Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮೈಸೂರು | ರೈಲ್ವೆ ಹಳಿಗಳ ಮೇಲೆ ವಿಧ್ವಂಸ...

ಮೈಸೂರು | ರೈಲ್ವೆ ಹಳಿಗಳ ಮೇಲೆ ವಿಧ್ವಂಸ ಕೃತ್ಯಕ್ಕೆ ಯತ್ನಿಸಿದ್ದ ಆರೋಪ: ಮೂವರ ಬಂಧನ

ರೈಲು ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ವಾರ್ತಾಭಾರತಿವಾರ್ತಾಭಾರತಿ16 Nov 2023 9:23 AM IST
share
ಮೈಸೂರು | ರೈಲ್ವೆ ಹಳಿಗಳ ಮೇಲೆ ವಿಧ್ವಂಸ ಕೃತ್ಯಕ್ಕೆ ಯತ್ನಿಸಿದ್ದ ಆರೋಪ: ಮೂವರ ಬಂಧನ

ಮೈಸೂರು, ನ.16: ರೈಲ್ವೆ ಹಳಿ ಮೇಲೆ ಕಬ್ಬಿಣದ ಸ್ವೀಪರ್ ಮರದ ದಿಮ್ಮಿ ಇಟ್ಟು ವಿಧ್ವಂಸ ಕೃತ್ಯಕ್ಕೆ ಯತ್ನಿಸಿದ್ದ ಆರೋಪದಡಿ ಮೂವರನ್ನು ರೈಲ್ವೆ ಪೊಲೀಸರು ರವಿವಾರ ಬಂಧಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿರುವುದು ವರದಿಯಾಗಿದೆ.

ಚಾಮರಾಜನಗರದಿಂದ ಮೈಸೂರಿಗೆ ಬರುತ್ತಿದ್ದ ಎಕ್ಸ್‌ಪ್ರೆಸ್ ರೈಲು ಗಾಡಿ ಸಂ. 06275ರ ಲೋಕೋ ಪೈಲಟ್ (ಚಾಲಕ) ನಂಜನಗೂಡು ಮತ್ತು ಕಡಕೊಳ ರೈಲ್ವೆ ನಿಲ್ದಾಣಗಳ ನಡುವಿನ ರೈಲ್ವೆ ಹಳಿಯಲ್ಲಿ ನ.12ರಂದು ಸಂಜೆ ಸಂಭಾವ್ಯ ಅನಾಹುತವನ್ನು ತಪ್ಪಿಸಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಕಾಪಾಡಿದ್ದು, ರೈಲನ್ನು ಧ್ವಂಸಗೊಳಿಸುವ ದುರುದ್ದೇಶಪೂರಿತ ಪ್ರಯತ್ನವನ್ನು ವಿಫಲಗೊಳಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಸೋಮಯ್ ಮರಾಂಡಿ (22), ಭಜನು ಮುರ್ಮು ಮತ್ತು ದಸಮತ್ ಮರಾಂಡಿ ಎಂದು ಗುರುತಿಸಲಾದ ಮೂವರು ವ್ಯಕ್ತಿಗಳನ್ನು ರೈಲ್ವೆ ಸಂರಕ್ಷಣಾ ಪಡೆ (ಆರ್ ಪಿಎಫ್) ಮತ್ತು ಸರಕಾರಿ ಪೊಲೀಸರು (ಜಿಆರ್ ಪಿ) ಬಂಧಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಆರೋಪಿಗಳ ಉದ್ದೇಶಪೂರ್ವ ಕವಾಗಿ ಕಿಲೋ ಮೀಟರ್, ನಂ 19/200-300ರಲ್ಲಿ ಹಳಿಗಳ ಮೇಲೆ ಕಬ್ಬಿಣದ ಸೀಪ‌ ಮತ್ತು ಮರದ ದಿಮ್ಮಿಗಳನ್ನು ಇರಿಸಿದ್ದರು. ಇದರಿಂದಾಗಿ ರೈಲು ಗಾಡಿ ಸಂಖ್ಯೆ 06275ಅನ್ನು ನಿಲ್ಲಿಸಬೇಕಾಯಿತು.

