ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಸುಲಿಗೆ, ವಂಚನೆ ಕೇಸ್ | ಪ್ರಕರಣ ರದ್ದು ಮಾಡಲು ಹೈಕೋರ್ಟ್ ನಕಾರ

ಬೆಂಗಳೂರು : ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಸುಲಿಗೆ, ವಂಚನೆ ಕೇಸ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
ತಮ್ಮ ವಿರುದ್ಧ ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಗುತ್ತಿಗೆದಾರ ಚಲುವರಾಜು ಸಲ್ಲಿಸಿದ್ದ ದೂರು ರದ್ದತಿಗೆ ಕೋರಿ ಶಾಸಕ ಮುನಿರತ್ನ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿದೆ. ಮುನಿರತ್ನ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಮೇಲಿನ ಆದೇಶ ನೀಡಿದೆ.
ಶಾಸಕ ಮುನಿರತ್ನ ನನಗೆ ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರ ಚಲುವರಾಜು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದಗೆ ದೂರು ನೀಡಿದ್ದರು. ಜೊತೆಗೆ ರಕ್ಷಣೆಗೂ ಮನವಿ ಮಾಡಿದ್ದರು. ಜೀವ ಬೆದರಿಕೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಶಾಸಕ ಮುನಿರತ್ನ ಸೇರಿ ಎ2 ಮುನಿರತ್ನರ ಆಪ್ತ ಸಹಾಯಕ ವಿಜಯ್ ಕುಮಾರ್, ಎ3 ಸೆಕ್ಯೂರಿಟಿ ಅಭಿಷೇಕ್ ಮತ್ತು ಎ4 ವಸಂತ್ ಕುಮಾರ್ ಬಂಧಿಸಲಾಗಿತ್ತು.
Next Story





