Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಹಾಸನ ಜಿಲ್ಲೆ ಹೃದಯಾಘಾತ ಪ್ರಕರಣಗಳ...

‘ಹಾಸನ ಜಿಲ್ಲೆ ಹೃದಯಾಘಾತ ಪ್ರಕರಣಗಳ ಹೆಚ್ಚಳ’: ವಿಧಾನಸಭೆಯಲ್ಲಿ ಪ್ರತಿಧ್ವನಿ

ವಾರ್ತಾಭಾರತಿವಾರ್ತಾಭಾರತಿ14 Aug 2025 6:33 PM IST
share
‘ಹಾಸನ ಜಿಲ್ಲೆ ಹೃದಯಾಘಾತ ಪ್ರಕರಣಗಳ ಹೆಚ್ಚಳ’: ವಿಧಾನಸಭೆಯಲ್ಲಿ ಪ್ರತಿಧ್ವನಿ

ಬೆಂಗಳೂರು, ಆ. 14: ಹಾಸನ ಜಿಲ್ಲೆಯಲ್ಲಿ ಇತ್ತೀಚೆಗೆ ವರದಿಯಾಗಿದ್ದ ಹಠಾತ್ ಹೃದಯಾಘಾತದ ಸಾವು ಪ್ರಕರಣಗಳು ವಿಧಾನಸಭೆಯಲ್ಲಿಯೂ ಪ್ರತಿಧ್ವನಿಸಿತು. ಈ ಸಾವು ಪ್ರಕರಣಗಳ ತಡೆಗಟ್ಟಲು ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಹಾಗೂ ಬಿಜೆಪಿ ಸದಸ್ಯರು ಒತ್ತಾಯಿಸಿದರು.

ಗುರುವಾರ ವಿಧಾನಸಭೆ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್‍ನ ಹಿರಿಯ ಸದಸ್ಯ ಎಚ್.ಡಿ.ರೇವಣ್ಣ ಪರವಾಗಿ ಜೆಡಿಎಸ್ ಸದಸ್ಯ ಎ.ಮಂಜು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಹಾಸನ ಜಿಲ್ಲೆ ಹೃದಯಘಾತದಿಂದ ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ರವೀಂದ್ರನಾಥ್ ನೇತೃತ್ವದ ಸಮಿತಿ ವರದಿ ಪಡೆಯಲಾಗಿದೆ.

‘ಸದರಿ ವರದಿಯ ಪ್ರಕಾರ ಹೃದಯಾಘಾತ ಪ್ರಕರಣಗಳಲ್ಲಿ ಶೇ.75ಕ್ಕಿಂತ ಹೆಚ್ಚು ಜನರು ಒಂದಕ್ಕಿಂತ ಹೆಚ್ಚು ಹೃದಯದ ಅಪಾಯಕಾರಿ ಅಂಶ ಹೊಂದಿರುತ್ತಾರೆ. ಅದರಲ್ಲಿ ಮುಖ್ಯವಾಗಿ ದೈಹಿಕ ಚಟುವಟಿಕೆಗಳಲ್ಲಿ ತೊಡಗದೆ ಇರುವುದು, (ಜೀವನ ಶೈಲಿ ಬದಲಾವಣೆ) ಅನಾರೋಗ್ಯಕರ ಆಹಾರ ಪದ್ದತಿ, ಮಾನಸಿಕ ಒತ್ತಡ, ಬೊಜ್ಜುತನ, ಮದ್ಯಪಾನ, ಮಧುಮೇಹ, ಧೂಮಪಾನ, ಅಧಿಕ ರಕ್ತದೊತ್ತಡ, ಹೃದ್ರೋಗದ ಕುಟುಂಬದ ಹಿನ್ನೆಲೆ ಹೊಂದಿರುತ್ತಾರೆ ಎಂದರು.

ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಪೈಕಿ ಬಹುತೇಕರು ಕ್ಯಾಬ್ ಚಾಲಕರಾಗಿದ್ದಾರೆ. ಹೀಗಾಗಿ ಚಾಲಕರ ಸಂಘಟನೆಯೊಂದಿಗೆ ಚರ್ಚಿಸಿ ನಿಯಮಿತ ಪ್ರತ್ಯೇಕ ಪರೀಕ್ಷೆಗೆ ಕ್ರಮ ವಹಿಸಲಾಗಿದೆ. ಅಲ್ಲದೆ, ಹೃದಯಾಘಾತ ತಡೆಗಟ್ಟಲು ಆರೋಗ್ಯಕರ ಜೀವನ ಶೈಲಿ ರೂಢಿಸಿಕೊಳ್ಳಲು ಸಲಹೆ ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಈ ವೇಳೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಹೃದಯಾಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ನಾನೂ ಹಾಸನಕ್ಕೆ ಭೇಟಿ ನೀಡಿದ್ದೆ. 75ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ತಜ್ಞರ ವರದಿಯಲ್ಲಿ ಹಾಸನ ಜಿಲ್ಲೆ ಅಪಾಯಕಾರಿ ಸ್ಥಿತಿಯಲ್ಲಿದೆ ಎಂದು ಹೇಳಿದೆ. ಹೀಗಾಗಿ ಸರಕಾರ ಹೃದ್ರೋಗ ತಡೆಗಟ್ಟಲು ಕ್ರಮ ವಹಿಸಬೇಕು ಎಂದು ಕೋರಿದರು.

ಇದೇ ವಿಚಾರಕ್ಕೆ ಮಾತನಾಡಿದ ಬಿಜೆಪಿ ಸದಸ್ಯ ಸುರೇಶ್‍ಕುಮಾರ್, ಚಿಕ್ಕಮಕ್ಕಳಿಗೆ ಹೃದಯಾಘಾತ ಆಗುತ್ತಿರುವುದು ಆತಂಕಕಾರಿ. ಶಾಲಾ ಹಂತದಲ್ಲಿ ಮಕ್ಕಳಿಗೆ ನಿಗದಿತ ತಪಾಸಣೆ ನಡೆಸಿ, ಪ್ರಾಥಮಿಕ ಚಿಕಿತ್ಸೆಯ ತರಬೇತಿ ನೀಡುವ ಮೂಲಕ ಸಂಭವನೀಯ ಹೃದಯಾಘಾತ ತಡೆಗಟ್ಟಲು ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X