Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಿಸುವುದು...

ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಿಸುವುದು ನನ್ನ ಗುರಿ: ಗೃಹ ಸಚಿವ ಡಾ. ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ2 Jan 2024 2:39 PM IST
share
ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಿಸುವುದು ನನ್ನ ಗುರಿ: ಗೃಹ ಸಚಿವ ಡಾ. ಜಿ.ಪರಮೇಶ್ವರ್

ಬೆಂಗಳೂರು: ಹೊಸ ವರ್ಷ ಆಚರಣೆ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಜನಸ್ನೇಹಿಯಾಗಿ ಕರ್ತವ್ಯನಿರ್ವಹಿಸಿರುವುದಕ್ಕೆ ಜನರಿಂದ ಅಭಿನಂದನೆ ವ್ಯಕ್ತವಾಗುತ್ತಿದ್ದು. ಇದನ್ನು ನಿರಂತರವಾಗಿ ಅಳವಡಿಸಿಕೊಳ್ಳಬೇಕು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಹೇಳಿದರು.

ಮಂಗಳವಾರ ಬೆಳಗ್ಗೆ‌ ಸದಾಶಿವನಗರದ ಗೃಹ ಕಚೇರಿಯಲ್ಲಿ ನಗರ ಪೊಲೀಸ್ ಆಯುಕ್ತ ದಯಾನಂದ್, ಹೆಚ್ಚುವರಿ ಪೊಲೀಸ್ ಆಯುಕ್ತರಾದ ರಮಣಗುಪ್ತ, ಸತೀಶ್, ಎಂ.ಎನ್.ಅನುಚೇತ್ ಸೇರಿದಂತೆ ನಗರದ ಎಲ್ಲ ವಿಭಾಗದ ಡಿಸಿಪಿಗಳ ಜತೆ ಸಭೆ ನಡೆಸಿದರು. ಈ ವೇಳೆ, ಕೆಲವು ಕಟ್ಟುನಿಟ್ಟಿನ ನಿಯಮಗಳನ್ನು ಅಚ್ಚುಕಟ್ಟಾಗಿ ಪಾಲಿಸುವುದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಾನು ಕಾಲೇಜು ದಿನಗಳಿಂದಲೂ ಹೊಸ ವರ್ಷ ಆಚರಣೆಯನ್ನು ನೋಡಿಕೊಂಡು ಬಂದಿದ್ದೇನೆ. ಈ ವರ್ಷ ವಿಶೇಷವಾಗಿ ಆಚರಣೆ ನಡೆದಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಅಚ್ಚುಕಟ್ಟಾಗಿ ನಿಭಾಯಿಸಲಾಗಿದೆ. ಇದರಲ್ಲಿ ಪೊಲೀಸರ ಶ್ರಮ ದೊಡ್ಡದು ಎಂದರು.

ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ರಕ್ತದಾನ, ನೇತ್ರದಾನಕ್ಕೆ ಸಹಿ, ಶಾಲಾ ಮಕ್ಕಳಿಗೆ ಹಾಗೂ ಅನಾಥ ಮಕ್ಕಳಿಗೆ ಸಿಹಿ ಹಂಚಿರುವುದು, ಇಲಾಖೆಯ ನಿವೃತ್ತ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಶುಭ ಕೋರುವ ಮೂಲಕ ಹೊಸ ವರ್ಷ ಆಚರಣೆ ಮಾಡಿರುವುದು ಅರ್ಥಪೂರ್ಣ ಎನಿಸಿದೆ. ಜನರು ಸಹ ಇದನ್ನೆ ಬಯಸುವುದು. ಪೊಲೀಸರು ನಮ್ಮ ಜೊತೆಗೆ ಇದ್ದಾರೆ, ರಕ್ಷಣೆ ಮಾಡುತ್ತಾರೆ ಎಂಬ ಇಲಾಖೆಯ ಮೇಲಿನ ನಂಬಿಕೆ, ಗೌರವ ಹೆಚ್ಚಾಗಬೇಕು. ಇದು ಹೀಗೆ ಮುಂದುವರಿಯಲಿ ಎಂದು ತಿಳಿಸಿದರು.

ಮಾದಕದ್ರವ್ಯ ಮುಕ್ತ‌ ರಾಜ್ಯವನ್ನಾಗಿಸಬೇಕು

ಕರ್ನಾಟಕವನ್ನು "ಮಾದಕದ್ರವ್ಯ ಮುಕ್ತ" ರಾಜ್ಯವನ್ನಾಗಿಸಬೇಕು ಎಂಬುದು ನನ್ನ ಪ್ರಮುಖ ಗುರಿ. ನಿನ್ನೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿಯವರು ಸಹ ಇದೇ ಆಶಯವನ್ನು ವ್ಯಕ್ತಪಡಿಸಿದ್ದಾರೆ. ಕೆಲ ದೇಶಗಳ ಪ್ರಜೆಗಳು ಹೆಚ್ಚಾಗಿ ಮಾದಕದ್ರವ್ಯ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ. ನಗರದಲ್ಲಿ ಹಲವು ವರ್ಷಗಳಿಂದ ವಾಸಿಸುತ್ತಿರುವ ಹಾಗೂ ನಗರಕ್ಕೆ ಬರುವ ವಿದೇಶಿ ಪ್ರಜೆಗಳ ಮೇಲೆ ಕಣ್ಣಿಡಬೇಕು. ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣಕ್ಕಾಗಿ 'ಕ್ರಿಯೆ ಯೋಜನೆ' ರೂಪಿಸಬೇಕಿದೆ. ಈ ಬಗ್ಗೆ ಸಜ್ಜಾಗುವಂತೆ ಸೂಚಿಸಿದರು.

ರಾಜ್ಯದಲ್ಲಿ ಗುಂಪು ಗಲಭೆಗಳು ಕಡಿಮೆಯಾಗಿವೆ. ಅಮಾಯಕ ಮಕ್ಕಳು ಅಪರಾಧ ಪ್ರಕರಣಗಳಲ್ಲಿ ಸಿಲುಕುತ್ತಿದ್ದು, ಈ ಬಗ್ಗೆ ನಿಗಾವಹಿಸಬೇಕು‌. ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಅರಿವು ಮೂಡಿಸಬೇಕು. ನಗರದಲ್ಲಿ ಟ್ರಾಫಿಕ್ ಸಮಸ್ಯೆ ಈ ಮೊದಲಿಗಿಂತಲೂ ಕಡಿಮೆಯಾಗಿದೆ. ಶೇ.50ರಷ್ಟು ಟ್ರಾಫಿಕ್ ಸಮಸ್ಯೆ ನಿಯಂತ್ರಣಕ್ಕೆ ಬಂದಿದೆ. ಇನ್ನೂ ಹೆಚ್ಚಿನ ಒತ್ತು ನೀಡಬೇಕು ಎಂದರು.

ಸಿಬ್ಬಂದಿಗಳು ಪೊಲೀಸ್ ಇ-ಬೀಟ್ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿಭಾಯಿಸಬೇಕು. ಆಯಾ ವಿಭಾಗದಲ್ಲಿ ನಡೆಯುವ ಘಟನೆಗಳಿಗೆ ಡಿಸಿಪಿಗಳು ಜವಾಬ್ಧಾರರು. ಹಳೇ ಪ್ರಕರಣಗಳ ಮೇಲೆ ನಿಗಾವಹಿಸಿ ಎಂದು ಸೂಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X