Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸ್ವಘೋಷಿತ ಗೋರಕ್ಷಕ, ಕೊಲೆ ಆರೋಪಿ ಪುನೀತ್...

ಸ್ವಘೋಷಿತ ಗೋರಕ್ಷಕ, ಕೊಲೆ ಆರೋಪಿ ಪುನೀತ್ ಕೆರೆಹಳ್ಳಿಗೆ ಮಾಧ್ಯಮ ಸಂಘದಿಂದ ಸನ್ಮಾನ!

ವಾರ್ತಾಭಾರತಿವಾರ್ತಾಭಾರತಿ28 Nov 2025 6:31 PM IST
share
ಸ್ವಘೋಷಿತ ಗೋರಕ್ಷಕ, ಕೊಲೆ ಆರೋಪಿ ಪುನೀತ್ ಕೆರೆಹಳ್ಳಿಗೆ ಮಾಧ್ಯಮ ಸಂಘದಿಂದ ಸನ್ಮಾನ!
►ಪ್ರಶಸ್ತಿ ಪ್ರದಾನ ಮಾಡಿದ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ; ವ್ಯಾಪಕ ಅಸಮಾಧಾನ ►ವಿವಾದದ ಬೆನ್ನಲ್ಲೇ ವಿಷಾದ ವ್ಯಕ್ತಪಡಿಸಿದ ಸಂತೋಷ್ ಹೆಗ್ಡೆ

ಬೆಂಗಳೂರು: ʼದಿ ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕʼ ನ. 27ರಂದು ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕೊಲೆ ಆರೋಪಿ ಹಾಗೂ ಸ್ವಘೋಷಿತ ಗೋರಕ್ಷಕ ಪುನೀತ್ ಕೆರೆಹಳ್ಳಿಗೆ ಸನ್ಮಾನ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ. ಸಂಘದ ಸಾಮಾಜಿಕ ಜಾಲತಾಣಗಳ ಪ್ರಕಾರ, ವಾರ್ಷಿಕವಾಗಿ ನಡೆಯುವ ಈ ಕಾರ್ಯಕ್ರಮದಲ್ಲಿ ರಾಜ್ಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಕೊಡುಗೆ ನೀಡಿದವರನ್ನು ಗೌರವಿಸಲಾಗುತ್ತದೆ. ಇತ್ತೀಚೆಗಷ್ಟೇ ಸಮಾಜವಿರೋಧಿ ಚಟುವಟಿಕೆಗಳಿಂದ ದೂರವಿರುವುದಾಗಿ ಮುಚ್ಚಳಿಕೆ ಬರೆದುಕೊಡಲು ನಿರಾಕರಿಸಿದ್ದ ಕಾರಣಕ್ಕೆ ಮುಂಜಾಗೃತಾ ಕ್ರಮವಾಗಿ ಬಂಧನಕ್ಕೊಳಗಾದ ಪುನೀತ್ ಕೆರೆಹಳ್ಳಿಗೆ ಈ ಸಂದರ್ಭದಲ್ಲೇ ಪ್ರಶಸ್ತಿ ನೀಡಲಾಗಿದೆ.

ಕಾರ್ಯಕ್ರಮದಲ್ಲಿ ಪುನೀತ್ ಕೆರೆಹಳ್ಳಿ ಸೇರಿದಂತೆ ಹತ್ತು ಮಂದಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿದ್ದು, ಅನೇಕ ಗಣ್ಯರು ಹಾಜರಿದ್ದರು. ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಮತ್ತು ಮಾಜಿ ಲೋಕಾಯುಕ್ತ ಎನ್. ಸಂತೋಷ್ ಹೆಗ್ಡೆ, ಕೇರಳ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಸ್.ಆರ್. ಬನ್ನೂರಮಠ್ ಹಾಗೂ ರಾಜ್ಯದ ಮಾಜಿ ಪೊಲೀಸ್ ಮಹಾನಿರ್ದೇಶಕ ಅಜಯ್ ಕುಮಾರ್ ಸಿಂಗ್ ಸೇರಿದಂತೆ ಪ್ರಮುಖರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಕೊಲೆ ಆರೋಪಿಯೊಬ್ಬನಿದ್ದ ಕಾರ್ಯಕ್ರಮದಲ್ಲಿ ವೇದಿಕೆ ಹಂಚಿಕೊಂಡಿರುವುದರ ಕುರಿತು thenewsminute.com ಸಂಪರ್ಕಿಸಿದಾಗ, ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿರುವುದನ್ನು ದೃಢಪಡಿಸಿದರು. ಆದರೆ 2023 ರಲ್ಲಿ ದನದ ವ್ಯಾಪಾರಿ ಇದ್ರೀಸ್ ಪಾಷಾ ಅವರನ್ನು ಕೊಲೆ ಮಾಡಿದ ಪ್ರಕರಣದ ಆರೋಪಿ ಪುನೀತ್ ಕೆರೆಹಳ್ಳಿ ಎಂಬುದು ತಮಗೆ ತಿಳಿದಿಲ್ಲ ಎಂದು ಹೇಳಿದರು.

