Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ʼದಸರಾʼ ಆನೆಗಳ ಪಟ್ಟಿ ಬಿಡುಗಡೆ : 12...

ʼದಸರಾʼ ಆನೆಗಳ ಪಟ್ಟಿ ಬಿಡುಗಡೆ : 12 ಆನೆಗಳಿಗಷ್ಟೇ ಅವಕಾಶ

ವಾರ್ತಾಭಾರತಿವಾರ್ತಾಭಾರತಿ18 Aug 2026 7:37 PM IST
share
ʼದಸರಾʼ ಆನೆಗಳ ಪಟ್ಟಿ ಬಿಡುಗಡೆ : 12 ಆನೆಗಳಿಗಷ್ಟೇ ಅವಕಾಶ
6 ಬಾರಿ ಅಂಬಾರಿ ಹೊತ್ತಿದ್ದ ಅಭಿಮನ್ಯುಗೆ ವಯಸ್ಸಿನ ಕಾರಣಕ್ಕೆ ವಿಶ್ರಾಂತಿ

ಮೈಸೂರು : ನಾಡಹಬ್ಬ ಮೈಸೂರು ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಗಜಪಡೆಯ ಪಟ್ಟಿ ಬಿಡುಗಡೆಯಾಗಿದೆ. ಆರು ಬಾರಿ ಅಂಬಾರಿ ಹೊತ್ತಿದ್ದ ಅಭಿಮನ್ಯು ಆನೆಯನ್ನು ವಯಸ್ಸಿನ ಕಾರಣಕ್ಕೆ ದಸರಾದಿಂದ ಕೈಬಿಡಲಾಗಿದೆ.

ಮೈಸೂರು, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಯಲ್ಲಿನ ಸಾಕಾನೆ ಶಿಬಿರಗಳಿಗೆ ಭೇಟಿ ನೀಡಿ, ಎಲ್ಲಾ ಆನೆಗಳ ಸ್ವಭಾವ ಮತ್ತು ಸಾಮರ್ಥ್ಯ ಪರೀಕ್ಷಿಸಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅಂತಿಮವಾಗಿ 12 ಆನೆಗಳ ಪಟ್ಟಿ ಸಿದ್ಧಪಡಿಸಿದ್ದು, ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಪಟ್ಟಿಯನ್ನು ಮಂಗಳವಾರ ಬೆಂಗಳೂರಲ್ಲಿ ಬಿಡುಗಡೆ ಮಾಡಿದರು.

ಪಟ್ಟಿಯಲ್ಲಿರುವ ಆನೆಗಳು: ದುಬಾರೆಯ ಧನಂಜಯ, ಪ್ರಶಾಂತ, ಗೋಪಿ, ಶ್ರೀರಾಮ, ಸುಗ್ರೀವ, ಕಾವೇರಿ ಹಾಗೂ ಬಳ್ಳೆ ಶಿಬಿರದ ಮಹೇಂದ್ರ, ಲಕ್ಷ್ಮೀ, ಮತ್ತಿಗೋಡಿನ ಏಕಲವ್ಯ, ಶ್ರೀಕಂಠ ಮತ್ತು ದೊಡ್ಡಹರವೆ ರೂಪಾ, ರಾಮಾಪುರದ ಚೈತ್ರ ಆನೆಗಳನ್ನು ದಸರಾಗೆ ಕರೆತರಲು ನಿರ್ಧರಿಸಲಾಗಿದೆ.

12 ಆನೆಗಳಿಗಷ್ಟೇ ಅವಕಾಶ: ಕಳೆದ ಆರೇಳು ವರ್ಷಗಳಿಂದ ದಸರಾ ಉತ್ಸವಗಳಲ್ಲಿ 14 ಆನೆಗಳನ್ನು ಕರೆತರಲಾಗಿತ್ತು. ಆದರೆ, ಈ ಬಾರಿಯ ದಸರಾಗೆ 12 ಆನೆಗಳನ್ನು ಕರೆತರಲಾಗುತ್ತಿದ್ದು, ಮೊದಲ ತಂಡದಲ್ಲಿ ಧನಂಜಯ, ಮಹೇಂದ್ರ, ಏಕಲವ್ಯ, ಪ್ರಸಾಂತ, ಗೋಪಿ, ಶ್ರೀರಾಮ, ಸುಗ್ರೀವ ಹಾಗೂ ಲಕ್ಷ್ಮೀ, ಕಾವೇರಿ ಆನೆಯನ್ನು ಗಜಪಯಣ ಮೂಲಕ ಕರೆತರಲಾಗುತ್ತದೆ. ನಂತರ ಎರಡನೇ ತಂಡದಲ್ಲಿ ಶ್ರೀಕಂಠ, ರೂಪಾ, ಚೈತ್ರಾ ಆನೆಯನ್ನು ತರಲು ನಿರ್ಧರಿಸಲಾಗಿದೆ. ಮತ್ತಿಗೋಡಿನ ಭೀಮ ಮತ್ತು ದುಬಾರೆಯ ಹರ್ಷನನ್ನು ಮೀಸಲು ಆನೆಗಳಗಿ ಇರಿಸಿಕೊಳ್ಳಲಾಗಿದೆ.

