಂಪೂರ್ಣ ಕೇಂದ್ರದ ಜವಾಬ್ದಾರಿ ರಾಜ್ಯದಿಂದ 12.5 ಲಕ್ಷ ಮೆಟ್ರಿಕ್ ಟನ್ ಯೂರಿಯಾಕ್ಕೆ ಬೇಡಿಕೆ ಸಲ್ಲಿಸಲಾಗಿತ್ತು. ಕೇಂದ್ರದಿಂದ 11.70 ಲಕ್ಷ ಮೆ.ಟನ್ ಹಂಚಿಕೆ ಮಾಡಲಾಗಿತ್ತು. ಆಗಸ್ಟ್ ಅಂತ್ಯದವರೆಗೆ 9.05 ಲಕ್ಷ ಮೆ.ಟನ್ ಪೂರೈಕೆ ಮಾಡಬೇಕಾಗಿತ್ತು. ಆದರೆ ಈವರೆಗೆ 6.30 ಲಕ್ಷ ಮೆ.ಟನ್ ಮಾತ್ರ ಪೂರೈಕೆಯಾಗಿದೆ. ಹಿಂದೆ ಇದ್ದ 3.46 ಲಕ್ಷ ಮೆ.ಟನ್ ಕಾಪುದಾಸ್ತಾನು ಬಳಸಿ ಪರಿಸ್ಥಿತಿ ನಿಭಾಯಿಸಲಾಗಿದೆ ಎಂದು ಅವರು ಹೇಳಿದರು.

ಈ ಹಿಂದಿನ ವರ್ಷಗಳಲ್ಲಿ ಕಾಪುದಾಸ್ತಾನು ಪರಿಗಣಿಸದೆ ರಸಗೊಬ್ಬರವನ್ನು ರಾಜ್ಯಕ್ಕೆ ಪೂರೈಕೆ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಸರಬರಾಜಿನಲ್ಲಿ ಕೊರತೆ ಮಾಡಲಾಗಿದೆ. ಅಲ್ಲದೇ ಡಿ.ಎ.ಪಿ ಮತ್ತು ಯೂರಿಯಾ ಬಳಕೆ ಕಡಿಮೆ ಮಾಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ ಎಂದು ಚಲುವರಾಯಸ್ವಾಮಿ ತಿಳಿಸಿದರು.

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ರಾಜ್ಯದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು, ನಮ್ಮ ಇತರ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದನೆ ನೀಡುತ್ತಿದ್ದಾರೆ. ಅವರನ್ನು ಜುಲೈ ತಿಂಗಳಿನಲ್ಲೆ ಭೇಟಿ ಮಾಡಿ ರಾಜ್ಯದ ಕೃಷಿ ಹಾಗೂ ರಸಗೊಬ್ಬರ ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸಲಾಗಿತ್ತು. ಕೇಂದ್ರ ರಸಗೊಬ್ಬರ ಸಚಿವರ ಭೇಟಿಗೂ ಅವಕಾಶ ಕೋರಲಾಗಿತ್ತು ಎಂದು ಅವರು ಹೇಳಿದರು.

ಅಲ್ಲದೇ ಕೇಂದ್ರದಿಂದ ಅಗತ್ಯ ಪ್ರಮಾಣದ ರಸಗೊಬ್ಬರ ಪೂರೈಸುವಂತೆ ರಾಜ್ಯದಿಂದ ಆಯ್ಕೆಯಾಗಿರುವ ಕೇಂದ್ರ ಸಚಿವರು ಹಾಗೂ ಸಂಸದರು, ರಾಜ್ಯಸಭಾ ಸದಸ್ಯರಿಗೆ ಪತ್ರ ಬರೆದು ಮನವಿ ಮಾಡಲಾಗಿತ್ತು. ರಸಗೊಬ್ಬರದ ವಾಸ್ತವ ಸ್ಥಿತಿ ಅರಿತಿದ್ದರೂ ಪ್ರತಿಪಕ್ಷಗಳು ಪ್ರತಿಭಟನೆಗೆ ಇಳಿದ ಕಾರಣ ರೈತರಲ್ಲೂ ಗೊಂದಲ ಉಂಟಾಯಿತು ಎಂದು ಚಲುವರಾಯಸ್ವಾಮಿ ದೂರಿದರು.