“ಆತನ ಮೇಲೆ ಕೊಲೆ ಆರೋಪವಿದೆ ಎಂಬುದು ನಿಜವಾಗಿದ್ದರೆ ನನಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ತುಂಬಾ ವಿಷಾದವಿದೆ. ನಾನು ಹಾಗೆ ಮಾಡಬಾರದಿತ್ತು. ಏಕೆಂದರೆ ಅದು ಸರಿಯಾದ ಕೆಲಸವಲ್ಲ. ತನಿಖೆ ಎದುರಿಸುತ್ತಿರುವ ಯಾರನ್ನಾದರೂ ಸನ್ಮಾನಿಸುವಾಗ, ಜೈಲಿಗೆ ಹೋಗುವ ಜನರನ್ನು ಮರಳಿ ಸ್ವಾಗತಿಸಿದಂತಾಗುತ್ತದೆ. ಅದು ತಪ್ಪು ಎಂದು ನಾನು ಹೇಳಿಕೆಗಳನ್ನು ನೀಡಿದ್ದೇನೆ. ನನ್ನ ಮೇಲೂ ಅದೇ ಆರೋಪವಿದ್ದರೆ ಮತ್ತು ಅದು ನಿಜವಾಗಿದ್ದರೆ ನಾನು ಅದರ ಬಗ್ಗೆ ವಿಷಾದ ವ್ಯಕ್ತಪಡಿಸುತ್ತೇನೆ” ಎಂದು ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಹೇಳಿದ್ದಾರೆ.

ಖಾಸಗಿ ಟಿವಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ ಅವರು, "ಒಂದು ಕಾರ್ಯಕ್ರಮದಲ್ಲಿ ಭಾಗವಹಿಸುವಾಗ ಅಲ್ಲಿ ನಾವು ಯಾರನ್ನು ಸನ್ಮಾನಿಸಲಿದ್ದೇವೆ ಎಂದು ಸಂಘಟಕರು ತಿಳಿಸಿರುವುದಿಲ್ಲ. ಆದರೆ ಇವತ್ತು ಕೊಟ್ಟ ಮಾಹಿತಿ ಪ್ರಕಾರ ಅದು ನಿಜವೇ ಆಗಿದ್ದರೆ ನಾನು ಹೋದದ್ದು ತಪ್ಪು ಎಂದು ನಾನು ಭಾವಿಸಿದ್ದೇನೆ. ಅದಕ್ಕೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಇಂದು (ನ.28) ಅದೇ ಸಂಸ್ಥೆಯವರು ನನ್ನನ್ನು ಸನ್ಮಾನಿಸುವ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರು. ಆದರೆ ನಾನು ಆ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ. ಪ್ರಶಸ್ತಿ ಸ್ವೀಕರಿಸುವುದಿಲ್ಲ" ಎಂದು ಅವರು ಹೇಳಿದ್ದಾರೆ.

ಕಾರ್ಯಕ್ರಮದ ಆಯೋಜಕರನ್ನು ಪ್ರತಿಕ್ರಿಯೆಗಾಗಿ ಸಂಪರ್ಕಿಸಿದರೂ, ಅವರು ಪ್ರತಿಕ್ರಿಯೆ ಲಭ್ಯವಾಗಲಿಲ್ಲ ಎಂದು thenewsminute.com ವರದಿ ಮಾಡಿದೆ.

