ಮುಡಾ ಪ್ರಕರಣ | ಸಿಬಿಐ ತನಿಖೆ ಕೋರಿದ್ದ ಮೇಲ್ಮನವಿ : ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು : ಮುಡಾ ಪ್ರಕರಣವನ್ನು ಸಿಬಿಐ ತನಿಖೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಮುಡಾ ಪ್ರಕರಣವನ್ನು ಸಿಬಿಐ ತನಿಖೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ನಡೆಸಿ, ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ, ಭೂಮಾಲೀಕ ದೇವರಾಜುಗೂ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಅಲ್ಲದೆ, ಸಿಬಿಐ, ಕೇಂದ್ರ ಗೃಹ ಇಲಾಖೆ, ಲೋಕಾಯುಕ್ತ ಪೊಲೀಸರಿಗೂ ನೋಟಿಸ್ ನೀಡಿ, ಹೈಕೋರ್ಟ್ ವಿಚಾರಣೆಯನ್ನು ಎಪ್ರಿಲ್.28ಕ್ಕೆ ಮುಂದೂಡಿದೆ.
ಏಕಸದಸ್ಯ ಪೀಠ ಸಿಬಿಐ ತನಿಖೆಗೆ ಆದೇಶಿಸಲು ನಿರಾಕರಿಸಿತ್ತು. ಹೀಗಾಗಿ ವಿಭಾಗೀಯ ಪೀಠಕ್ಕೆ ಸ್ನೇಹಮಯಿ ಕೃಷ್ಣ ಮೇಲ್ಮನವಿ ಸಲ್ಲಿಸಿದ್ದರು. ಲೋಕಾಯುಕ್ತ ಪೊಲೀಸರು ಸರಕಾರದ ಅಧೀನದಲ್ಲಿದ್ದಾರೆ. ಹೀಗಾಗಿ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸಲಾಗಿದೆ.
Next Story