Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಖರ್ಗೆ ಭಾಷಣದ ಸ್ಥಳದಲ್ಲಿ ʼಶುದ್ದೀಕರಣʼ...

ಖರ್ಗೆ ಭಾಷಣದ ಸ್ಥಳದಲ್ಲಿ ʼಶುದ್ದೀಕರಣʼ ಆರೋಪ: ಮೇಲ್ಮನೆಯಲ್ಲಿ ಖಂಡನಾ ನಿರ್ಣಯ ಅಂಗೀಕಾರ

ವಾರ್ತಾಭಾರತಿವಾರ್ತಾಭಾರತಿ17 Aug 2026 6:13 PM IST
share
ಖರ್ಗೆ ಭಾಷಣದ ಸ್ಥಳದಲ್ಲಿ ʼಶುದ್ದೀಕರಣʼ ಆರೋಪ: ಮೇಲ್ಮನೆಯಲ್ಲಿ ಖಂಡನಾ ನಿರ್ಣಯ ಅಂಗೀಕಾರ

ಬೆಂಗಳೂರು : ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಹೋಮ-ಹವನದ ಮೂಲಕ ಶುದ್ದೀಕರಿಸಿ ಸಾರ್ವಜನಿಕವಾಗಿ ಅಸ್ಪೃಶ್ಯತೆ ಆಚರಣೆ ಮಾಡಿರುವುದನ್ನು ಖಂಡಿಸಿ ವಿಧಾನ ಪರಿಷತ್ತಿನಲ್ಲಿ ಸೋಮವಾರ ಮಂಡಿಸಿದ ಖಂಡನಾ ನಿರ್ಣಯ ಅಂಗೀಕಾರಗೊಂಡಿದೆ.

ಕಾಂಗ್ರೆಸ್ ಸದಸ್ಯ ಎಫ್.ಎಚ್.ಜಕ್ಕಪ್ಪನವರ್ ನಿರ್ಣಯವನ್ನು ಮಂಡಿಸಿ, ಆ.8ರಂದು ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿ ತೆರಳಿದ ಬಳಿಕ, ಕೆಲವರು ಆ.10ರಂದು ಅದೇ ಸ್ಥಳದಲ್ಲಿ ಶುದ್ಧೀಕರಣ ಹವನ ನಡೆಸಿದ್ದಾರೆ. ಇದು ಅಸ್ಪೃಶ್ಯತೆ ಕರಾಳತೆಯಾಗಿದ್ದು, ಈ ಘಟನೆಯ ಕುರಿತು ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ನಿರ್ಣಯ ಮಂಡನೆಯ ಸಂದರ್ಭದಲ್ಲಿ ಆಡಳಿತ ಪಕ್ಷದ ಸದಸ್ಯರು ಎದ್ದು ನಿಂತು, ದಲಿತ ಸಮುದಾಯವನ್ನು ಸಾರ್ವಜನಿಕವಾಗಿ ಅವಮಾನಿಸುವ ಹಾಗೂ ಹೊರಗಿಡುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿದರು.

ಇದೇ ವೇಳೆಯಲ್ಲಿ, ಸಭಾನಾಯಕ ಡಾ.ಯತೀಂದ್ರ ಮಾತನಾಡಿ, ವಾಲ್ಮೀಕಿ ನಿಗಮದ ವಿಚಾರವಾಗಿ ಮಾತನಾಡುವ ಬಿಜೆಪಿಯವರು, ಸಾರ್ವಜನಿಕವಾಗಿ ಅಸ್ಪೃಶ್ಯತೆ ಆಚರಣೆ ನಡೆದಿರುವ ಬಗ್ಗೆ ಏಕೆ ಮೌನವಾಗಿದ್ದಾರೆ? ಯಾವ ನೈತಿಕತೆಯ ಆಧಾರದಲ್ಲಿ ವಾಲ್ಮೀಕಿ ನಿಗಮದ ಬಗ್ಗೆ ಮಾತನಾಡುತ್ತೀರಿ? ಎಂದು ಪ್ರಶ್ನಿಸಿದರು.

ಇದಕ್ಕೆ ಪ್ರತಿಯಾಗಿ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ಆರೋಪ-ಪ್ರತ್ಯಾರೋಪ ನಡೆಯಿತು. ಕೆಲಕಾಲ ಸದನದಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಯಿತು. ನಂತರ ಉಭಯ ಪಕ್ಷಗಳ ಸದಸ್ಯರ ವಾಗ್ವಾದದ ನಡುವೆಯೇ ಸಭಾಪತಿ ಸಲೀಂ ಅಹ್ಮದ್ ಖಂಡನಾ ನಿರ್ಣಯವನ್ನು ಅಂಗೀಕರಿಸಿದರು.

Tags

Monsoon session
share
ವಾರ್ತಾಭಾರತಿ
ವಾರ್ತಾಭಾರತಿ
Next Story
X