ಪುನೀತ್ ಕೆರೆಹಳ್ಳಿ ಹಿಂದುತ್ವ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದು, ‘ರಾಷ್ಟ್ರ ರಕ್ಷಣಾ ಪಡೆ’ ಎಂಬ ಸ್ವಘೋಷಿತ ಗೋರಕ್ಷಕ ಗುಂಪನ್ನು ನಡೆಸುತ್ತಾನೆ. ಗೋ ಸಾಗಾಟ ವಾಹನಗಳನ್ನು ಅಡ್ಡಗಟ್ಟಿ ಅವರ ಮೇಲೆ ಹಲ್ಲೆ ಮಾಡುವುದು, ಅದರ ವೀಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡುವುದು, ದೇವಾಲಯ ಪ್ರದೇಶಗಳಲ್ಲಿ ಮುಸ್ಲಿಂ ವ್ಯಾಪಾರಿಗಳನ್ನು ದೂರ ಇಡುವ ಅಭಿಯಾನ, ಹಲಾಲ್ ಮಾಂಸ ಮಾರಾಟಕ್ಕೆ ವಿರೋಧಿಸುವುದು ಈತನ ಪ್ರಮುಖ ಚಟುವಟಿಕೆಗಳು.

ಮಾರ್ಚ್‌ 2023ರಲ್ಲಿ ರಾಮನಗರದಲ್ಲಿ ದನದ ವ್ಯಾಪಾರಿ ಇದ್ರೀಸ್ ಪಾಷಾ ಹತ್ಯೆಯ ಪ್ರಕರಣದಲ್ಲಿ ಕೆರೆಹಳ್ಳಿ ಪ್ರಮುಖ ಆರೋಪಿ. ಪೊಲೀಸ್‌ ದಾಖಲೆಗಳ ಪ್ರಕಾರ, ಆತನ ವಿರುದ್ಧ ಈಗಾಗಲೇ 14 ಗಂಭೀರ ಪ್ರಕರಣಗಳು ದಾಖಲಾಗಿವೆ.

ಸೆಪ್ಟೆಂಬರ್‌ 10, 2025ರಂದು ಬಸವನಗುಡಿ ಪೊಲೀಸರು BNSS ಸೆಕ್ಷನ್‌ 127ರ ಅಡಿಯಲ್ಲಿ ಪುನೀತ್ ಕೆರೆಹಳ್ಳಿಯನ್ನು ಮುನ್ನೆಚ್ಚರಿಕಾ ಕ್ರಮವಾಗಿ ಬಂಧಿಸಿದ್ದರು. ಸಮಾಜವಿರೋಧಿ ಚಟುವಟಿಕೆಗಳಿಂದ ಹಿಂದೆ ಸರಿಯುವ ಭರವಸೆ ನೀಡಲು ಆತ ನಿರಾಕರಿಸಿದ್ದರಿಂದ ಮ್ಯಾಜಿಸ್ಟ್ರೇಟ್ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದರು.

ತಮ್ಮ ತಪ್ಪಿನ ಅರಿವಾಗಿ ಕ್ಷಮೆ ಕೇಳಿದ ಸಂತೋಷ್ ಹೆಗ್ಡೆ.

"ಆತ ಯಾರು ಅಂತ ನನಗೆ ಗೊತ್ತಿರಲಿಲ್ಲ. ಈಗ ಅವನ ಹಿನ್ನೆಲೆ ತಿಳಿದು ತಪ್ಪು ಮಾಡಿಬಿಟ್ಟೆ ಎನಿಸುತ್ತಿದೆ. ಮುಂದೆ ಯಾವತ್ತೂ ಹೀಗೆ ಮಾಡೋಲ್ಲ ಹಾಗೂ ಸಂಸ್ಥೆ ನೀಡುತ್ತಿರುವ ಗೌರವ ಕೂಡ ಸ್ವೀಕರಿಸುವುದಿಲ್ಲ" : ಸಂತೋಷ್ ಹೆಗ್ಡೆ https://t.co/ZsnDOWDgWO pic.twitter.com/OHnHXEWK7Q

— Kr!§hhh_ಚೇ 👑 (@ITSCK47) November 28, 2025

share
ವಾರ್ತಾಭಾರತಿ
ವಾರ್ತಾಭಾರತಿ
Next Story
X