Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮುನಿರತ್ನ ಮೇಲೆ ಮೊಟ್ಟೆ ಎಸೆತ, ಹಲ್ಲೆ...

ಮುನಿರತ್ನ ಮೇಲೆ ಮೊಟ್ಟೆ ಎಸೆತ, ಹಲ್ಲೆ ಯತ್ನ ಸಣ್ಣ ಘಟನೆಯಲ್ಲ : ವಿಜಯೇಂದ್ರ

"ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ"

ವಾರ್ತಾಭಾರತಿವಾರ್ತಾಭಾರತಿ25 Dec 2024 9:28 PM IST
share
ಮುನಿರತ್ನ ಮೇಲೆ ಮೊಟ್ಟೆ ಎಸೆತ, ಹಲ್ಲೆ ಯತ್ನ ಸಣ್ಣ ಘಟನೆಯಲ್ಲ : ವಿಜಯೇಂದ್ರ

ಬೆಂಗಳೂರು : ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದಿರುವುದು, ಹಲ್ಲೆ ಮಾಡುವ ಪ್ರಯತ್ನ ನಡೆದಿದ್ದು ಇದು ಸಣ್ಣ ಘಟನೆಯಲ್ಲ. ಅವರ ಮೇಲೆ ಒತ್ತಡ ಹಾಕಿ ಅವರು ರಾಜೀನಾಮೆ ಕೊಡಬೇಕು, ಉಪಚುನಾವಣೆಯಾಗಿ ಬೇಕಾದವರನ್ನು ಗೆಲ್ಲಿಸಬೇಕೆಂಬ ಷಡ್ಯಂತ್ರ ಇದರ ಹಿಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.

ಬುಧವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಹಿಂದೆ ಶಾಸಕ ಹರೀಶ್ ಪೂಂಜ ಮೇಲೆ ಸಹ ಬೋಗಸ್ ಕೇಸನ್ನು ಹಾಕಿ ಅವರನ್ನು ಬಂಧಿಸಲು ಯತ್ನಿಸಿದ್ದರು. ಮೊನ್ನೆ ಸಿ.ಟಿ.ರವಿ ಪ್ರಕರಣದಲ್ಲಿ ಸದನದ ಹೊರಗಡೆ ಜನಪ್ರತಿನಿಧಿಯನ್ನು ಯಾವ ರೀತಿ ನಡೆಸಿಕೊಂಡಿದ್ದಾರೆ. ಪೊಲೀಸರ ದುರ್ಬಳಕೆಯನ್ನು ನೋಡಿದ್ದೀರಿ. ಇದ್ಯಾವುದು ಸರಕಾರದ ಕುಮ್ಮಕ್ಕಿನಿಂದ ಆಗುತ್ತದೆಯೇ ವಿನಾಃ, ಸರಕಾರ ಅಥವಾ ಸಚಿವರ ಹಸ್ತಕ್ಷೇಪ ಇಲ್ಲದೆ ಆಗಲು ಸಾಧ್ಯವಿಲ್ಲ" ಎಂದು ಸಂಶಯ ವ್ಯಕ್ತಪಡಿಸಿದರು.

ಮುನಿರತ್ನ ಜೊತೆಗಿರುವ ಕಾರ್ಯಕರ್ತರು, ಮುಖಂಡರು ನೊಂದುಕೊಂಡಿದ್ದಾರೆ. ಅವರ ಮೇಲೂ ಸುಳ್ಳು ಕೇಸು ದಾಖಲಿಸಲಾಗುತ್ತಿದೆ. ಹಳೆ ಕೇಸುಗಳನ್ನು ರೀ ಓಪನ್ ಮಾಡುತ್ತಿದ್ದಾರೆ. ಮಹಿಳೆಯರ ಮೇಲೂ ದೌರ್ಜನ್ಯ ನಡೆಯುತ್ತಿದೆ ಎಂದು ಆಕ್ಷೇಪಿಸಿದರು.

ಬಿಜೆಪಿ ಕಾರ್ಯಕರ್ತರ ಮನೆಗೆ ನುಗ್ಗಿ ಬಿಯರ್ ಬಾಟಲ್ ಒಡೆದು ಹಾಕಿ ಮನೆಯಲ್ಲಿರುವ ಹೆಣ್ಮಕ್ಕಳಿಗೆ ಬೆದರಿಸುವ ಕೆಲಸವನ್ನು ಕಾಂಗ್ರೆಸ್ ಪುಡಾರಿಗಳು ಮಾಡುತ್ತಿದ್ದಾರೆ ಎಂದು ಕಾರ್ಯಕರ್ತರು ಆರೋಪ ಮಾಡುತ್ತಿದ್ದಾರೆ. ಶಾಸಕರ ಮೇಲೆ ಒತ್ತಡ, ಬೆದರಿಕೆ ತಂತ್ರ ಸಣ್ಣ ಘಟನೆಯೇನಲ್ಲ ಎಂದು ವಿಶ್ಲೇಷಿಸಿದರು.

ಮುನಿರತ್ನ ಅವರ ವಿರುದ್ಧ ಇರುವ ಆರೋಪಗಳ ತನಿಖೆ ಆಗುತ್ತಿದೆ, ತನಿಖೆ ಆಗಲಿ. ಅದರ ಬಗ್ಗೆ ನಮ್ಮ ವಿರೋಧವಿಲ್ಲ. ಸತ್ಯ ಏನಿದೆಯೋ ಹೊರಗಡೆ ಬರುತ್ತದೆ. ಆದರೆ, ಅದನ್ನು ನೆಪವೊಡ್ಡಿ ಈ ರೀತಿ ದೌರ್ಜನ್ಯ ಮಾಡುವುದು ಖಂಡಿತವಾಗಿ ಸರಿಯಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸಕರು, ಜನಪ್ರತಿನಿಧಿಗಳನ್ನು ಬೆದರಿಸುವುದು ಅಕ್ಷಮ್ಯ ಅಪರಾಧ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X