Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮುಡಾ ಪ್ರಕರಣ | ಆ.3ರಿಂದ ಬೆಂಗಳೂರಿನಿಂದ...

ಮುಡಾ ಪ್ರಕರಣ | ಆ.3ರಿಂದ ಬೆಂಗಳೂರಿನಿಂದ - ಮೈಸೂರಿಗೆ ಪಾದಯಾತ್ರೆ : ಬಿ.ವೈ.ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ28 July 2024 7:48 PM IST
share
ಮುಡಾ ಪ್ರಕರಣ | ಆ.3ರಿಂದ ಬೆಂಗಳೂರಿನಿಂದ - ಮೈಸೂರಿಗೆ ಪಾದಯಾತ್ರೆ : ಬಿ.ವೈ.ವಿಜಯೇಂದ್ರ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಹಗರಣ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಹಗರಣ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕಲ್ಯಾಣಕ್ಕೆ ಮೀಸಲಿಟ್ಟಿದ್ದ ಹಣವನ್ನು ಅನ್ಯ ಉದ್ದೇಶಗಳಿಗೆ ಬಳಕೆ ಮಾಡಿರುವುದನ್ನು ಖಂಡಿಸಿ ಆ.3ರಿಂದ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ರವಿವಾರ ನಗರದ ಖಾಸಗಿ ಹೊಟೇಲ್‍ನಲ್ಲಿ ನಡೆದ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳ ಮುಖಂಡರ ಸಭೆಯ ಬಳಿಕ ಜಂಟಿಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪಾದಯಾತ್ರೆಯ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆಯಲ್ಲಿ ತೆರಳಲು 7 ದಿನ ಬೇಕಾಗುತ್ತದೆ. ಆ.3ರಂದು ಪಾದಯಾತ್ರೆಗೆ ಚಾಲನೆ ನೀಡಲಾಗುವುದು, ಆ.10ರಂದು ಮೈಸೂರಿನಲ್ಲಿ ಸಮಾರೋಪ ನಡೆಯಲಿದೆ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಪಾದಯಾತ್ರೆಯನ್ನು ಉದ್ಘಾಟಿಸಿ, ಅವರು ಭಾಗವಹಿಸುತ್ತಾರೆ. ಸಮಾರೋಪ ಕಾರ್ಯಕ್ರಮದಲ್ಲಿ ಕೇಂದ್ರದ ನಾಯಕರು ಭಾಗವಹಿಸಲಿದ್ದಾರೆ ಎಂದು ವಿಜಯೇಂದ್ರ ಮಾಹಿತಿ ನೀಡಿದರು.

ಇಂದಿನ ಸಭೆಯಲ್ಲಿ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಎರಡೂ ಪಕ್ಷಗಳ ಮುಖಂಡರು ಭಾಗವಹಿಸಿ ರಾಜ್ಯದ ಸರಕಾರದಲ್ಲಿ ನಡೆದಿರುವ ಹಗರಣಗಳ ಕುರಿತು ಚರ್ಚಿಸಲಾಗಿದೆ ಎಂದು ಅವರು ಹೇಳಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಭ್ರಷ್ಟ ಸರಕಾರ ಕಿತ್ತೊಗೆಯುವ ಹೋರಾಟದಲ್ಲಿ ಜನರೂ ಭಾಗವಹಿಸಬೇಕು. ಎರಡೂ ಪಕ್ಷಗಳು ಸೇರಿ ಹೋರಾಟ ನಡೆಸಲಿದ್ದು, ಹತ್ತಾರು ಸಾವಿರ ಜನ ಈ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಮುಖ್ಯಮಂತ್ರಿ ರಾಜೀನಾಮೆ ಕೊಡುವವರೆಗೂ ಹೋರಾಟ ನಿಲ್ಲುವುದಿಲ್ಲ. ಲೋಕಸಭೆ, ರಾಜ್ಯಸಭೆಯಲ್ಲೂ ಇದರ ಕುರಿತು ಚರ್ಚೆ ಆಗಿದೆ. ಮುಖ್ಯಮಂತ್ರಿಗೆ ಕಿಂಚಿತ್ತು ಗೌರವ ಇದ್ದರೆ, ಮಾಡಿರುವ ಅಪರಾಧವನ್ನು ಒಪ್ಪಿಕೊಂಡು ರಾಜೀನಾಮೆ ನೀಡಬೇಕೆಂದು ಅವರು ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X