Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಇವಿಎಂ ಕಾರಣಕ್ಕೆ ಜೆಡಿಎಸ್, ಬಿಜೆಪಿಗೆ...

ಇವಿಎಂ ಕಾರಣಕ್ಕೆ ಜೆಡಿಎಸ್, ಬಿಜೆಪಿಗೆ ಹೆಚ್ಚು ಸ್ಥಾನಗಳು : ಡಿಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ18 Jun 2024 8:23 PM IST
share
ಇವಿಎಂ ಕಾರಣಕ್ಕೆ ಜೆಡಿಎಸ್, ಬಿಜೆಪಿಗೆ ಹೆಚ್ಚು ಸ್ಥಾನಗಳು : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಇವಿಎಂ ಕಾರಣಕ್ಕೆ ಜೆಡಿಎಸ್ ಮತ್ತು ಬಿಜೆಪಿಗೆ ನಿರೀಕ್ಷೆಗಿಂತ ಹೆಚ್ಚು ಸ್ಥಾನಗಳು ಬಂದಿವೆ. ಇದರ ಬಗ್ಗೆ ಮತ್ತೊಮ್ಮೆ ಪರಿಶೀಲನೆ ನಡೆಸಬೇಕಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಮಂಗಳವಾರ ವಿಧಾನಸೌಧ ಹಾಗೂ ಬಿಬಿಎಂಪಿ ಮುಖ್ಯ ಕಚೇರಿ ಬಳಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಇವಿಎಂ ತೊಲಗಬೇಕು ಬ್ಯಾಲೆಟ್ ಮತದಾನ ಮತ್ತೆ ಬರಬೇಕು. ಈಗಾಗಲೇ ಫಲಿತಾಂಶ ಬಂದಾಗಿದೆ. ಈಗೇನೂ ಮಾಡಲು ಆಗುವುದಿಲ್ಲ ಎಂದರು.

ಮತ್ತೊಮ್ಮೆ ಫಲಿತಾಂಶವನ್ನು ಪರಿಶೀಲನೆ ನಡೆಸಬಹುದು. ಮಧ್ಯಪ್ರದೇಶದಲ್ಲಿ ಬ್ಯಾಲೆಟ್ ಮತದಾನ ಇದ್ದಾಗ ಮೂರರಲ್ಲಿ ಎರಡು ಭಾಗದಷ್ಟು ಮತಗಳು ಕಾಂಗ್ರೆಸ್ ಪರವಾಗಿ ಬೀಳುತ್ತಿದ್ದವು. ಇವಿಎಂ ಕಾರಣಕ್ಕೆ ಈಗ ಪರಿಸ್ಥಿತಿ ಬದಲಾಗಿದೆ. ಇದರ ಬಗ್ಗೆ ಮತ್ತಷ್ಟು ಆಳವಾಗಿ ಚಿಂತನೆ ನಡೆಸಬೇಕಿದೆ ಎಂದು ಅವರು ಹೇಳಿದರು.

ಬಿಬಿಎಂಪಿ ಆಸ್ತಿಗಳನ್ನು ಸರಕಾರ ಅಡವಿಡುತ್ತಿದೆ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಡಿ.ಕೆ.ಶಿವಕುಮಾರ್, ಯಾವ ಅಡಮಾನವೂ ಇಲ್ಲ. ನಮ್ಮ ಬಿಬಿಎಂಪಿಯ ಆಸ್ತಿಯಗಳ ರಕ್ಷಣೆ ಹಾಗೂ ಎಷ್ಟು ಆಸ್ತಿಗಳಿವೆ ಎನ್ನುವ ಮರು ಸಮೀಕ್ಷೆ, ಗುತ್ತಿಗೆ ನವೀಕರಣ ಸೇರಿದಂತೆ ಇತರೇ ಕೆಲಸಗಳಿಗಾಗಿ ನಮ್ಮ ಅಂದಾಜು ವಿಭಾಗವನ್ನು ಭದ್ರಗೊಳಿಸಿ ದಾಖಲೆಗಳನ್ನು ರಕ್ಷಣೆ ಮಾಡುವ ಕೆಲಸ ಮಾಡಲಾಗುತ್ತಿದೆ. ಯಾವುದೇ ಅಡಮಾನವೂ ಇಲ್ಲ, ಏನೂ ಇಲ್ಲ ಎಂದು ಹೇಳಿದರು.