ಕೆಲವೆಡೆ ರೈತರು ಮುಂದಿನ 2 ತಿಂಗಳ ಅವಧಿಗೆ ಬೇಕಿರುವ ಗೊಬ್ಬರವನ್ನು ಈಗಲೇ ಖರೀದಿಸಲು ಮುಂದಾಗಿದ್ದು, ಯೂರಿಯಾ ಕೊರತೆಗೆ ಪ್ರಮುಖ ಕಾರಣವಾಯಿತು. ಈಗಲಾದರೂ ರಾಜಕೀಯ ಬಿಟ್ಟು ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿರುವ ಬಾಕಿ ರಸಗೊಬ್ಬರ ಪೂರೈಕೆಗೆ ಸಹಕರಿಸಿ, ರೈತರ ಸಮಸ್ಯೆಗಳನ್ನು ಬಗೆಹರಿಸಲು ಒಟ್ಟಾಗಿ ಕೆಲಸ ಮಾಡೋಣ ಎಂದು ಅವರು ಮನವಿ ಮಾಡಿದರು.

ಶಿವರಾಜ್ ಸಿಂಗ್ ಚೌಹಾಣ್ ಮಾವು ಬೆಳೆಗಾರರ ವಿಚಾರದಲ್ಲೂ ಸಮಸ್ಯೆ ಬಗೆಹರಿಸಿಕೊಟ್ಟರು. ಆದರೆ, ಕೇಂದ್ರ ಸಚಿವ ಜೆ.ಪಿ.ನಡ್ಡಾ ನಮಗೆ ಸಿಕ್ಕಿಲ್ಲ. ಇರಾನ್, ಚೀನಾದಲ್ಲಿನ ಪರಿಸ್ಥಿತಿ ಸೇರಿದಂತೆ ಹಲವಾರು ಕಾರಣಗಳಿಂದ ಇಡೀ ದೇಶದಲ್ಲಿ ರಸಗೊಬ್ಬರದ ಕೊರತೆ ಉಂಟಾಗಿದೆ. ಅದೇ ರೀತಿ, ನಮ್ಮ ರಾಜ್ಯದಲ್ಲೂ ಸಮಸ್ಯೆ ಆಗಿದೆ ಎಂದು ಅವರು ಹೇಳಿದರು.

ಹಾವೇರಿಯಲ್ಲಿ ರೈತರು ಹೆಚ್ಚು ಹೋರಾಟ ಮಾಡಿದರು. ಅಲ್ಲಿ 53 ಸಾವಿರ ಮೆಟ್ರಿಕ್ ಟನ್ ರಸಗೊಬ್ಬರದ ಬೇಡಿಕೆಯಿತ್ತು. ನಾವು 61 ಸಾವಿರ ಮೆಟ್ರಿಕ್ ಟನ್ ಪೂರೈಕೆ ಮಾಡಿದ್ದೇವೆ. ರಾಜ್ಯದಲ್ಲಿ ಲಭ್ಯವಿರುವ 96 ಸಾವಿರ ಮೆಟ್ರಿಕ್ ಟನ್ ರಸಗೊಬ್ಬರ ನಮ್ಮ ನಿಯಂತ್ರಣದಲ್ಲಿ ಇಲ್ಲ. ಅದು ಸುಮಾರು 5 ಸಾವಿರ ಅಂಗಡಿಗಳಲ್ಲಿ ದಾಸ್ತಾನು ಇದೆ. ಪ್ರತಿಪಕ್ಷಗಳು ನಾಳೆಯಿಂದ ಈ ವಿಚಾರದಲ್ಲಿ ರಾಜಕಾರಣ ಮಾಡದಿದ್ದರೆ ಶೇ.50ರಷ್ಟು ಸಮಸ್ಯೆ ಬಗೆಹರಿಯುತ್ತದೆ ಎಂದು ಚಲುವರಾಯಸ್ವಾಮಿ ಹೇಳಿದರು.