ಮದದಲ್ಲಿರುವ ಭೀಮ: ಜನ ಮೆಚ್ಚಿದ ಆನೆ ಭೀಮನಿಗೆ ಮದ ಇರುವುದರಿಂದ ಈ ಬಾರಿಯ ದಸರಾಗೆ ಕರೆತರಲು ಅಧಿಕಾರಿಗಳು ಹಿಂದೇಟು ಹಾಕಿದ್ದಾರೆ. ಆದರೂ ಮೀಸಲು ಆನೆಯಾಗಿ ಇರಿಸಿಕೊಂಡಿದ್ದಾರೆ.

ಆನೆ - ವಯಸ್ಸು - ಸಾಕಾನೆ ಶಿಬಿರ

ಧನಂಜಯ -45- ದುಬಾರೆ (ಮಡಿಕೇರಿ)

ಮಹೇಂದ್ರ - 42 - ಬಳ್ಳೇ (ನಾಗರಹೊಳೆ)

ಏಕಲವ್ಯ - 41 - ಮತ್ತಿಗೋಡು (ನಾಗರಹೊಳೆ)

ಪ್ರಶಾಂತ - 54 - ದುಬಾರೆ (ಮಡಿಕೇರಿ)

ಗೋಪಿ - 43 - ದುಬಾರೆ (ಮಡಿಕೇರಿ)

ಶ್ರೀರಾಮ - 41 - ದುಬಾರೆ (ಮಡಿಕೇರಿ)

ಸುಗ್ರೀವ - 44 - ದುಬಾರೆ (ಮಡಿಕೇರಿ)

ಲಕ್ಷ್ಮೀ - 54- ಬಳ್ಳೆ (ನಾಗರಹೊಳೆ)

ಕಾವೇರಿ -46 - ದುಬಾರೆ

ಎರಡನೇ ತಂಡದಲ್ಲಿ ಬರುವ ಆನೆಗಳು

ರೂಪಾ - 50- (ದೊಡ್ಡಹರವೆ)

ಚೈತ್ರಾ - 55- ರಾಮಪುರ (ಬಂಡೀಪುರ)

ಶ್ರೀಕಂಠ -57- ಮತ್ತಿಗೋಡು(ನಾಗರಹೊಳೆ)

ಮೀಸಲು ಆನೆಗಳು:

ಭೀಮ -26-ಮತ್ತಿಗೋಡು

ಹರ್ಷ-51-ದುಬಾರೆ

26ರಂದು ಗಜಪಯಣಕ್ಕೆ ಚಾಲನೆ

ಕಳೆದ ವಷದಂತೆ ಈ ವರ್ಷವೂ 11 ದಿನಗಳ ಕಾಲ ದಸರಾ ಉತ್ಸವ ನಡೆಯಲಿದ್ದು, ಇದಕ್ಕೆ ಎರಡು ತಿಂಗಳ ಮುಂಚಿತವಾಗಿಯೇ ಕಾಡಿನಿಂದ ಗಜಪಡೆಯನ್ನು ಮೈಸೂರಿಗೆ ಕರೆತರಲಾಗುತ್ತದೆ. ಅದರಂತೆ ಆ.26ರಂದು ಗಜಪಯಣಕ್ಕೆ ಚಾಲನೆ ಸಿಗಲಿದೆ. ಅಂದು ಮೊದಲ ಹಂತದ ಆನೆಗಳು ಮೈಸೂರಿನತ್ತ ಪ್ರಯಾಣ ಬೆಳೆಸಲಿವೆ.

Tags

Mysore Dasara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X