Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಜಾಗ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಜಾಗ ಶುದ್ಧೀಕರಣ ಘಟನೆ; ವಿಧಾನಸಭೆಯಲ್ಲಿ ಖಂಡನಾ ನಿರ್ಣಯ ಮಂಡನೆ

ವಾರ್ತಾಭಾರತಿವಾರ್ತಾಭಾರತಿ18 Aug 2026 8:54 PM IST
share
ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಜಾಗ ಶುದ್ಧೀಕರಣ ಘಟನೆ; ವಿಧಾನಸಭೆಯಲ್ಲಿ ಖಂಡನಾ ನಿರ್ಣಯ ಮಂಡನೆ

ಬೆಂಗಳೂರು : ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಾಖಂಡದಲ್ಲಿ ಭಾಷಣ ಮಾಡಿದ ಜಾಗವನ್ನು ಶುದ್ಧೀಕರಣ ಮಾಡಿದ ಘಟನೆಯನ್ನು ಖಂಡಿಸಿ ವಿಧಾನಸಭೆಯಲ್ಲಿ ಖಂಡನಾ ನಿರ್ಣಯ ಮಂಡಿಸಲಾಯಿತು.

ಮಂಗಳವಾರ ಕಾಂಗ್ರೆಸ್ ಸದಸ್ಯರಾದ ಶರತ್ ಕುಮಾರ್ ಬಚ್ಚೇಗೌಡ ಹಾಗೂ ಡಾ.ಎನ್.ಟಿ.ಶ್ರೀನಿವಾಸ್ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿದ ವಿಷಯಕ್ಕೆ ಸಮಾಜ ಕಲ್ಯಾಣ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯಿಸಿದರು.

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಆ.8ರಂದು ಮಲ್ಲಿಕಾರ್ಜುನ ಖರ್ಗೆ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು. ಸಾವಿರಾರು ಜನರು ಸಭೆಯಲ್ಲಿ ಭಾಗವಹಿಸಿದ್ದರು. ಬಳಿಕ ‘ಶುದ್ಧೀಕರಣ’ ಹವನ ನಡೆಸಲಾಯಿತು. ಈ ಘಟನೆ ಅತ್ಯಂತ ಖಂಡನೀಯವಾಗಿದೆ. ಮಲ್ಲಿಕಾರ್ಜುನ ಖರ್ಗೆ ದೇಶದ ಹಿರಿಯ ನಾಯಕರು ಐದು ದಶಕಗಳ ಸುದೀರ್ಘ ಸಾರ್ವಜನಿಕ ಸೇವೆ ಸಲ್ಲಿಸಿದ್ದಾರೆ ಎಂದು ಮುನಿಯಪ್ಪ ಹೇಳಿದರು.

ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧಪಕ್ಷ ನಾಯಕರೂ ಆಗಿದ್ದಾರೆ. ಸಾಮಾಜಿಕ ನ್ಯಾಯಕ್ಕಾಗಿ ನಿರಂತರ ಹೋರಾಡಿದ್ದಾರೆ. ಸಂವಿಧಾನದ ಮೌಲ್ಯಗಳನ್ನು ಸದಾ ಪ್ರತಿಪಾದಿಸಿದ್ದಾರೆ. ಆ.13ರಂದು ರಾಜ್ಯಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿ, ಅವರು ನೋವು ಹಂಚಿಕೊಂಡರು. ಸದನದ ಸಭಾ ನಾಯಕ ಜೆ.ಪಿ.ನಡ್ಡಾ ಈ ಘಟನೆಯನ್ನು ದುರದೃಷ್ಟಕರ ಎಂದು ಹೇಳಿದರು ಅವರು ತಿಳಿಸಿದರು.