ಪ್ರತಿಪಕ್ಷಗಳ ಸಭಾತ್ಯಾಗ ಬಳಿಕ ಮಾತು ಮುಂದುವರೆಸಿದ ಚಲುವರಾಯಸ್ವಾಮಿ, ಮಹಾದಾಯಿ, ಬೆಂಗಳೂರು ಅಭಿವೃದ್ಧಿ, ತೆರಿಗೆ ಹಂಚಿಕೆ, ಆಲಮಟ್ಟಿ, ನಬಾರ್ಡ್‍ನಲ್ಲಿ ಅನುದಾನ ಕಡಿತ ಸೇರಿದಂತೆ ಎರಡು ವರ್ಷಗಳಿಂದ ಕೇಂದ್ರ ಸರಕಾರ ಯಾವ ರೀತಿ ನಮ್ಮ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ನಾವು ಕೇಂದ್ರದ ಜೊತೆ ಸಂಘರ್ಷಕ್ಕೆ ಎಡೆ ಮಾಡಿಕೊಡದೆ ರಾಜ್ಯದ ಅಭಿವೃದ್ಧಿ ಹಾಗೂ ರೈತರ ಕಲ್ಯಾಣಕ್ಕೆ ಆದ್ಯತೆ ನೀಡಿದ್ದೇವೆ ಎಂದು ಹೇಳಿದರು.

ರಾಜ್ಯಕ್ಕೆ ಬರಬೇಕಿರುವ ಬಾಕಿ ರಸಗೊಬ್ಬರವನ್ನು ಬಿಜೆಪಿಯವರು ಬಿಡುಗಡೆ ಮಾಡಿಸಿದರೆ ಅಶೋಕ್ ಅವರ ಮನೆಗೂ ಐದು ಚೀಲ ರಸಗೊಬ್ಬರ ಕಳುಹಿಸಿಕೊಡುತ್ತೇನೆ. ರೈತರನ್ನು ಪ್ರಚೋದಿಸಿ ಹೋರಾಟಕ್ಕೆ ಕಳುಹಿಸಿಕೊಡುತ್ತಿದ್ದಾರೆ. ನಮ್ಮ ಸರಕಾರವನ್ನು ಟೀಕಿಸಲು ಮಾಡಲು ಆಗಲ್ಲ, ಯಾವುದೊ ಒಂದು ವಿಷಯವನ್ನು ಇಟ್ಟುಕೊಂಡು ಗಾಳಿಯಲ್ಲಿ ಗುಂಡು ಹೊಡೆಯುವವರನ್ನು ರಾಜ್ಯದ ಜನ ಬುದ್ದಿ ಕಲಿಸುತ್ತಾರೆ ಎಂದು ಚಲುವರಾಯಸ್ವಾಮಿ ಹೇಳಿದರು.

ಬಿಜೆಪಿ-ಜೆಡಿಎಸ್ ಸಭಾತ್ಯಾಗ: ಗೊಬ್ಬರದ ರಾಜಕಾರಣ ಬೇಡ. ನಾಳೆಯಿಂದ ಎಲ್ಲೂ ರೈತರು ಸರತಿ ಸಾಲಿನಲ್ಲಿ ನಿಲ್ಲುವ ಅಗತ್ಯವಿಲ್ಲ. ಧರಣಿ ಇಲ್ಲ, ಹೋರಾಟಗಳಿಲ್ಲ. ಎಲ್ಲೂ ಸಮಸ್ಯೆಗಳು ಇರುವುದಿಲ್ಲ ಎಂದು ಸಚಿವರು ಹೇಳಬೇಕಿತ್ತು. ನಮ್ಮ ಅಂಕಿ ಅಂಶಗಳಿಗೂ, ಅವರು ಕೊಟ್ಟಿರುವ ಅಂಕಿ ಅಂಶಗಳಿಗೂ ತಾಳೆ ಆಗುತ್ತಿಲ್ಲ. ಆ.11 ರವರೆಗೆ ಯೂರಿಯಾ 96 ಸಾವಿರ ಮೆಟ್ರಿಕ್ ಟನ್, 66 ಸಾವಿರ ಮೆ.ಟನ್ ಡಿಎಪಿ, 3.50 ಲಕ್ಷ ಮೆಟ್ರಿಕ್ ಟನ್ ಎಂಪಿಕೆ ನಿಮ್ಮ ಬಳಿಯಿದೆ ಎಂದು ಮಾಹಿತಿಯಿದೆ. ಆದರೂ, ಕಾಳಸಂತೆಯ ವ್ಯವಹಾರಗಳು ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕುವಲ್ಲಿ ಸರಕಾರ ವಿಫಲವಾಗಿದೆ ಎಂದು ಆರೋಪಿಸಿದ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಸಭಾತ್ಯಾಗ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X