Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮೈಸೂರು: ಮಹಿಷ ದಸರಾ ಉತ್ಸವಕ್ಕೆ...

ಮೈಸೂರು: ಮಹಿಷ ದಸರಾ ಉತ್ಸವಕ್ಕೆ ವಿಜೃಂಭಣೆಯ ಚಾಲನೆ

ವಾರ್ತಾಭಾರತಿವಾರ್ತಾಭಾರತಿ13 Oct 2023 12:04 PM IST
share
ಮೈಸೂರು: ಮಹಿಷ ದಸರಾ ಉತ್ಸವಕ್ಕೆ ವಿಜೃಂಭಣೆಯ ಚಾಲನೆ

ಮೈಸೂರು, ಅ.13: ಮೈಸೂರು ನಗರದ ಪುರಭವನದ ಆವರಣದಲ್ಲಿ ಶುಕ್ರವಾರ ಆಯೋಜಿಸಿರುವ 'ಮಹಿಷ ದಸರಾ ಉತ್ಸವ'ಕ್ಕೆ ವಿಜೃಂಭಣೆಯ ಚಾಲನೆ ದೊರೆಯಿತು.

ವಿವಾವದ ನಡುವೆಯೂ ಪಟ್ಟು ಬಿಡದ ಮೂಲನಿವಾಸಿಗಳು ಮಹಿಷ ದಸರಾ ಉತ್ಸವವನ್ನು ಸಡಗರ ಸಂಭ್ರಮಗಳ ನಡುವೆ ಅಚರಿಸಿ ಮಹಿಷ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ನಮಿಸಿದರು.

ವೇದಿಕೆ ಮುಂಭಾಗ ಮಹಿಷನ ದೊಡ್ಡ ಭಾವಚಿತ್ರ ಇರಿಸಿ ಅದರ ಮುಂದುಗಡೆ ಅಂಬೇಡ್ಕರ್, ಬುದ್ಧ ಮತ್ತು ಮಹಿಷನ ಕಂಚಿನ ಮೂರ್ತಿಗಳಿಗೆ ಗಣ್ಯರು ಪುಷ್ಪಾರ್ಚನೆ ನೆರವೇರಿಸಿದರು. ಇದೇ ವೇಳೆ ಮಹಿಷನ ರೂಪ ಧರಿಸಿದ ವ್ಯಕ್ತಿ ವೇದಿಕೆ ಮೇಲೆ ಆಗಮಿಸಿದ್ದು ವಿಶೇಷ ಎನಿಸಿತು.

ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಮತ್ತು ಬೆಂಗಳೂರು ಜಿಲ್ಲೆಗಳಿಂದ ಬೈಕ್, ಕಾರು ಸೇರಿದಂತೆ ವಿವಿಧ ವಾಹನಗಳಲ್ಲಿ ತಂಡೋಪ ತಂಡವಾಗಿ ಮೈಸೂರು ನಗರಕ್ಕೆ ಆಗಮಿಸಿದರು. ಮೈಸೂರಿನ ಅಶೋಕಪುರಂನಿಂದ ನೂರಾರು ಯುವಕರು ನೀಲಿ ಬಾವುಟ ಹಿಡಿದು ಬೈಕ್ ಗಳ ಮೂಲಕ ಪುರಭವನಕ್ಕೆ ಆಗಮಿಸಿದರು.

ಮಹಿಷ ದಸರಾ ಆಚರಣೆ, ಚಾಮುಂಡಿ ಚಲೋ ವಿವಾದದ ಹಿನ್ನೆಲೆಯಲ್ಲಿ ಪೊಲೀಸರು ಪುರಭವನದ ಒಳಗೆ ಮಾತ್ರ ಮಹಿಷ ದಸರಾ ಉತ್ಸವಕ್ಕೆ ಅನುಮತಿ ನೀಡಲಾಗಿದೆ. ಮಹಿಷ ಆಯೋಜಕರ ಬಯಕೆಯಂತೆ ಚಾಮುಂಡಿ ಬೆಟ್ಟದಲ್ಲಿರುವ ಮಹಿಷ ಮೂರ್ತಿಗೆ ಪುಷ್ಪಾರ್ಜನೆ ಮಾಡಲು ಅವಕಾಶ ನಿರಾಕರಿಸಲಾಗಿತ್ತು. ಚಾಮುಂಡಿ ಬೆಟ್ಟ ಸೇರಿದಂತೆ ಮೈಸೂರು ನಗರದಾದ್ಯಂತ 144ನೇ ಸೆಕ್ಷನ್ ಜಾರಿ ಮಾಡಿ ನಿಷೇಧ ಹೇರಲಾಗಿದೆ.

ಪುರಭವನದ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ. ನಂತರ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸಿದರು. ಕಾರ್ಯಕ್ರಮಕ್ಕೆ ಆಗಮಿಸಿದ ಪ್ರತಿಯೊಬ್ಬರು ನೀಲಿ ಬಾವುಟ, ಮಹಿಷನ ಭಾವಚಿತ್ರ ಹಿಡಿದು ಪ್ರದರ್ಶನ ಮಾಡಿ ಜಯಘೋಷಗಳನ್ನು ಕೂಗಿದರು.

ಕಾರ್ಯಕ್ರಮ ಆರಂಭಕ್ಕೂ ಮುನ್ನ ಖ್ಯಾತ ಗಾಯಕ ಅಮ್ಮಾ ರಾಮಚಂದ್ರ ಮತ್ತು ತಂಡದವರು ನಾಡ ನಡುವಿನಿಂದ ಬಂದ ನೋವಿನ ಕೂಗೆ, ಮಹಿಷನಿಗೆ ಕೋಟಿ ನಮನ, ಕರುಳಿನ ಕಥನ ಕೇಳುವ ನಾಯಕ ಎಲ್ಲಿಗೆ ಹೋದೆ, ಓ ಭೀಮರಾಯ ಇದೊ ನಿನಗೆ ವಂದನೆ ಎಂಬ ಭೀಮ ಮತ್ತು ಕ್ರಾಂತಿ ಗೀತೆಗಳನ್ನು ಹಾಡಿದರು.

ವಾರ್ತಾಭಾರತಿ ಓದುಗರಿಗೆ ಶುಭಸುದ್ದಿ:

ನಿಮ್ಮ ನೆಚ್ಚಿನ VB ಈಗ ವಾಟ್ಸ್ ಆ್ಯಪ್ ಚಾನೆಲ್ ನಲ್ಲೂ ಲಭ್ಯ

https://whatsapp.com/channel/0029VaA8ju86LwHn9OQpEq28 ಈ ಲಿಂಕ್ ಕ್ಲಿಕ್ ಮಾಡಿ, Follow ಮಾಡುವ ಮೂಲಕ ಕ್ಷಣಕ್ಷಣದ ಅಪ್ಡೇಟ್ ಪಡೆಯಿರಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X