Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮುಡಾ ಪ್ರಕರಣದ ತನಿಖಾ ವರದಿ ಕೋರ್ಟ್‌ಗೆ...

ಮುಡಾ ಪ್ರಕರಣದ ತನಿಖಾ ವರದಿ ಕೋರ್ಟ್‌ಗೆ ಸಲ್ಲಿಸದ ಲೋಕಾಯುಕ್ತ ಪೊಲೀಸರು; ಹಿಂದಿನ ವರದಿ ಆಧರಿಸಿ ವಿಚಾರಣೆ

ವಾರ್ತಾಭಾರತಿವಾರ್ತಾಭಾರತಿ18 Dec 2025 10:29 PM IST
share
ಮುಡಾ ಪ್ರಕರಣದ ತನಿಖಾ ವರದಿ ಕೋರ್ಟ್‌ಗೆ ಸಲ್ಲಿಸದ ಲೋಕಾಯುಕ್ತ ಪೊಲೀಸರು; ಹಿಂದಿನ ವರದಿ ಆಧರಿಸಿ ವಿಚಾರಣೆ

ಬೆಂಗಳೂರು : ಮುಡಾ ನಿವೇಶನ ಹಂಚಿಕೆ ಅಕ್ರಮ ಹಗರಣದ ಮುಂದುವರಿದ ತನಿಖೆಗೆ ಸಂಬಂಧಿಸಿದ ಯಾವುದೇ ದಾಖಲೆಗಳನ್ನು ಲೋಕಾಯುಕ್ತ ಪೊಲೀಸರು ಸಲ್ಲಿಸದ ಕಾರಣ, ಈ ಹಿಂದೆ ಸಲ್ಲಿಸಲಾಗಿರುವ ವರದಿಯ ಆಧಾರದಲ್ಲಿ ವಿಚಾರಣೆ ಮುಂದುವರಿಸಬೇಕಾಗುತ್ತದೆ ಎಂದು ಜನಪ್ರತಿ‌ನಿಧಿಗಳ ವಿಶೇಷ ನ್ಯಾಯಾಲಯ ಹೇಳಿದೆ.

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಖಾಸಗಿ ದೂರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಅವರು ಗುರುವಾರ ವಿಚಾರಣೆ ನಡೆಸಿದರು.

ಕೆಲ ಕಾಲ ಖಾಸಗಿ ದೂರನ್ನು ಆಲಿಸಿದ ನ್ಯಾಯಾಲಯ, ಕಳೆದ ವಿಚಾರಣೆಯಂದು ತನಿಖೆ ಪೂರ್ಣಗೊಳಿಸಿ, ಅಂತಿಮ ವರದಿ ಸಲ್ಲಿಸಲು ತನಿಖಾಧಿಕಾರಿಗಳಿಗೆ ನಿರ್ದೇಶಿಸಲಾಗಿತ್ತು. ತನಿಖೆ ಪೂರ್ಣಗೊಳ್ಳದ ಕಾರಣ ಹಾಗೂ ಹೆಚ್ಚಿನ ತನಿಖೆ ನಡೆಸಲು ತನಿಖಾಧಿಕಾರಿಗಳು ಮನವಿ ಮಾಡಿದ್ದರಿಂದ ಪ್ರಕರಣದಲ್ಲಿ 1ರಿಂದ 4ನೇ ಆರೋಪಿಗಳಿಗೆ ಸಂಬಂಧಿಸಿದಂತೆ ಸಲ್ಲಿಸಲಾದ ಬಿ ವರದಿಯ ಕುರಿತು ಯಾವುದೇ ಆದೇಶ ಹೊರಡಿಸುವುದನ್ನು ಈ ನ್ಯಾಯಾಲಯವು ಮುಂದೂಡುತ್ತಾ ಬಂದಿದೆ. ಆದರೆ, ಕೋರ್ಟ್ ನಿರ್ದೇಶನದ ಹೊರತಾಗಿಯೂ ತನಿಖೆಗೆ ಸಂಬಂಧಿಸಿದ ಯಾವುದೇ ದಾಖಲೆಗಳನ್ನು ತನಿಖಾ ಸಂಸ್ಥೆ ಸಲ್ಲಿಸದಿರುವ ಕಾರಣ, ಈಗಾಗಲೇ ಸಲ್ಲಿಸಲಾಗಿರುವ ವರದಿ ಆಧಾರದಲ್ಲಿ ವಿಚಾರಣೆ ಮುಂದುವರಿಯಬೇಕಾಗುತ್ತದೆ. ಆದ್ದರಿಂದ, ಮುಂದಿನ ವಿಚಾರಣೆಯ ದಿನಾಂಕ ಅಥವಾ ಅದಕ್ಕೂ ಮೊದಲು ಕೇಸ್ ಡೈರಿ (ಸಿಡಿ) ಕಡತಗಳನ್ನು ಒದಗಿಸಬೇಕು ಎಂದು ಲೋಕಾಯುಕ್ತ ಎಸ್‌ಪಿಪಿ‌ಗೆ ನಿರ್ದೇಶಿಸಿ ವಿಚಾರಣೆಯನ್ನು ಡಿಸೆಂಬರ್ 23ಕ್ಕೆ ಮುಂದೂಡಿತು.