ಬಿಬಿಎಂಪಿಯ ಜಾಹೀರಾತು ನಿಯಮಾವಳಿ ಬಗ್ಗೆ ಪ್ರತಿಕ್ರಿಯಿಸುತ್ತಾ, ಮುಂದಿನ ಒಂದು ವಾರಗಳ ಒಳಗಾಗಿ ನೂತನ ಜಾಹೀರಾತು ನೀತಿ ಜಾರಿಗೆ ತರಲಾಗುವುದು. ಮೆಟ್ರೋ ಪಿಲ್ಲರ್ ಗಳನ್ನು ಬಳಸಿಕೊಳ್ಳುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ಬೃಹತ್ ಹೋರ್ಡಿಂಗ್ ಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುವ ಬಗ್ಗೆ ಈಗಾಗಲೇ ಮುಂಜಾಗ್ರತ ಕ್ರಮ ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪ್ರಥಮ ಹಂತವಾಗಿ ಫ್ಲೆಕ್ಸ್ ನಿಷೇಧಿಸಲಾಗಿದೆ. 15 ಸಾವಿರಕ್ಕೂ ಹೆಚ್ಚು ಫೆಕ್ಸ್ ಗಳನ್ನು ತೆರವುಗೊಳಿಸಿ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ಮೇಕೆದಾಟು ವಿಚಾರವಾಗಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ನ್ಯಾಯಾಲಯ ತೀರ್ಮಾನ ತೆಗೆದುಕೊಳ್ಳುತ್ತದೆ. ಕೇಂದ್ರ ಸರಕಾರ ಇದರ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು. ಇದರಿಂದ ತಮಿಳುನಾಡಿಗೆ ಹೆಚ್ಚು ಅನುಕೂಲವಾಗಲಿದೆ. ಮೇಕೆದಾಟು ಅಣೆಕಟ್ಟಿನಿಂದ ತಮಿಳುನಾಡಿಗೆ ನಿಗದಿಯಾಗಿರುವ ನೀರಿನ ಪಾಲನ್ನು ನೀಡಲು ಅನುಕೂಲವಾಗುತ್ತದೆ ಹೊರತು ನಮ್ಮ ಕರ್ನಾಟಕದ ಉಪಯೋಗಕ್ಕೆ ಬಳಸುವುದಿಲ್ಲ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ಬೆಂಗಳೂರು ಸುತ್ತಮುತ್ತಲಿನ 20 ಸಾವಿರ ಎಕರೆ ಜಮೀನು ಮಾರಾಟದ ಬಗ್ಗೆ ಪ್ರತಿಕ್ರಿಯಿಸಿ, ಇದು ಸುಳ್ಳು ಸುದ್ದಿ. 20 ಸಾವಿರ ಎಕರೆ ಜಮೀನು ಎಲ್ಲಿದೆ. ನಾವು ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣದ ಸಲುವಾಗಿ ಭೂಸ್ವಾಧೀನದ ಬಗ್ಗೆ ಯೋಚನೆ ಮಾಡುತ್ತಿದ್ದೇವೆ. 60/40 ಹಂಚಿಕೆಯ ಸೂತ್ರದ ಆಧಾರದ ಮೇಲೆ ನಿರ್ಮಾಣ ಮಾಡಲು ಹೊರಟಿದ್ದೇವೆ. ಇದರಿಂದ ರೈತರಿಗೂ ಹೆಚ್ಚು ಅನುಕೂಲವಾಗಲಿದೆ ಎಂದು ತಿಳಿಸಿದರು.

ನೀಟ್ ಮರು ಪರೀಕ್ಷೆ ನಡೆಸಿ: ನೀಟ್ ಅಕ್ರಮದ ಬಗ್ಗೆ ಪ್ರತಿಕ್ರಯಿಸಿದ ಡಿ.ಕೆ.ಶಿವಕುಮಾರ್, ಕರ್ನಾಟಕ ಸರಕಾರ ನೀಟ್ ವಿರುದ್ದವಿದೆ. ಅನ್ಯಾಯಕ್ಕೆ ಒಳಗಾದ ವಿದ್ಯಾರ್ಥಿಗಳ ಜೊತೆ ನಾವಿದ್ದೇವೆ. ಕೇವಲ 1,563 ವಿದ್ಯಾರ್ಥಿಗಳಿಗೆ ಮಾತ್ರ ಮರು ಪರೀಕ್ಷೆ ನಡೆಸದೆ ಇಡೀ ದೇಶದಾದ್ಯಂತ ಮತ್ತೊಮ್ಮೆ ಪರೀಕ್ಷೆ ನಡೆಸಬೇಕು ಎಂದು ಆಗ್ರಹಿಸಿದರು.

ದರ್ಶನ್ ಸೇರಿದಂತೆ ಅನೇಕರು ರಾಜಕಾಲುವೆ ಒತ್ತುವರಿ ತೆರವಿಗೆ ತಡೆಯಾಜ್ಞೆ ತಂದಿರುವ ಪ್ರಕರಣಗಳ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ನಾನು, ನೀನು ಯಾರೇ ತಡೆಯಾಜ್ಞೆ ತಂದಿದ್ದರು ತೆರವುಗೊಳಿಸಲಾಗುವುದು. ಕಾನೂನಿನ ಅಡಿಯಲ್ಲಿ ಎಲ್ಲರೂ ಬದುಕಬೇಕು. ಇಲ್ಲಿ ಯಾರೂ ಹೆಚ್ಚಲ್ಲ, ಯಾರೂ ಕಡಿಮೆಯಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X