Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮುಡಾ ಪ್ರಕರಣದ ಬಿ ವರದಿ ಪ್ರಶ್ನಿಸಿದ...

ಮುಡಾ ಪ್ರಕರಣದ ಬಿ ವರದಿ ಪ್ರಶ್ನಿಸಿದ ಅರ್ಜಿ; ಲೋಕಾಯುಕ್ತ, ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್

ವಾರ್ತಾಭಾರತಿವಾರ್ತಾಭಾರತಿ26 March 2026 3:12 PM IST
share
ಮುಡಾ ಪ್ರಕರಣದ ಬಿ ವರದಿ ಪ್ರಶ್ನಿಸಿದ ಅರ್ಜಿ; ಲೋಕಾಯುಕ್ತ, ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್

ಬೆಂಗಳೂರು : ಮುಡಾ ಅಕ್ರಮ ನಿವೇಶನ ಹಂಚಿಕೆ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ ಬಿ ವರದಿ ಅಂಗೀಕರಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಲೋಕಾಯುಕ್ತ, ಜಾರಿ ನಿರ್ದೇಶನಾಲಯ (ಈಡಿ) ಹಾಗೂ ಸಿದ್ದರಾಮಯ್ಯ ಮತ್ತಿತರ ಆರೋಪಿಗಳಿಗೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.

ಮೈಸೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಸಲ್ಲಿಸಿದ್ದ ಬಿ ವರದಿ ಅಂಗೀಕರಿಸಿ ವಿಶೇಷ ನ್ಯಾಯಾಲಯ ಹೊರಡಿಸಿರುವ ಆದೇಶ ರದ್ದು ಕೋರಿ ಪ್ರಕರಣದ ಖಾಸಗಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌. ಸುನೀಲ್‌ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ಆರಂಭವಾಗುತ್ತಿದ್ದಂತೆ ಅರ್ಜಿದಾರರ ಪರ ಹಿರಿಯ ವಕೀಲೆ ಲಕ್ಷ್ಮೀ ಐಯಂಗಾರ್‌ ಅವರು, ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಬಿ ವರದಿಯನ್ನು ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ. ಇದೊಂದು ರೀತಿಯಲ್ಲಿ ಸಮಿತಿ ವರದಿಯಂತಿದೆ. ಅರ್ಜಿ ಸಂಬಂಧ ರಿಜಿಸ್ಟ್ರಿ ಎತ್ತಿರುವ ಕಚೇರಿ ಆಕ್ಷೇಪಣೆ ಸರಿಪಡಿಸಲಾಗುವುದು ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಇದನ್ನು ಆಲಿಸಿದ ನ್ಯಾಯಪೀಠ ಅರ್ಜಿಯಲ್ಲಿ ಪ್ರತಿವಾದಿಗಳಾದ ಮೈಸೂರು ಲೋಕಾಯುಕ್ತ ಪೊಲೀಸ್‌ ವರಿಷ್ಠಾಧಿಕಾರಿ ಹಾಗೂ ಈಡಿ ಗೆ ನೋಟಿಸ್‌ ಜಾರಿ ಮಾಡಿತಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ. ಪಾರ್ವತಿ, ಬಾವಮೈದ ಮಲ್ಲಿಕಾರ್ಜುನ ಸ್ವಾಮಿ, ವಿವಾದಿತ ಜಮೀನಿನ ಮೂಲ ಮಾಲೀಕ ಜೆ. ದೇವರಾಜು ಹಾಗೂ ಮುಡಾ ಮಾಜಿ ಆಯುಕ್ತ ಜಿ.ಟಿ. ದಿನೇಶ್‌ ಕುಮಾರ್‌ ಅವರಿಗೆ ತುರ್ತು ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು‌.

ಮನವಿ ಏನು?

ಮುಡಾ ಅಕ್ರಮ ನಿವೇಶನ ಹಂಚಿಕೆ ಆರೋಪ ಪ್ರಕರಣದ ತನಿಖೆ ನಡೆಸಿ ಮೈಸೂರು ಲೋಕಾಯುಕ್ತ ಪೊಲೀಸ್‌ ವರಿಷ್ಠಾಧಿಕಾರಿ 2025ರ ಫೆಬ್ರವರಿ 12ರಂದು ಸಲ್ಲಿಸಿದ್ದ ಬಿ ವರದಿಯನ್ನು ಅಂಗೀಕರಿಸಿ ವಿಶೇಷ‌‌ ನ್ಯಾಯಾಲಯ 2026ರ ಜನವರಿ 28ರಂದು ಆದೇಶ ಹೊರಡಿಸಿದೆ. ಆದ್ದರಿಂದ, ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಬಿ ವರದಿಯನ್ನು ಪಡೆದು ಪರಿಶೀಲಿಸಬೇಕು. ವರದಿ ಅಂಗೀಕರಿಸಿದ ವಿಶೇಷ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು. ಜತೆಗೆ, ಪ್ರಕರಣದ ತ‌ನಿಖೆಯನ್ನು ಸ್ವತಂತ್ರ ತನಿಖಾ ಸಂಸ್ಥೆಗೆ ವರ್ಗಾಯಿಸಬೇಕು ಹಾಗೂ ತನಿಖೆ ನಡೆಸಿ ಹೊಸದಾಗಿ ವರದಿ ಸಲ್ಲಿಸಲು ಸ್ವತಂತ್ರ ತನಿಖಾ ಸಂಸ್ಥೆಗೆ ನಿರ್ದೇಶಿಸಬೇಕು ಎಂದು ಸ್ನೇಹಮಯಿ ಕೃಷ್ಣ ಮನವಿ ಮಾಡಿದ್ದಾರೆ‌.

Tags

MUDA CaseHigh CourtLokayuktaCM Siddaramaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X