Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮುಂಗಾರು ಅಧಿವೇಶನ | ನನ್ನ ಸಾರ್ವಜನಿಕ...

ಮುಂಗಾರು ಅಧಿವೇಶನ | ನನ್ನ ಸಾರ್ವಜನಿಕ ಜೀವನದಲ್ಲಿ ಒಂದೂ ಕಪ್ಪುಚುಕ್ಕೆ ಇಲ್ಲ : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ25 July 2024 6:26 PM IST
share
ಮುಂಗಾರು ಅಧಿವೇಶನ | ನನ್ನ ಸಾರ್ವಜನಿಕ ಜೀವನದಲ್ಲಿ ಒಂದೂ ಕಪ್ಪುಚುಕ್ಕೆ ಇಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದಲ್ಲಿ ನನ್ನ ಪಾತ್ರವಿಲ್ಲ. 40 ವರ್ಷಗಳ ಸಾರ್ವಜನಿಕ ಜೀವನದಲ್ಲಿ ನನ್ನ ಮೇಲೆ ಒಂದೂ ಕಪ್ಪುಚುಕ್ಕೆ ಇಲ್ಲ. ಈಗ ನನ್ನ ಮುಖಕ್ಕೆ ಮಸಿ ಬಳಿಯಲು ಹೊರಟಿರುವ ವಿಪಕ್ಷದವರ ಪ್ರಯತ್ನ ಈಡೇರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಗುರುವಾರ ವಿಧಾನ ಪರಿಷತ್‍ನಲ್ಲಿ ‘ಮುಡಾ ಅಕ್ರಮ’ದ ಕುರಿತು ಚರ್ಚೆಗೆ ಅವಕಾಶ ನೀಡಬೇಕೆಂದು ಪ್ರತಿಪಕ್ಷಗಳ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಮಧ್ಯಪ್ರವೇಶಿಸಿ ಮಾತನಾಡಿದ ಸಿದ್ದರಾಮಯ್ಯ, ಪ್ರತಿಪಕ್ಷದ ಸದಸ್ಯರು ಎತ್ತಿರುವ ವಿಷಯದಲ್ಲಿ ನನ್ನ ಪಾತ್ರವೇ ಇಲ್ಲ. ಬಿಜೆಪಿ-ಜೆಡಿಎಸ್ ಸದಸ್ಯರ ಉದ್ದೇಶ ಏನೆಂಬುದು ಸ್ಪಷ್ಟವಾಗಿ ಗೊತ್ತಿದೆ. ನಾನು ಮುಖ್ಯಮಂತ್ರಿ ಸ್ಥಾನದಲ್ಲಿದ್ದೇನೆಂಬ ಕಾರಣಕ್ಕಾಗಿ ಅವರಿಗೆ ಹೊಟ್ಟೆ ಉರಿ ಎಂದು ವಾಗ್ದಾಳಿ ನಡೆಸಿದರು.

ನಾವು ಕಾನೂನುಬದ್ಧವಾಗಿ ನಿವೇಶನ ಹಂಚಿಕೆ ಮಾಡುವಂತೆ ಮುಡಾದವರಿಗೆ ಅರ್ಜಿ ಕೊಟ್ಟಿದ್ದೆವು. ಶೇ.50ಃ50ರ ಅನುಪಾತದಲ್ಲಿ ಕಾನೂನಿನಡಿಯೇ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿತ್ತು. ನಿಯಮಾನುಸುರವಾಗಿ ನಿವೇಶನ ಹಂಚಿಕೆ ಮಾಡಿದ್ದಾರೆ. ಇದರಲ್ಲಿ ತಪ್ಪಿನ ಪ್ರಶ್ನೆ ಎಲ್ಲಿದೆ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.