ಮಾಹಿತಿ ಪಡೆದ ಮೈಸೂರಿನ ರೈಲ್ವೆ ಸಂರಕ್ಷಣಾ ದಳದ (ಆರ್ ಪಿಎಫ್) ಸಹಾಯಕ ರಕ್ಷಣಾ ಆಯುಕ್ತ ಎಂ.ಎನ್.ಎ.ಖಾನ್, ಪೋಸ್ಟ್ ಕಮಾಂಡರ್ ಕೆ.ವಿ.ವೆಂಕಟೇಶ ಮತ್ತು ಅವರ ತಂಡ, ಆರ್‌ಫಿಎಫ್‌ನ ಶ್ವಾನದಳ ಘಟನಾ ಸ್ಥಳಕ್ಕೆ ಕ್ಷಿಪ್ರವಾಗಿ ತೆರಳಿ ಅವಘಡವನ್ನು ತಪ್ಪಿಸಿದ್ದಾರೆ. ಓಡಿಶಾ ರಾಜ್ಯದ ಮಯೂರ್‌ಬಂಜ್‌ ಮೂಲದ ಸೋಮಯ್ ಮರಾಂಡಿ ಎಂಬಾತ ಸ್ಥಳದಲ್ಲಿ ಪತ್ತೆಯಾಗಿದ್ದು, ವಿಚಾರಣೆ ನಡೆಸಿದಾಗ, ತನ್ನ ಸಹಚರರೊಂದಿಗೆ ವಿಧ್ವಂಸಕ ಕೃತ್ಯದ ಯತ್ನವನ್ನು ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಆರೋಪಿಗಳನ್ನು ಹೆಚ್ಚಿನ ತನಿಖೆಗಾಗಿ ಮೈಸೂರಿನ ಸರಕಾರಿ ರೈಲ್ವೆ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ನ.13, 2023ರಂದು ರೈಲ್ವೆ ಕಾಯ್ದೆ-1989ರ ಅನ್ವಯ ಪ್ರಕರಣವನ್ನು ದಾಖಲಿಸಲಾಗಿದೆ. ತನಿಖೆಯು ನಡೆಯುತ್ತಿದ್ದು ಆರೋಪಿಗಳಿಗೆ ಜೀವಾವಧಿವರೆಗಿನ ಶಿಕ್ಷೆಗೆ ಗುರಿಯಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯ ಕಾರಣಕ್ಕಾಗಿ ರೈಲು ಸಂಖ್ಯೆ 06275 ಅನ್ನು ಸ್ವಲ್ಪ ಸಮಯದವರೆಗೆ - 18:30 ರಿಂದ 18:45 ಗಂಟೆಗಳವರೆಗೆ - ತಡೆಹಿಡಿಯಲಾಯಿತು. ಮೈಸೂರಿನ ವಿಭಾಗಿ ಯ ರೈಲ್ವೆ ವ್ಯವಸ್ಥಾಪಕ ಶಿಲ್ಪಿ ಅಗರ್ವಾಲ್‌ ರವರು ರೈಲಿನ ಚಾಲಕನ ಸಮಯೋಚಿತ ಕ್ರಮ ಮತ್ತು ಭದ್ರತಾ ಪಡೆಗಳ ತ್ವರಿತ ಪ್ರತಿಕ್ರಿಯೆ ಶ್ಲಾಘಿಸಿ, ಪ್ರಯಾಣಿಕರ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ವಿಚಾರಿಸಿಕೊಂಡು ಕೃತಜ್ಞತೆ ಸಲ್ಲಿಸಿದರು.

ಹಳಿಗಳ ಮೇಲೆ ಇಂತಹ ಕೃತ್ಯದಲ್ಲಿ ತೊಡಗಿ ಪ್ರಯಾಣಿಕರಿಗೆ ದೊಡ್ಡ ಆಪತ್ತು ತರುವ ಮತ್ತು ಜೀವಹಾನಿ ಉಂಟುಮಾಡುವ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಅಂತಹ ಚಟುವಟಿಕೆಗಳಲ್ಲಿ ಯಾರಾದರೂ ತಪ್ಪಿತಸ್ಥರೆಂದು ಕಂಡುಬಂದರೆ ಅವರ ವಿರುದ್ಧ ರೈಲ್ವೆ ಆಡಳಿತವು ಅತ್ಯಂತ ಕಠಿಣ ಕ್ರಮ ತೆಗೆದುಕೊಳುತ್ತದೆ ಎಂದು ಹಿರಿಯ ವಿಭಾಗಿ ಯ ವಾಣಿಜ್ಯ ವ್ಯವಸ್ಥಾಪಕ ಲೋಹಿತೇಶ್ವ‌ ಜಿ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X