ಆಗಸ್ಟ್ 6 ರಿಂದ ಮುಂಗಾರು ಅಧಿವೇಶನ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೆಂಗಳೂರು : ಮುಂದಿನ ತಿಂಗಳು ಆಗಸ್ಟ್ 6 ರಿಂದಲೇ ವಿಧಾನ ಮಂಡಲದ ಮುಂಗಾರು ಅಧಿವೇಶನ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಕಟಿಸಿದ್ದಾರೆ.
ಸೋಮವಾರ ನಗರದ ಗೃಹ ಕಚೇರಿ ಕೃಷ್ಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಗಸ್ಟ್ 6 ರಿಂದ ವಿಧಾನ ಮಂಡಲ ಅಧಿವೇಶನ ಕರೆಯಲು ತೀರ್ಮಾನಿಸಲಾಗಿದೆ. ನಾನು ಒಂದು ದಿನ ಕೆಲಸದ ಮೇಲೆ ಹೊಸದಿಲ್ಲಿಗೆ ಹೋಗಿ ಬರುತ್ತೇನೆ. ನಂತರ ನಮ್ಮ ನಾಯಕರು ಮೂರ್ನಾಲ್ಕು ದಿನಗಳಲ್ಲಿ ದಿನಾಂಕ ನಿಗದಿ ಮಾಡುತ್ತಾರೆ ಎಂದು ಮಾಹಿತಿ ನೀಡಿದರು.
ಮಾಜಿ ಸಂಸದ ಎಚ್.ಹನುಮಂತಪ್ಪ ನಿಧನ ಕುರಿತು ಪ್ರತಿಕ್ರಿಯಿಸಿದ ಅವರು, ‘ಕಾಂಗ್ರೆಸ್ ಪಕ್ಷದ ಹಿರಿಯ ಮುತ್ಸದಿ ಎಚ್.ಹನುಮಂತಪ್ಪ. ಮೂರು ಬಾರಿ ರಾಜ್ಯಸಭೆ ಸದಸ್ಯರಾಗಿದ್ದರು. ರೈಲ್ವೇ ಆಯೋಗಕ್ಕೆ ಅಧ್ಯಕ್ಷರಾಗಿದ್ದರು. 45 ವರ್ಷಗಳಿಂದ ನನಗೆ ಆತ್ಮೀಯರಾಗಿದ್ದರು. ನಮ್ಮ ಪಕ್ಷದ ಉಪಾಧ್ಯಕ್ಷರಾಗಿ, ಸಂಸದೀಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ತಿಳಿಸಿದರು.
Next Story