ಮುಡಾದವರು ನಿಯಮಾನುಸಾರ ನಿವೇಶನ ಹಂಚಿಕೆ ಮಾಡುತ್ತಾರೆ. 38 ಚದರ ಅಡಿಯಲ್ಲಿ ಸ್ವತಃ ನಮ್ಮದೇ ಭೂಮಿ ಹೋಗಿದೆ. ನಾನು 2014ರಲ್ಲಿ ಮುಖ್ಯಮಂತ್ರಿಯಾಗಿದ್ದ ವೇಳೆ ಈ ಅಕ್ರಮ ನಡೆದಿಲ್ಲ ಎಂದು ಹೇಳಿದ್ದೆ. ಇದರಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ನಾವು ಇಂತಹ ಕಡೆಯೇ ನಿರ್ದಿಷ್ಟ ಸ್ಥಳದಲ್ಲಿ ನಿವೇಶನ ಕೊಡಿ ಎಂದು ಕೇಳಿದ್ದರೆ ಅದು ನಿಯಮ ಬಾಹಿರವಾಗುತ್ತಿತ್ತು. ಮುಡಾದವರೇ ನಿವೇಶನ ಹಂಚಿಕೆ ಮಾಡಿರುವಾಗ ನಾವೇನು ಮಧ್ಯಪ್ರವೇಶ ಮಾಡಿದ್ದೇವಾ? ಎಂದು ಪ್ರತಿಪಕ್ಷದ ಸದಸ್ಯರದ ವಿರುದ್ಧ ಸಿದ್ದರಾಮಯ್ಯ ಹರಿಹಾಯ್ದರು.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ. ನಿಷ್ಪಕ್ಷಪಾತವಾಗಿ ತನಿಖೆ ವರದಿ ಬರಲಿದೆ. ಮುಡಾ ಅಧ್ಯಕ್ಷರಾಗಿದ್ದ ರಾಜೀವ್ ಅವರೇ ನಿವೇಶನಗಳನ್ನು ಹಂಚಿಕೆ ಮಾಡಿದ್ದಾರೆ. ಬಿಜೆಪಿ ಕಾಲದಲ್ಲೇ ಇದು ನಡೆದಿರುವುದು. ಈಗ ನನ್ನ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದರಲ್ಲಿ ನೀವು ಯಶಸ್ವಿಯಾಗುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಅಧಿವೇಶನದ ಕಲಾಪ ನಡೆಯಬಾರದೆಂದು ಉದ್ದೇಶಪೂರ್ವಕವಾಗಿ ಪದೇ ಪದೇ ಒಂದೇ ವಿಷಯವನ್ನು ಪ್ರಸ್ತಾಪಿಸುತ್ತಿದ್ದಾರೆ. ಈಗಾಗಲೇ ಸಭಾಪತಿಯವರು ನಿಲುವಳಿ ಸೂಚನೆ ಪ್ರಸ್ತಾವನೆಯನ್ನು ತಿರಸ್ಕಾರಿಸಿದ್ದೇವೆ ಎಂದು ರೂಲಿಂಗ್ ಕೊಟ್ಟಿದ್ದಾರೆ. ಆದರೂ, ಅದೇ ವಿಷಯವನ್ನು ಚರ್ಚೆಗೆ ಕೊಡಬೇಕೆಂದು ಪಟ್ಟು ಹಿಡಿಯುವುದು ಎಷ್ಟರ ಮಟ್ಟಿಗೆ ಸರಿ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಆಗ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯಿಸಿ, ನೀವು ಈ ವಿಷಯವನ್ನು ವೈಯಕ್ತಿಕವಾಗಿ ತೆಗೆದುಕೊಂಡಿದ್ದೀರಿ. ನಿಮ್ಮ ಮೇಲೆ ನಮಗೆ ಯಾವುದೇ ದ್ವೇಷವಿಲ್ಲ. ಮುಡಾದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ನಾವು ಚರ್ಚೆಗೆ ಕೇಳುತ್ತಿದ್ದೇವೆ. ಇದು ತಪ್ಪೇ ಎಂದು ಪ್ರಶ್ನಿಸಿದರು.

ಇದು ಸಾವಿರಾರು ಕೋಟಿಗಳ ವಿಷಯ. ಸ್ವತಃ ಮುಖ್ಯಮಂತ್ರಿಗಳ ಕುಟುಂಬದವರೇ ಶಾಮೀಲಾಗಿದ್ದಾರೆ ಎಂಬ ಆರೋಪವಿದೆ. ಇಂತಹ ಮಹತ್ವದ ವಿಷಯವನ್ನು ಚರ್ಚೆ ಮಾಡಲೇಬಾರದೆಂದರೆ ಹೇಗೆ ಎಂದು ಮರು ಪ್ರಶ್ನೆ ಹಾಕಿದರು.

ಈ ವೇಳೆ ಪ್ರತಿಪಕ್ಷಗಳ ಸದಸ್ಯರು ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಆಗ ಆಡಳಿತ ಪಕ್ಷದವರು ಯಡಿಯೂರಪ್ಪ, ಕುಮಾರಸ್ವಾಮಿ, ಜಗದೀಶ್ ಶೆಟ್ಟರ್ ಅವಧಿಯಲ್ಲಿ ನಡೆದಿರುವ ಅಕ್ರಮಗಳನ್ನು ಪ್ರಸ್ತಾಪಿಸಿ ತಿರುಗೇಟು ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X