Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮುಡಾ ಪ್ರಕರಣ | ಆ.3ರಿಂದ ಬಿಜೆಪಿ-...

ಮುಡಾ ಪ್ರಕರಣ | ಆ.3ರಿಂದ ಬಿಜೆಪಿ- ಜೆಡಿಎಸ್ ಜಂಟಿಯಾಗಿ ಮೈಸೂರು ಪಾದಯಾತ್ರೆ : ಬಿ.ವೈ.ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ1 Aug 2024 6:27 PM IST
share
ಮುಡಾ ಪ್ರಕರಣ | ಆ.3ರಿಂದ ಬಿಜೆಪಿ- ಜೆಡಿಎಸ್ ಜಂಟಿಯಾಗಿ ಮೈಸೂರು ಪಾದಯಾತ್ರೆ :  ಬಿ.ವೈ.ವಿಜಯೇಂದ್ರ

ಬೆಂಗಳೂರು : ಮುಡಾ ನಿವೇಶನ ಹಂಚಿಕೆ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಖಂಡಿಸಿ ಬಿಜೆಪಿ-ಜೆಡಿಎಸ್ ಜಂಟಿಯಾಗಿ ಇದೇ ಆ.3ರಿಂದ ಮೈಸೂರು ಚಲೋ ಪಾದಯಾತ್ರೆ ನಡೆಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಗುರುವಾರ ದಿಲ್ಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ‘ಎರಡೂ ಪಕ್ಷಗಳ ಸಂಸದರು, ಶಾಸಕರು ಭಾಗವಹಿಸುತ್ತಾರೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿಯ ಹಿರಿಯರಾದ ಬಿ.ಎಸ್.ಯಡಿಯೂರಪ್ಪ ಪಾದಯಾತ್ರೆಗೆ ಚಾಲನೆ ಕೊಡಲಿದ್ದಾರೆ. ಭ್ರಷ್ಟ, ಹಗರಣಗಳ ಕಾಂಗ್ರೆಸ್ ಸರಕಾರದ ವಿರುದ್ಧ ಜನಾಂದೋಲನ ಇದಾಗಿದೆ ಎಂದರು.

ವಾಲ್ಮೀಕಿ ನಿಗಮದ ಹಗರಣ ಮತ್ತು ಮುಡಾ ಹಗರಣವನ್ನು ಮುಂದಿಟ್ಟು ಬಿಜೆಪಿ-ಜೆಡಿಎಸ್ ಸದನದಲ್ಲಿ ಒಟ್ಟಾಗಿ ಹೋರಾಟ ಮಾಡಿದ್ದೆವು. ಸದನ ಮುಗಿದ ಬಳಿಕ ಈ ಹೋರಾಟ ಮುಂದುವರೆಸಲು ನಿರ್ಧರಿಸಲಾಗಿತ್ತು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್‍ದಾಸ್ ಅಗರ್‍ವಾಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ನಾವೆಲ್ಲರೂ ಕುಳಿತು ಚರ್ಚಿಸಿದ್ದೇವೆ. ಎಲ್ಲವೂ ಇತ್ಯರ್ಥ ಆಗಿದೆ. ಆ.3ರ ಶನಿವಾರ ಬೆಳಗ್ಗೆ 8.30ಕ್ಕೆ ನೈಸ್ ರಸ್ತೆ ಜಂಕ್ಷನ್‍ನಿಂದ ಪಾದಯಾತ್ರೆ ಹೊರಡಲಿದೆ ಎಂದು ಪ್ರಕಟಿಸಿದರು.

ಅಹಿಂದ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ಭ್ರಷ್ಟಾಚಾರದಲ್ಲಿ ಮುಳುಗಿದ ಬಗ್ಗೆ ಕರ್ನಾಟಕ ಮಾತ್ರವಲ್ಲದೆ, ದೇಶಾದ್ಯಂತ ಚರ್ಚೆ ಆಗುತ್ತಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ.ಹಗರಣದಡಿ ಪರಿಶಿಷ್ಟ ಪಂಗಡಗಳ ಹಣವನ್ನು ಕಾಂಗ್ರೆಸ್ ಸರಕಾರ ದೋಚಿತ್ತು ಎಂದು ಅವರು ಟೀಕಿಸಿದರು.

ಸ್ವತಃ ಸಿಎಂ ಸದನದಲ್ಲಿ ಇದನ್ನು ಒಪ್ಪಿಕೊಂಡಿದ್ದಾರೆ. ಮತ್ತೊಂದೆಡೆ ಮುಡಾದಲ್ಲಿ ಮುಖ್ಯಮಂತ್ರಿ ಕುಟುಂಬಕ್ಕೆ ಅಕ್ರಮವಾಗಿ ಬಂದ 14 ನಿವೇಶನಗಳ ಜೊತೆಗೆ 4 ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಸಾವಿರಾರು ನಿವೇಶನಗಳನ್ನು ಕಾಂಗ್ರೆಸ್ ಸರಕಾರ ಬಂದ ಬಳಿಕ ಬೇಕಾದವರಿಗೆ ಕೊಟ್ಟದ್ದು ಪ್ರಮುಖ ಅಂಶ ಎಂದು ವಿವರಿಸಿದರು.

ಜನರೂ ಪಾಲ್ಗೊಳ್ಳಬೇಕು: ಬಿಜೆಪಿ ಉಸ್ತುವಾರಿ ರಾಧಾಮೋಹನ್‍ದಾಸ್ ಅಗರ್ವಾಲ್ ಮಾತನಾಡಿ, ಬಿಜೆಪಿ-ಜೆಡಿಎಸ್ ಜಂಟಿಯಾಗಿ ಈ ಪಾದಯಾತ್ರೆ ನಡೆಸಲಿವೆ. ಎರಡೂ ಪಕ್ಷಗಳ ಜನಪ್ರತಿನಿಧಿಗಳು, ಕಾರ್ಯಕರ್ತರು ಅತ್ಯಂತ ಉತ್ಸಾಹದಿಂದ ಭಾಗವಹಿಸುತ್ತಾರೆ. ಬಿಜೆಪಿ-ಜೆಡಿಎಸ್ ನಡುವೆ ಯಾವುದೇ ಗೊಂದಲಗಳಿಲ್ಲ. ಎಚ್.ಡಿ.ಕುಮಾರಸ್ವಾಮಿ ನೇತೃತ್ವ, ಮುಖಂಡರ ಭಾಗವಹಿಸುವಿಕೆಯೊಂದಿಗೆ ಯಾತ್ರೆ ನಡೆಯಲಿದೆ. ಯಾವುದೇ ವ್ಯಕ್ತಿಗೆ ಇಲ್ಲಿ ಮಹತ್ವ ಇಲ್ಲ. ಜನರೂ ಈ ಯಾತ್ರೆಯಲ್ಲಿ ಪಾಲ್ಗೊಳ್ಳಬೇಕು ಎಂದರು.

Tags

VijayendraBJP-JDSMysore Chalo padayatra
share
ವಾರ್ತಾಭಾರತಿ
ವಾರ್ತಾಭಾರತಿ
Next Story
X