ಸಭಾಪತಿಯವರು ವಿಷಯವನ್ನು ಗಂಭೀರವಾಗಿ ಪರಿಗಣಿಸಿದರು. ಅಸ್ಪೃಶ್ಯತೆ ಸಹಿಸಲಾಗದ ಸಾಮಾಜಿಕ ಪಿಡುಗು. ಘಟನೆ ಕುರಿತು ತನಿಖೆಗೆ ಸೂಚಿಸಲಾಯಿತು. ಸಂಸತ್ತಿನ ಉಭಯ ಸದನಗಳಲ್ಲೂ ಪಕ್ಷಾತೀತವಾಗಿ ಎಲ್ಲ ಪಕ್ಷಗಳ ನಾಯಕರು ಈ ಘಟನೆಯನ್ನು ಖಂಡಿಸಿದರು. ಅಂಬೇಡ್ಕರ್, ಬಾಬು ಜಗಜೀವನ್‍ರಾಮ್ ಅವರು ಅದೇ ನೋವು, ಅವಮಾನ ಎದುರಿಸಿದರು. ತಲೆಮಾರುಗಳು ಬದಲಾದವು, ದೇಶ ಬದಲಾಯಿತು. ಕಾನೂನು ಬದಲಾಯಿತು, ಕಾಲ ಬದಲಾಯಿತು. ಆದರೂ ಕೆಲವು ಮನಸ್ಸುಗಳು ಬದಲಾಗಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಇದು ಯಾವುದೋ ಒಂದು ಪಕ್ಷದ ಪ್ರಶ್ನೆಯಲ್ಲ, ಇದು ಖರ್ಗೆ, ಕಾಂಗ್ರೆಸ್ ಪಕ್ಷದವರ ಪ್ರಶ್ನೆ ಮಾತ್ರವಲ್ಲ. ಇದು ದಲಿತರ ಸ್ವಾಭಿಮಾನ, ಮಾನವ ಘನತೆ, ಸಾಮಾಜಿಕ ಸಮಾನತೆ ಹಾಗೂ ಸಂವಿಧಾನದ ಗೌರವದ ಪ್ರಶ್ನೆಯಾಗಿದೆ. ಅಸ್ಪೃಶ್ಯತೆ ಕಾನೂನಿನಡಿ ಅಪರಾಧವಾಗಿದೆ. ನಾಗರಿಕ ಹಕ್ಕುಗಳ ಸಂರಕ್ಷಣಾ ಕಾಯ್ದೆಯಿದೆ. ದೌರ್ಜನ್ಯ ತಡೆ ಕಾಯ್ದೆಯೂ ಜಾರಿಯಲ್ಲಿದೆ. ಘಟನೆ ಕುರಿತು ನಿಷ್ಪಕ್ಷಪಾತ ತನಿಖೆಯಾಗಬೇಕು. ತಪ್ಪಿತಸ್ಥರ ಹೊಣೆಗಾರಿಕೆ ನಿಗದಿಯಾಗಬೇಕು ಎಂದು ಅವರು ಆಗ್ರಹಿಸಿದರು.

ರಾಜ್ಯ ಸರಕಾರ ಅಸ್ಪೃಶತೆಯನ್ನು ಎಂದಿಗೂ ಸಹಿಸುವುದಿಲ್ಲ. ಜಾತಿ ಅವಮಾನವನ್ನೂ ಸಹಿಸುವುದಿಲ್ಲ. ದಲಿತರ ಘನತೆಯನ್ನು ನಾವು ರಕ್ಷಿಸುತ್ತೇವೆ. ಸಂವಿಧಾನಬದ್ಧ ಹಕ್ಕುಗಳನ್ನು ನಾವು ಕಾಪಾಡುತ್ತೇವೆ. ಸಾಮಾಜಿಕ ನ್ಯಾಯಕ್ಕೆ ಸರಕಾರ ಬದ್ಧವಾಗಿದೆ. ಸಮಾನತೆಯ ಸಮಾಜ ನಮ್ಮ ಸಂಕಲ್ಪವಾಗಿದೆ ಎಂದು ಮುನಿಯಪ್ಪ ಹೇಳಿದರು.

ಖರ್ಗೆಯವರು ನಿಂತ ವೇದಿಕೆ ಅಶುದ್ಧವಲ್ಲ. ಜಗಜೀವನರಾಮರ ಸ್ಪರ್ಶ ಅಶುದ್ಧವಾಗಿರಲಿಲ್ಲ. ಅಂಬೇಡ್ಕರ ಅವರ ನೆರಳೂ ಅಶುದ್ಧವಾಗಿರಲಿಲ್ಲ. ಅಶುದ್ಧವಾಗಿರುವುದು ಜಾತಿವಾದಿ ಮನಸ್ಥಿತಿ ಮಾತ್ರ. ಜಾತಿಗಿಂತ ಮಾನವೀಯತೆ ದೊಡ್ಡದಾಗಬೇಕು. ಸಮಾನತೆ ನಮ್ಮ ಬದುಕು, ಸಂವಿಧಾನ ನಮ್ಮ ನಡೆ ಆಗಬೇಕು. ಆದುದರಿಂದ, ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಲು ವಿಪಕ್ಷಗಳು ಸಹಕಾರ ನೀಡಬೇಕು ಎಂದು ಆಗ್ರಹಿಸಿ ಮುನಿಯಪ್ಪ ಖಂಡನಾ ನಿರ್ಣಯ ಮಂಡಿಸಿದರು.

ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ: ಶರತ್ ಕುಮಾರ್ ಬಚ್ಚೇಗೌಡ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಕೆಲವು ಕಿಡಿಗೇಡಿಗಳು ಶುದ್ಧೀಕರಣ ಮಾಡಿರುವ ಘಟನೆ ಅತ್ಯಂತ ಖಂಡನೀಯ. ಸುದೀರ್ಘವಾಗಿ ಸಾರ್ವಜನಿಕ ಜೀವನದಲ್ಲಿರುವ ಮಲ್ಲಿಕಾರ್ಜುನ ಖರ್ಗೆ, ರಾಷ್ಟ್ರಕಂಡ ಧೀಮಂತ ನಾಯಕ. ಶುದ್ಧೀಕರಣ ಆಗಬೇಕಿರುವುದು ಇಂತಹ ದುಷ್ಟರ ಮನಸ್ಸುಗಳು. ಸಂವಿಧಾನಬದ್ಧವಾಗಿ ದೇಶ ನಡೆಯಬೇಕು. ಆದರೆ, ಇಂದಿಗೂ ಮನುಸ್ಮೃತಿಯನ್ನು ಪ್ರತಿಪಾದಿಸುತ್ತಿದ್ದಾರೆ. ಈ ಸದನದಲ್ಲಿ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿ, ಕೇಂದ್ರಕ್ಕೆ ಕಳುಹಿಸಬೇಕು. ಹಾಗೂ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಬೇಕು ಎಂದು ಕಾಂಗ್ರೆಸ್ ಸದಸ್ಯ ಶರತ್ ಕುಮಾರ್ ಬಚ್ಚೇಗೌಡ ಹೇಳಿದರು.

ಮಲ್ಲಿಕಾರ್ಜುನ ಖರ್ಗೆಯವರಿಗೆ ಆಗಿರುವ ಅವಮಾನವನ್ನು ಖಂಡಿಸಲು ವಿಪಕ್ಷಗಳು ತಾತ್ಸರ ಮಾಡುತ್ತಿವೆ. ಖರ್ಗೆಯವರಿಗೆ ಅವಮಾನ ಮಾಡಿರುವುದು ಬಿಜೆಪಿಯವರೆ. ರಾಜ್ಯದ ಹೆಮ್ಮೆಯ ಪುತ್ರ, ಹಿರಿಯ ನಾಯಕರಿಗೆ ಆಗಿರುವ ಅವಮಾನವನ್ನು ಖಂಡಿಸಿ ಸರ್ವಾನುಮತದ ನಿರ್ಣಯ ಕೈಗೊಳ್ಳಲು ಮುಂದೆ ಬರಬೇಕಿತ್ತು. ಆದರೆ, ಬಿಜೆಪಿ ಸದಸ್ಯರು ನಿರ್ಣಯದ ಕುರಿತು ಮುಂದೆ ಬರದೆ, ಈ ಕೃತ್ಯ ಎಸಗಿದವರಿಗೆ ಪರೋಕ್ಷ ಬೆಂಬಲ ನೀಡುತ್ತಿದ್ದಾರೆ. ನಾವು ವಿಜ್ಞಾನ, ತಂತ್ರಜ್ಞಾನದಲ್ಲಿ ಅಭಿವೃದ್ಧಿ ಸಾಧಿಸಿದ್ದೇವೆ. ಆದರೆ, ಶುದ್ಧೀಕರಣದ ಕೃತ್ಯ ನೋಡಿದ ಮೇಲೆ ನಾವು 21ನೆ ಶತಮಾನದಲ್ಲಿದ್ದೇವೆಯೇ? ಅಥವಾ 11ನೆ ಶತಮಾನದಲ್ಲಿದ್ದೇವೆಯೇ? ಎಂಬ ಸಂಶಯ ಮೂಡುತ್ತಿದೆ.

-ಕೃಷ್ಣ ಬೈರೇಗೌಡ, ಬೆಂಗಳೂರು ನಗರಾಭಿವೃದ್ಧಿ ಸಚಿವ

Tags

Monsoon session
share
ವಾರ್ತಾಭಾರತಿ
ವಾರ್ತಾಭಾರತಿ
Next Story
X