Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿಜೆಪಿ ನೋಟಿಸ್ ಹಿಂದೆ ಮಹಾನಾಯಕರೊಬ್ಬರ...

ಬಿಜೆಪಿ ನೋಟಿಸ್ ಹಿಂದೆ ಮಹಾನಾಯಕರೊಬ್ಬರ ಕೈವಾಡ : ಎಂ.ಪಿ.ರೇಣುಕಾಚಾರ್ಯ

ವಾರ್ತಾಭಾರತಿವಾರ್ತಾಭಾರತಿ26 March 2025 7:11 PM IST
share
ಬಿಜೆಪಿ ನೋಟಿಸ್ ಹಿಂದೆ ಮಹಾನಾಯಕರೊಬ್ಬರ ಕೈವಾಡ : ಎಂ.ಪಿ.ರೇಣುಕಾಚಾರ್ಯ

ಬೆಂಗಳೂರು : ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನನಗೆ ಶೋಕಾಸ್ ನೋಟಿಸ್ ನೀಡಿರುವುದರ ಹಿಂದೆ ಮಹಾನ್ ನಾಯಕರೊಬ್ಬರ ಕೈವಾಡವಿದೆ. ನಾನು ಇದಕ್ಕೆಲ್ಲಾ ಭಯ ಬಿದ್ದಿಲ್ಲ, ದಾಖಲೆ ಸಹಿತವಾಗಿ ಉತ್ತರ ಕೊಡುತ್ತೇನೆ. ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ಬುಧವಾರ ನಗರದ ಕುಮಾರ ಕೃಪಾ ಅತಿಥಿ ಗೃಹದಲ್ಲಿ ಮಾತನಾಡಿದ ಅವರು, ನನಗೆ ಶೋಕಾಸ್ ನೋಟಿಸ್ ಬಂದಿದ್ದು ನನಗೆ ಬೇಸರವಾಗಿಲ್ಲ, ನೋವು ಆಗಿಲ್ಲ ಬದಲಾಗಿ ಅತ್ಯಂತ ಸಂತೋಷವಾಗಿದೆ. ಬಿ.ಎಸ್.ಯಡಿಯೂರಪ್ಪ ಅವರ ಪರವಾಗಿ ಮಾತನಾಡಿದ್ದಕ್ಕೆ ನೋಟಿಸ್ ಕೊಟ್ಟಿದ್ದಾರೆ. ಯಡಿಯೂರಪ್ಪ ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದವರ ವಿವರ ಕೊಡುತ್ತೇನೆ. ಅವರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ? ಎಂದು ಪ್ರಶ್ನಿಸಿದರು.

ರಾಜ್ಯ ಬಿಜೆಪಿ ಬೆಳವಣಿಗೆ ಬಗ್ಗೆ ಹೈಕಮಾಂಡ್‍ಗೆ ನಾನೇ ಪತ್ರ ಬರೆದಿದ್ದರೆ, ಬೇರೆಯದ್ದೇ ಬೆಳವಣಿಗೆ ಆಗುತಿತ್ತು. ಆಗ ರಾಷ್ಟ್ರೀಯ ನಾಯಕರು ಅಪಾರ್ಥ ಮಾಡಿಕೊಳ್ಳುತ್ತಿದ್ದರು. ಆದರೆ, ಇದೀಗ ಒಂದು ವೇದಿಕೆ ಸಿಕ್ಕಹಾಗೇ ಆಗುತ್ತಿದೆ. ಐದಾರು ವರ್ಷಗಳಿಂದ ಪಕ್ಷದಲ್ಲಿನ ಗೊಂದಲಗಳು ಮತ್ತು ಪಕ್ಷ ವಿರೋಧಿ ಚಟುವಟಿಕೆ ಬಗ್ಗೆ ಪತ್ರ ಬರೆಯುತ್ತೇನೆ. ಪತ್ರ ಬರೆಯುವ ಮೂಲಕ ಶಿಸ್ತು ಸಮಿತಿಗೆ ಸಮರ್ಪಕ ಉತ್ತರ ನೀಡುತ್ತೇನೆ ಎಂದು ಎಂ.ಪಿ.ರೇಣುಕಾಚಾರ್ಯ ಹೇಳಿದರು.

ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಹಲವರು ವಿಧಾನಸಭೆ ಹೊರಗಡೆ ಮತ್ತು ಒಳಗಡೆ ನಿರಂತರವಾಗಿ ಟೀಕೆ ಮಾಡಿದ್ದರು. ಅಂತಹವರಿಗೆ ಅಂದೇ ನೋಟಿಸ್ ಕೊಟ್ಟು ಬಾಯಿ ಮುಚ್ಚಿಸಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಹೀಗಾಗಿಯೇ ಬಿಜೆಪಿ 2013 ಮತ್ತು 2023ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿಲ್ಲ. ಬಿ.ಎಸ್.ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಇಳಿಸಿದ್ದು ತಪ್ಪು ಎಂದು ನೇರವಾಗಿ ಹೇಳಿದ್ದೇನೆ. 2019ರಿಂದ ಇಲ್ಲಿಯವರಿಗೆ ಯಡಿಯೂರಪ್ಪನವರನ್ನು ಟೀಕೆ ಮಾಡಿದವರಿಗೆ ಯಾಕೆ ನೋಟಿಸ್ ಕೊಟ್ಟಿಲ್ಲ ಎಂದು ಎಂ.ಪಿ.ರೇಣುಕಾಚಾರ್ಯ ಪ್ರಶ್ನಿಸಿದರು.

ಪ್ರಹ್ಲಾದ್ ಜೋಶಿ, ನಳೀನ್ ಕುಮಾರ್ ಕಟೀಲ್ ಇದ್ದಾಗ ಯಾಕೆ ಟೀಕೆ ಮಾಡಲಿಲ್ಲ. ಬಸವರಾಜ ಬೊಮ್ಮಾಯಿ ಇದ್ದಾಗಲು ಟೀಕೆ ಮಾಡಲಿಲ್ಲ. ಆದರೆ, ಬಿ.ಎಸ್.ಯಡಿಯೂರಪ್ಪ ಮತ್ತು ವಿ.ವೈ.ವಿಜಯೇಂದ್ರ ಇದ್ದಾಗ ಮಾತ್ರ ಟೀಕೆ ಯಾಕೆ?, ಇದರ ಹಿಂದೆ ಕೆಲವರ ಕುಮ್ಮಕ್ಕು ಇದೆ ಎಂದು ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದರು.

ಭಯಪಡುವ ವ್ಯಕ್ತಿ ನಾನಲ್ಲ: ಮಾ.25ರ ರಾತ್ರಿ ನೋಟಿಸ್ ಕೈ ಸೇರಿದೆ. ನೋಟಿಸ್ ಬಂದ ಬಳಿಕ ಕಾರ್ಯಕರ್ತರು, ಶಾಸಕರು, ಮಾಜಿ ಶಾಸಕರು ನನ್ನ ಜೊತೆ ಮಾತನಾಡಿದ್ದಾರೆ. ಜೊತೆಗೆ ವೀರಶೈವ ಮುಖಂಡರು ಸಹ ಕರೆ ಮಾಡಿ ಮಾತನಾಡಿದ್ದಾರೆ. ನನ್ನೊಂದಿಗೆ ಇದ್ದೇವೆ ಎಂದು ಭರವಸೆ ನೀಡಿದ್ದಾರೆ. ಆದರೆ, ನಾನು ನೋಟಿಸ್‍ಗೆ ಯಾವುದೇ ಭಯಪಟ್ಟಿಲ್ಲ. ರೇಣುಕಾಚಾರ್ಯ ಎಂದಿಗೂ ಭಯಪಡುವ ವ್ಯಕ್ತಿಯಲ್ಲ. ನನ್ನನ್ನು ಪಕ್ಷದಿಂದ ಉಚ್ಛಾಟನೆ ಮಾಡುವ ಬಗ್ಗೆ ಎರಡು ತಿಂಗಳ ಹಿಂದೆಯೇ ಮಾತನಾಡಿಕೊಂಡಿದ್ದರು. ಪಕ್ಷದೊಳಗಿನ ಎಲ್ಲ ಬೆಳವಣಿಗೆಯನ್ನು ವಿವರಿಸಿ ಹೈಕಮಾಂಡ್‍ಗೆ ಪತ್ರ ಬರುತ್ತೇನೆ ಎಂದು ಎಂ.ಪಿ.ರೇಣುಕಾಚಾರ್ಯ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X