ಮುಡಾ ಪ್ರಕರಣ | ಸಿಬಿಐ ತನಿಖೆ ಕೋರಿದ್ದ ಮೇಲ್ಮನವಿ: ಸಿಎಂ ಪತ್ನಿಗೆ ಹೈಕೋರ್ಟ್ ನೋಟಿಸ್

ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಮುಡಾದಿಂದ 14 ಸೈಟ್ ಹಂಚಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದ ಮೇಲ್ಮನವಿಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಸಿಬಿಐ ತನಿಖೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿಯಾಗದ ಹಿನ್ನೆಲೆಯಲ್ಲಿ ಸಿಎಂ ಪತ್ನಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿದೆ. ಅಲ್ಲದೆ, ತನಿಖೆಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿ ಕುರಿತು ನೋಟಿಸ್ ಜಾರಿಯಾಗದ ಪ್ರತಿವಾದಿಗಳಿಗೆ ಮತ್ತೆ ನೋಟಿಸ್ ನೀಡಿ ನ್ಯಾಯಮೂರ್ತಿ.ವಿ.ಕಾಮೇಶ್ವರ ರಾವ್, ಸಿ.ಎಂ.ಜೋಷಿ ಅವರಿದ್ದ ವಿಭಾಗೀಯ ಪೀಠ ಆದೇಶಿಸಿ, ವಿಚಾರಣೆ ಸೆಪ್ಟೆಂಬರ್ 4ಕ್ಕೆ ಮುಂದೂಡಿದೆ.
Next Story