ಇದಕ್ಕೂ ಮುನ್ನ ಲೋಕಾಯುಕ್ತ ಎಸ್‌ಪಿಪಿ ವೆಂಕಟೇಶ್‌ ಅರಬಟ್ಟಿ ಅವರು, ಪ್ರಕರಣದ ತನಿಖೆಗೆ ಸಂಬಂಧಿಸಿದ ವಸ್ತುಸ್ಥಿತಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿ, ಪ್ರಕರಣದಲ್ಲಿ ಕೆಲ ಅಗತ್ಯ ಪೂರ್ವಾನುಮತಿ ಆದೇಶ ಪಡೆಯಬೇಕಿದ್ದು, ತನಿಖೆಯು ಅಂತಿಮ ಹಂತದಲ್ಲಿದೆ ಎಂದು ತಿಳಿಸಿದರು.

ಇದಕ್ಕೆ ಆಕ್ಷೇಪಿಸಿದ ದೂರುದಾರ ಸ್ನೇಹಮಯಿ ಕೃಷ್ಣ ಅವರು ಖಾಸಗಿ ದೂರಿನಲ್ಲಿ ಉಲ್ಲೇಖಿಸಲಾದ 1ರಿಂದ 4ನೇ ಆರೋಪಿಗಳ (ಸಿದ್ದರಾಮಯ್ಯ, ಬಿ.ಎಂ. ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ, ಜೆ. ದೇವರಾಜು) ವಿರುದ್ಧದ ಬಿ ವರದಿಯ ಬಗ್ಗೆ ಇದುವರೆಗೆ ಯಾವುದೇ ಹೆಚ್ಚಿನ ತನಿಖೆ ನಡೆಸಲಾಗಿಲ್ಲ. ತನಿಖಾ ಸಂಸ್ಥೆಯು ಪ್ರಕರಣವನ್ನು ಸತತವಾಗಿ ವಿಳಂಬ ಮಾಡುತ್ತಿದೆ ಎಂದು ದೂರಿದರು.

ಇದನ್ನು ನಿರಾಕರಿಸಿದ ಅರಬಟ್ಟಿ ಅವರು, ವರದಿಯ ಅಂತಿಮ ಪ್ರತಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಒದಗಿಸಲು ಸಿದ್ಧರಿದ್ದೇವೆ ಮತ್ತು ಅವುಗಳ ವಿಶ್ವಾಸಾರ್ಹತೆಯನ್ನು ಸಾಬೀತುಪಡಿಸಲು ಕೇಸ್ ಡೈರಿ ಕಡತಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಅನುಮತಿ ನೀಡಬೇಕು ಎಂದು ಕೋರಿದರು.

ದಿನೇಶ್ ಕುಮಾರ್ ನ್ಯಾಯಾಂಗ ಬಂಧನ ವಿಸ್ತರಣೆ:

ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುಡಾ ಮಾಜಿ ಆಯುಕ್ತ ಜಿ.ಟಿ. ದಿನೇಶ್‌ ಕುಮಾರ್‌ ಅವರ ನ್ಯಾಯಾಂಗ ಬಂಧನವನ್ನು 14 ದಿನಗಳವರೆಗೆ ವಿಸ್ತರಿಸುವಂತೆ ತನಿಖಾಧಿಕಾರಿಗಳು ಮಾಡಿದ ಮನವಿ ಪರಿಗಣಿಸಿದ ನ್ಯಾಯಾಲಯವು ದಿನೇಶ್ ಕುಮಾರ್ ನ್ಯಾಯಾಂಗ ಬಂಧನವನ್ನು ಡಿಸೆಂಬರ್ 31ರವರೆಗೆ ವಿಸ್ತರಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X