Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮೂಡಿಗೆರೆ: ಡಿ.ಬಿ.ಚಂದ್ರೇಗೌಡ ಅವರ ಅಂತಿಮ...

ಮೂಡಿಗೆರೆ: ಡಿ.ಬಿ.ಚಂದ್ರೇಗೌಡ ಅವರ ಅಂತಿಮ ದರ್ಶನ ಪಡೆದ ಗಣ್ಯರು

ವಾರ್ತಾಭಾರತಿವಾರ್ತಾಭಾರತಿ7 Nov 2023 7:34 PM IST
share
ಮೂಡಿಗೆರೆ: ಡಿ.ಬಿ.ಚಂದ್ರೇಗೌಡ ಅವರ ಅಂತಿಮ ದರ್ಶನ ಪಡೆದ ಗಣ್ಯರು

ಮೂಡಿಗೆರೆ, ನ.7: ಮಂಗಳವಾರ ಮುಂಜಾನೆ ನಿಧನರಾದ ನಾಡಿಗೆ ಹೆಸರಾಂತ ರಾಜಕಾರಣಿ, ಮಾಜಿ ಸಚಿವ ಡಿ.ಬಿ.ಚಂದ್ರೇಗೌಡ ಅವರ ಮೃತ ದೇಹವ ಅಂತಿಮ ದರ್ಶನ ಪಟ್ಟಣದ ಅಡ್ಯಂತಾಯ ರಂಗಮಂದಿರಲ್ಲಿ ನಡೆಯಿತು. ಮಧ್ಯಾಹ್ನದಿಂದ ಸಂಜೆವರೆಗೂ ನಡೆದ ಅಂತಿಮ ದರ್ಶದನದಲ್ಲಿ ನಾಡಿನ ವಿವಿಧ ಪಕ್ಷಗಳ ಪ್ರಮುಖ ರಾಜಕಾರಣಿಗಳು, ಗಣ್ಯರು ಭಾಗವಹಿಸಿ ಅಂತಿಮ ದರ್ಶನ ಪಡೆದುಕೊಂಡರು.

ಮಧ್ಯಾಹ 2ರಿಂದ ಸಂಜೆ 6ಗಂಟೆವರೆಗೆ ಪಟ್ಟಣದ ಅಡ್ಯಂತಾಯ ರಂಗಮಂದಿರಲ್ಲಿ ಡಿಬಿಸಿ ಅವರ ಪಾರ್ಥೀವ ಶರೀರ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು.

ಈ ಸಂದರ್ಭದಲ್ಲಿ ಮಾಜಿ ಸಿಎಂ ಹಾಗೂ ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ಬಿಜೆಪಿಯ ಬಾವುಟವನ್ನು ಶಪ ಪೆಟ್ಟಿಗೆ ಮೇಲೆ ಹಾಕುವ ಮೂಲಕ ಡಿಬಿಸಿ ಅವರಿಗೆ ನಮನ ಸಲ್ಲಿಸಿದರು. ನಂತರ ಆಗಮಿಸಿದ ಮಾಜಿ ಸಭಾಪತಿ ರಮೇಶ್‍ಕುಮಾರ್ ಅವರು ಕೆಲ ಹೊತ್ತು ಡಿಬಿಸಿ ಅವರ ಪ್ರಾರ್ಥೀವ ಶರೀರ ವೀಕ್ಷಿಸುತ್ತಾ ಕಣ್ಣೀರಿಟ್ಟರು. ಉಳಿದಂತೆ ಕೇಂದ್ರದ ಮಾಜಿ ಸಚಿವರಾದ ಪ್ರಮೋದ್ ಮದ್ವರಾಜ್, ಡಿ.ಕೆ.ತಾರಾದೇವಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಪೊನ್ನಣ್ಣ, ಮಾಜಿ ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್, ಮುಖ್ಯಮಂತ್ರಿ ಚಂದ್ರು, ಮಾಜಿ ಸಂಸದ ಜಯಪ್ರಕಾಶ್‍ಹೆಗಡೆ, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಚಿಕ್ಕಮಗಳೂರು ಶಾಸಕ ಎಚ್.ಡಿ.ತಮ್ಮಯ್ಯ ಸೇರಿದಂತೆ ಎಲ್ಲಾ ಪಕ್ಷದ ನಾಯಕರು ಹಾಗೂ ಸಾರ್ವಜನಿಕರು ಡಿಬಿಸಿ ಅವರ ಅಂತಿಮ ದರ್ಶನ ಪಡೆದರು. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಸಾರ್ವಜನಿಕರು ಭಾರೀ ಸಂಖ್ಯೆಯಲ್ಲಿ ಡಿಬಿಸಿ ಅಂತಿಮ ದರ್ಶನಕ್ಕೆ ಆಗಮಿಸಿದ್ದರಿಂದ ಸ್ಥಳದಲ್ಲಿ ಜನಜಂಗುಳಿ ಏರ್ಪಟ್ಟಿತ್ತು.

ಡಿಬಿಸಿ ಅವರ ಪತ್ನಿ ಪೂರ್ಣಿಮಾ, ನಾಲ್ವರು ಪುತ್ರಿಯರ ಪೈಕಿ ಮೂವರು ಪುತ್ರಿಯರಾದ ಪಲ್ಲವಿ, ವೀಣಾ, ಶೃತಿ ಹಾಗೂ ಬಂದು ಈ ವೇಳೆ ಉಪಸ್ಥಿತರಿದ್ದರು. ಇನ್ನೋರ್ವ ಪುತ್ರಿ ಸಂಗೀತಾ ಅಮೇರಿಕಾದಿಂದ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಡಿಬಿಸಿ ಅಂತ್ಯ ಸಂಸ್ಕಾರವನ್ನು ಬುಧವಾರ ಮಧ್ಯಾಹ್ನ 12ಕ್ಕೆ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ಪೂರ್ಣಚಂದ್ರ ಎಸ್ಟೇಟ್‍ನಲ್ಲಿ ನೆರವೇರಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X