ಸ್ವಯಂ ನಿವೃತ್ತಿಗೆ ಮುಂದಾಗಿದ್ದ ಧಾರವಾಡ ಎಎಸ್ಪಿ ನಾರಾಯಣ ಭರಮನಿಗೆ ಮುಂಬಡ್ತಿ
ಬೆಳಗಾವಿ ಡಿಸಿಪಿಯಾಗಿ ವರ್ಗಾವಣೆ ಮಾಡಿ ಸರ್ಕಾರ ಆದೇಶ

ನಾರಾಯಣ ಭರಮನಿ (Photo credit: Deccan Herald)
ಬೆಂಗಳೂರು: ಬೆಳಗಾವಿಯಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ತನೆಯಿಂದ ಬೇಸರಗೊಂಡು ಸ್ವಯಂ ನಿವೃತ್ತಿಗೆ ಮುಂದಾಗಿದ್ದ ಧಾರವಾಡ ಎಎಸ್ಪಿ ನಾರಾಯಣ ಭರಮನಿ ಅವರನ್ನು ಬೆಳಗಾವಿ ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಆಗಿ ವರ್ಗಾವಣೆ ಮಾಡಿ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.
ಸಾರ್ವಜನಿಕ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಂದ ಅವಮಾನಕ್ಕೀಡಾದ ಕಾರಣಕ್ಕೆ ಬೇಸರಗೊಂಡಿದ್ದ ಭರಮನಿ ರಾಜೀನಾಮೆಗೆ ಮುಂದಾಗಿದ್ದರು. ಬಳಿಕ ಸಿಎಂ ಸಿದ್ದರಾಮಯ್ಯ, ಗೃಹಸಚಿವ ಡಾ.ಜಿ.ಪರಮೇಶ್ವರ್ ಭರಮನಿ ಅವರನ್ನು ಸಮಾಧಾನ ಮಾಡಲು ಯತ್ನಿಸಿದ್ದರು. ನಂತರ ಅವರು ನಿವೃತ್ತಿ ನಿರ್ಧಾರದಿಂದ ಹಿಂದೆ ಸರಿದಿದ್ದರು.
Next Story





