Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕಾವೇರಿ ನೀರಿನ ಕುರಿತ CWRC ಆದೇಶ...

ಕಾವೇರಿ ನೀರಿನ ಕುರಿತ CWRC ಆದೇಶ ಅವೈಜ್ಞಾನಿಕ; ಯಾವುದೇ ಕಾರಣಕ್ಕೂ ಒಂದು ಹನಿ ನೀರೂ ಬಿಡಬಾರದು : ನಾರಾಯಣಗೌಡ

ವಾರ್ತಾಭಾರತಿವಾರ್ತಾಭಾರತಿ28 July 2026 8:55 PM IST
share
ಕಾವೇರಿ ನೀರಿನ ಕುರಿತ CWRC ಆದೇಶ ಅವೈಜ್ಞಾನಿಕ; ಯಾವುದೇ ಕಾರಣಕ್ಕೂ ಒಂದು ಹನಿ ನೀರೂ ಬಿಡಬಾರದು : ನಾರಾಯಣಗೌಡ

ಬೆಂಗಳೂರು : ಕಾವೇರಿ ನೀರು ನಿಯಂತ್ರಣ ಸಮಿತಿ ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕೆಂದು ನೀಡಿರುವ ನಿರ್ದೇಶನವು ಸಂಪೂರ್ಣ ಅವೈಜ್ಞಾನಿಕ, ವಾಸ್ತವ ಸ್ಥಿತಿಯನ್ನು ನಿರ್ಲಕ್ಷಿಸಿದ್ದು, ಕರ್ನಾಟಕದ ಹಿತಾಸಕ್ತಿಗೆ ವಿರುದ್ಧವಾದ ಆದೇಶವಾಗಿದೆ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ಕಾವೇರಿ ಜಲಾನಯನ ಪ್ರದೇಶದಲ್ಲಿ ತೀವ್ರ ಮಳೆ ಕೊರತೆ ಉಂಟಾಗಿದೆ. ಕೆಆರ್‍ಎಸ್, ಕಬಿನಿ ಸೇರಿ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಳವಳಕಾರಿ ಮಟ್ಟದಲ್ಲಿದೆ. ಈಗಿರುವ ನೀರು ಜನರ ಕುಡಿಯುವ ನೀರಿನ ಅಗತ್ಯವನ್ನೇ ಪೂರೈಸಲು ಸಾಕಾಗದ ಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ 4.5 ಟಿಎಂಸಿಗೂ ಹೆಚ್ಚು ನೀರನ್ನು ತಮಿಳುನಾಡಿಗೆ ಹರಿಸುವಂತೆ ಆದೇಶಿಸುವುದು ವಾಸ್ತವ ಸ್ಥಿತಿಗೆ ಕಣ್ಣು ಮುಚ್ಚಿಕೊಂಡು ತೆಗೆದುಕೊಂಡ ನಿರ್ಧಾರವಾಗಿದೆ ಎಂದು ಟೀಕಿಸಿದ್ದಾರೆ.

ಕುಡಿಯುವ ನೀರು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕು. ಅದರ ಜೊತೆಗೆ ರಾಜ್ಯದ ರೈತರ ಬೆಳೆ ಹಾಗೂ ಜೀವನೋಪಾಯವನ್ನು ರಕ್ಷಿಸುವುದು ರಾಜ್ಯ ಸರಕಾರದ ಮೊದಲ ಜವಾಬ್ದಾರಿ. ರಾಜ್ಯದ ಜನರ ಅಗತ್ಯಗಳನ್ನು ಕಡೆಗಣಿಸಿ ನೀರು ಹರಿಸುವುದು ನ್ಯಾಯಸಮ್ಮತವಲ್ಲ. ಆದುದರಿಂದ ರಾಜ್ಯ ಸರಕಾರ ಯಾವುದೇ ಕಾರಣಕ್ಕೂ ಈ ಆದೇಶವನ್ನು ಪಾಲಿಸಬಾರದು. ಒಂದು ಹನಿ ನೀರನ್ನೂ ತಮಿಳುನಾಡಿಗೆ ಬಿಡುಗಡೆ ಮಾಡಬಾರದು ಎಂದು ಅವರು ಆಗ್ರಹಿಸಿದ್ದಾರೆ.

ಸರಕಾರ ತಕ್ಷಣವೇ ಈ ಆದೇಶವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮುಂದೆ ಪ್ರಶ್ನಿಸಿ, ಕರ್ನಾಟಕದ ವಾಸ್ತವ ಜಲಸ್ಥಿತಿಯನ್ನು ಸಮಗ್ರವಾಗಿ ಮಂಡಿಸಬೇಕು. ಅಗತ್ಯವಿದ್ದರೆ ಮುಂದಿನ ಕಾನೂನುಬದ್ಧ ಕ್ರಮಗಳನ್ನು ಕೈಗೊಂಡು ರಾಜ್ಯದ ಹಕ್ಕು ಮತ್ತು ಜನರ ಹಿತಾಸಕ್ತಿಯನ್ನು ರಕ್ಷಿಸಬೇಕು.

ಒಂದು ವೇಳೆ ಈ ಅವೈಜ್ಞಾನಿಕ ಆದೇಶವನ್ನು ಅನುಸರಿಸಿ ಸರಕಾರ ನೀರು ಬಿಡುಗಡೆ ಮಾಡಿದರೆ, ಅದರ ವಿರುದ್ಧ ರಾಜ್ಯಾದ್ಯಂತ, ವಿಶೇಷವಾಗಿ ಕಾವೇರಿ ಕೊಳ್ಳದ ಪ್ರದೇಶಗಳಲ್ಲಿ ತೀವ್ರ ಜನಾಕ್ರೋಶ ವ್ಯಕ್ತವಾಗುವ ಸಾಧ್ಯತೆಯಿದೆ. ಇಂತಹ ಪರಿಸ್ಥಿತಿಗೆ ಸರಕಾರ ಹೊಣೆಯಾಗಲಿದೆ ಎಂದು ಅವರು ಎಚ್ಚರಿಸಿದ್ದಾರೆ.

ಕರವೇ ಈ ಆದೇಶವನ್ನು ಒಪ್ಪುವುದಿಲ್ಲ. ರಾಜ್ಯದ ಹಿತಾಸಕ್ತಿ, ರೈತರ ಬದುಕು ಹಾಗೂ ಕುಡಿಯುವ ನೀರಿನ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಈ ಆದೇಶದ ವಿರುದ್ಧ ರಾಜ್ಯಾದ್ಯಂತ ಪ್ರಜಾಸತ್ತಾತ್ಮಕ ಹೋರಾಟವನ್ನು ಸಂಘಟಿಸಲಿದೆ. ಸರಕಾರ ಜನರ ಭಾವನೆಗಳಿಗೆ ಗೌರವ ನೀಡಿ, ಕರ್ನಾಟಕದ ಹಿತಾಸಕ್ತಿಯನ್ನು ಅಗ್ರಸ್ಥಾನದಲ್ಲಿರಿಸಿ ನಿರ್ಧಾರ ಕೈಗೊಳ್ಳಬೇಕು ಎಂದು ನಾರಾಯಣಗೌಡ ಒತ್ತಾಯಿಸಿದ್ದಾರೆ.

Tags

Narayana Gowda
share
ವಾರ್ತಾಭಾರತಿ
ವಾರ್ತಾಭಾರತಿ
Next Story
X