Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮುಡಾ ಹಗರಣ | 27 ಹಕ್ಕುದಾರರಿರುವ...

ಮುಡಾ ಹಗರಣ | 27 ಹಕ್ಕುದಾರರಿರುವ ಪಿತ್ರಾರ್ಜಿತ ಆಸ್ತಿಯನ್ನು ಒಬ್ಬನ ಸಹಿಯಿಂದ ಪಡೆದ ಸಿದ್ದರಾಮಯ್ಯ : ಆರ್‌.ಅಶೋಕ್‌ ಆರೋಪ

ವಾರ್ತಾಭಾರತಿವಾರ್ತಾಭಾರತಿ7 Aug 2024 5:33 PM IST
share
ಮುಡಾ ಹಗರಣ | 27 ಹಕ್ಕುದಾರರಿರುವ ಪಿತ್ರಾರ್ಜಿತ ಆಸ್ತಿಯನ್ನು ಒಬ್ಬನ ಸಹಿಯಿಂದ ಪಡೆದ ಸಿದ್ದರಾಮಯ್ಯ : ಆರ್‌.ಅಶೋಕ್‌ ಆರೋಪ

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಖರೀದಿಸಿದ ಜಮೀನು ಪಿತ್ರಾರ್ಜಿತ ಆಸ್ತಿಯಾಗಿದ್ದು, ಅದಕ್ಕೆ 27 ಹಕ್ಕುದಾರರಿದ್ದರೂ ಕೇವಲ ಒಬ್ಬರ ಬಳಿ ಸಹಿ ಹಾಕಿಸಿಕೊಳ್ಳಲಾಗಿದೆ. ಇದು ಸಂಪೂರ್ಣ ಅಕ್ರಮ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರ ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದರು. ಜಮೀನಿನ ಮೂಲ ಹಕ್ಕುದಾರರು, ಇತಿಹಾಸದ ಕುರಿತು ವಿವರಿಸಿದರು.

"ಸಿಎಂ ಸಿದ್ದರಾಮಯ್ಯ ಖರೀದಿಸಿದ ಜಾಗ ನಿಂಗ ಎಂಬುವರಿಗೆ ಸೇರಿದ ಜಮೀನಾಗಿದ್ದು, 1936ರಲ್ಲಿ ನಿಂಗ ಜಮೀನು ಖರೀದಿಸಿದ್ದರು. ಅವರು 28 ವರ್ಷಗಳ ಹಿಂದೆ ನಿಧನರಾಗಿದ್ದು, ಅವರ ಪತ್ನಿ ನಿಂಗಮ್ಮ 1990 ರಲ್ಲಿ ಮೃತರಾಗಿದ್ದರು. ಇದು ನಿಂಗ ಮತ್ತು ನಿಂಗಮ್ಮ ಅವರ ಸ್ವಯಾರ್ಜಿತ ಆಸ್ತಿಯಾಗಿದ್ದು, ಅವರ ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಯಾಗಿದೆ. ನಿಂಗ ಅವರಿಗೆ ಮೂರು ಮಕ್ಕಳಿದ್ದು, ಅವರ ಕುಟುಂಬದವರು 27 ಜನರಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ದೇವರಾಜು ಎಂಬ ಒಬ್ಬ ವ್ಯಕ್ತಿಯಿಂದ ಮಾತ್ರ ಸಹಿ ಹಾಕಿಸಿಕೊಂಡಿದ್ದಾರೆ" ಎಂದು ವಿವರಿಸಿದರು.

ʼ1968ರಲ್ಲಿ ಸರ್ವೆ ಸಂಖ್ಯೆ 464 ರಲ್ಲಿ ನಿಂಗ ಅವರ ಪುತ್ರ ಮಲ್ಲಯ್ಯ ಅವರ ಹೆಸರಿಗೆ ಈ ಜಮೀನು ನೋಂದಣಿಯಾಗಿತ್ತು. 1990ರಲ್ಲಿ ಒಟ್ಟು 462 ಎಕರೆ ಜಮೀನಿನಲ್ಲಿ ದೇವನೂರು ಬಡಾವಣೆ ಮುಡಾ ಪ್ರಾಥಮಿಕ ಅಧಿಸೂಚನೆ ಹೊರಡಿಸಿತ್ತು. ಬಳಿಕ ಜಮೀನು ಸಂಬಂಧ ದೇವರಾಜು ಅವರಿಗೆ ಮುಡಾದಿಂದ 3 ಲಕ್ಷ ರೂ. ಅವಾರ್ಡ್ ನೀಡಲಾಗಿತ್ತು. ಈ ಅವಾರ್ಡ್ ನೋಟಿಸ್‌ಗೆ ಮಲ್ಲಯ್ಯ ಸಹಿ ಹಾಕಿದ್ದರು. ನಂತರ 1998 ರಲ್ಲಿ ಮುಡಾ ಸರ್ವೆ ಸಂಖ್ಯೆ 464 ನ್ನು ಭೂ ಸ್ವಾಧೀನದಿಂದ ಕೈ ಬಿಟ್ಟಿತ್ತುʼ ಎಂದು ತಿಳಿಸಿದರು.

ʼಈ ಜಮೀನು 1998 ರಲ್ಲಿ ಮುಡಾದಿಂದ ಡಿ ನೋಟಿಫಿಕೇಶನ್‌ ಆಗಿತ್ತು. ಆಗ ಸಿದ್ದರಾಮಯ್ಯನವರೇ ಉಪಮುಖ್ಯಮಂತ್ರಿಯಾಗಿದ್ದರು. ತಂದೆ ತಾಯಿ ಸತ್ತ ನಂತರ ಕುಟುಂಬದ ಎಲ್ಲರ ಸಹಿ ಪಡೆಯಬೇಕಾಗುತ್ತದೆ. 2004 ರಲ್ಲಿ ದೇವರಾಜು ಅವರಿಂದ ಸಿದ್ದರಾಮಯ್ಯ ಅವರ ಭಾವಮೈದುನ ಮಲ್ಲಿಕಾರ್ಜುನ ಸ್ವಾಮಿ 3 ಎಕರೆ 16 ಗುಂಟೆ ಜಮೀನನ್ನು ಕ್ರಯಕ್ಕೆ ಪಡೆದು ಕಾನೂನು ಬಾಹಿರವಾಗಿ ನೋಂದಣಿ ಮಾಡಿಸಿಕೊಂಡಿದ್ದರು. 2005 ರಲ್ಲಿ ಇದು ಭೂ ಪರಿವರ್ತನೆಯಾಯಿತು. 2001 ರಲ್ಲೇ ಬಡಾವಣೆ ಮಾಡಲು ಇದನ್ನು ಎಲ್‌ಆಂಡ್‌ಟಿ ಗೆ ನೀಡಲಾಗಿತ್ತು. ಅದಾದ ನಂತರ ಈ ಜಮೀನು ಪರಿವರ್ತನೆಯಾಗಿದೆʼ ಎಂದು ಹೇಳಿದರು.

ʼಈ ಜಮೀನು ಮೂಲೆಯಲ್ಲಿದ್ದುದರಿಂದ ಇದು ಬೇಕಿಲ್ಲ ಎಂದು ಕೈ ಬಿಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಆದರೆ ಇದು ಮಧ್ಯಭಾಗದಲ್ಲಿ ಬರುತ್ತದೆ. ದಲಿತ ವ್ಯಕ್ತಿ ನಿಂಗನಿಗೆ ಸೇರಿದ ಜಮೀನಿನ ದಾಖಲೆಗಳ ವಿವರ ದೊಡ್ಡ ದೊಡ್ಡ ಹುದ್ದೆಗಳಲ್ಲಿದ್ದ ಸಿದ್ದರಾಮಯ್ಯನವರಿಗೆ ತಿಳಿಯಲೇ ಇಲ್ಲ. ಈ ಜಮೀನನ್ನು ಸಿದ್ದರಾಮಯ್ಯ ಪತ್ನಿಗೆ ಭಾವ ಅರಿಶಿನ ಕುಂಕುಮಕ್ಕೆ ನೀಡಿದ್ದಾರೆ. ಇದು ಪೂರ್ವ ಯೋಜಿತ ಅಕ್ರಮವಾಗಿದೆʼ ಎಂದರು.

ಸಿಎಂ ಸಿದ್ದರಾಮಯ್ಯ ಪತ್ನಿ 2014 ರಲ್ಲಿ ಮುಡಾಗೆ ಪತ್ರ ಬರೆದು ಬದಲಿ ಪರಿಹಾರ ಜಮೀನು ನೀಡುವಂತೆ ಕೋರಿದ್ದರು. ಇದಕ್ಕೆ ಉತ್ತರ ಬರೆದ ಮುಡಾ ಆಯುಕ್ತರು, ಬದಲಿ ಜಮೀನು ಇಲ್ಲವೆಂದು, ಅದಕ್ಕೆ ತತ್ಸಮಾನ ಜಮೀನು ನೀಡಲಾಗುವುದು ಎಂದು ತಿಳಿಸುತ್ತಾರೆ. ನಂತರ 2014 ರಲ್ಲಿ 50:50 ವಿಧಾನದಲ್ಲಿ ಪರಿಹಾರ ನೀಡಲಾಯಿತು. 2023 ರಲ್ಲಿ ನಗರಾಭಿವೃದ್ಧಿ ಇಲಾಖೆ ಇವೆಲ್ಲವೂ ನಿಯಮಬಾಹಿರ ಎಂದು ಆದೇಶ ಮಾಡಿತ್ತು ಎಂದರು.

ಅಧಿಕಾರಿಗಳ ಮೇಲೆ ಒತ್ತಡ :

ಈ ಜಮೀನಿನ ಮಾಲಿಕತ್ವದ ವಿಷಯದಲ್ಲೇ ಇನ್ನೂ ತೀರ್ಮಾನ ಆಗಿಲ್ಲ. ಆದರೂ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದವರು ಅದನ್ನು ಪರಿಶೀಲಿಸಿಲ್ಲ. ಈ ಜಮೀನನ್ನು ಮೃತರಾದ ನಿಂಗ ಅವರ ಹೆಸರಿನಲ್ಲಿ ಡಿ ನೋಟಿಫೈ ಮಾಡಿದ್ದಾರೆ. ಬದಲಿ ಜಮೀನು ಪರಿಹಾರ ನೀಡುವುದಾದರೆ ಅದೇ ಜಾಗದಲ್ಲಿ ನಿವೇಶನ ನೀಡಬೇಕು. ಆದರೆ ಬೆಲೆಬಾಳುವ ಸೈಟುಗಳನ್ನು ನೀಡಿದ್ದಾರೆ. ಇದಕ್ಕೆ ಅಧಿಕಾರಿಗಳ ಮೇಲೆ ಯಾರು ಒತ್ತಡ ಹೇರಿದ್ದಾರೆ? ಎಂದು ಪ್ರಶ್ನೆ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X