Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಂಗಳೂರಿನಲ್ಲಿ ‘ರಾಷ್ಟ್ರೀಯ ಎಐ ಮತ್ತು...

ಬೆಂಗಳೂರಿನಲ್ಲಿ ‘ರಾಷ್ಟ್ರೀಯ ಎಐ ಮತ್ತು ಡಿಜಿಟಲ್ ವಾಟರ್ ಶೃಂಗಸಭೆ 2026'

ವಾರ್ತಾಭಾರತಿವಾರ್ತಾಭಾರತಿ27 May 2026 6:19 PM IST
share
ಬೆಂಗಳೂರಿನಲ್ಲಿ ‘ರಾಷ್ಟ್ರೀಯ ಎಐ ಮತ್ತು ಡಿಜಿಟಲ್ ವಾಟರ್ ಶೃಂಗಸಭೆ 2026
ಎಐ ಆಧಾರಿತ ಜಲ ಆಡಳಿತಕ್ಕೆ ಕರ್ನಾಟಕದ ಒತ್ತು : ಡಾ.ಶಾಲಿನಿ ರಜನೀಶ್

ಬೆಂಗಳೂರು : ಹವಾಮಾನ ಬದಲಾವಣೆ, ನಗರೀಕರಣ, ಅಂತರ್ಜಲ ಕುಸಿತ ಹಾಗೂ ಮೂಲಸೌಕರ್ಯಗಳ ಮೇಲಿನ ಒತ್ತಡದಂತಹ ಭವಿಷ್ಯದ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಕೃತಕ ಬುದ್ಧಿಮತ್ತೆ (ಎಐ) ಮತ್ತು ಡಿಜಿಟಲ್ ತಂತ್ರಜ್ಞಾನಗಳು ಪ್ರಮುಖ ಪಾತ್ರ ವಹಿಸುತ್ತಿದ್ದು, ಎಐ ಆಧಾರಿತ ನಗರ ಜಲ ಆಡಳಿತದಲ್ಲಿ ಕರ್ನಾಟಕವು ರಾಷ್ಟ್ರಮಟ್ಟದಲ್ಲಿ ಮುಂಚೂಣಿಯಲ್ಲಿದೆ ಎಂದು ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ತಿಳಿಸಿದರು.

ಬುಧವಾರ ನಗರದಲ್ಲಿ ಎಲೆಟ್ಸ್ (elets) ಮತ್ತು ಕೆಪಿಎಂಜಿ (KPMG) ಸಹಯೋಗದೊಂದಿಗೆ ಬೆಂಗಳೂರು ಜಲಮಂಡಳಿ ಆಯೋಜಿಸಿದ್ದ ‘ರಾಷ್ಟ್ರೀಯ ಎಐ ಮತ್ತು ಡಿಜಿಟಲ್ ವಾಟರ್ ಶೃಂಗಸಭೆ 2026' ಅನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬೆಂಗಳೂರು, ಮೈಸೂರು, ಮಂಗಳೂರು, ಧಾರವಾಡ ಮತ್ತು ಬೆಳಗಾವಿಯಂತಹ ನಗರಗಳ ಮೇಲೆ ನೀರಿನ ಒತ್ತಡ ಹೆಚ್ಚಾಗುತ್ತಿದೆ. ದಕ್ಷ, ಪಾರದರ್ಶಕ ಮತ್ತು ಜವಾಬ್ದಾರಿಯುತ ಸಾರ್ವಜನಿಕ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ತಂತ್ರಜ್ಞಾನ ಆಧಾರಿತ ಇಂಟಲಿಜೆಂಟ್ ಆಡಳಿತ ವ್ಯವಸ್ಥೆಗಳು ಅತ್ಯಗತ್ಯವಾಗಿವೆ ಎಂದು ಶಾಲಿನಿ ರಜನೀಶ್ ತಿಳಿಸಿದರು.

ನಗರದ ನೀರು ಸರಬರಾಜು ಮಂಡಳಿಗಳಿಗೆ ಎಐ ಮತ್ತು ಡಿಜಿಟಲ್ ಇಂಟೆಲಿಜೆನ್ಸ್ ಇನ್ನು ಮುಂದೆ ಕೇವಲ ಐಚ್ಛಿಕ ಸಾಧನಗಳಾಗಿ ಉಳಿದಿಲ್ಲ. ನೈಜ-ಸಮಯದ ಮೇಲ್ವಿಚಾರಣೆ, ಪ್ರಿಡಿಕ್ಟಿವ್ ಅನಾಲಿಟಿಕ್ಸ್, ನೀರಿನ ಬೇಡಿಕೆಯ ಮುನ್ಸೂಚನೆ ಹಾಗೂ ದತ್ತಾಂಶ ಆಧಾರಿತ ಆಡಳಿತವು ಭವಿಷ್ಯದ ಜಲ ನಿರ್ವಹಣೆಯನ್ನು ನಿರ್ಧರಿಸಲಿವೆ ಎಂದು ಅವರು ಹೇಳಿದರು.

ಕರ್ನಾಟಕವು ಈಗಾಗಲೆ ಎಐ ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಿದೆ ಹಾಗೂ ಡಿಜಿಟಲ್ ಸಂಗ್ರಹಣೆ, ಡೇಟಾ ಹಂಚಿಕೆ ಮತ್ತು ಕಾರ್ಯಕ್ಷಮತೆ-ಆಧಾರಿತ ಆಡಳಿತ ವ್ಯವಸ್ಥೆಗಳನ್ನು ಬೆಂಬಲಿಸುವ ನೀತಿ ಚೌಕಟ್ಟುಗಳನ್ನು ಪರಿಚಯಿಸಿದೆ. ಡಿಜಿಟಲ್ ರೂಪಾಂತರದ ಕೇಂದ್ರ ಬಿಂದುವಾಗಿ ಹೊಣೆಗಾರಿಕೆಗೂ ಆದ್ಯತೆ ನೀಡಬೇಕು ಮುಖ್ಯ ಕಾರ್ಯದರ್ಶಿ ಕರೆ ನೀಡಿದರು.

ದತ್ತಾಂಶವು ಅಂತಿಮವಾಗಿ ಅಳೆಯಬಹುದಾದ ಆಡಳಿತಾತ್ಮಕ ಫಲಿತಾಂಶಗಳಿಗೆ ಕಾರಣವಾಗಬೇಕು. ತಂತ್ರಜ್ಞಾನವು ಸಾರ್ವಜನಿಕರ ವಿಶ್ವಾಸ ಮತ್ತು ಸಾಂಸ್ಥಿಕ ದಕ್ಷತೆಯನ್ನು ಬಲಪಡಿಸಬೇಕು ಎಂದು ಶಾಲಿನಿ ರಜನೀಶ್ ತಿಳಿಸಿದರು.

ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್ ಮಾತನಾಡಿ, ಬೆಂಗಳೂರಿನ ವಿಸ್ತಾರ ಮತ್ತು ಸಂಕೀರ್ಣತೆಯು ಸಾಂಪ್ರದಾಯಿಕ ನಿರ್ವಹಣಾ ಕಾರ್ಯಾಚರಣೆಗಳಿಂದ ಮುನ್ಸೂಚಕ ಮತ್ತು ಬುದ್ಧಿವಂತ ನಿರ್ವಹಣಾ ವ್ಯವಸ್ಥೆಗಳತ್ತ ಬದಲಾಗುತ್ತಿದೆ. ಬೆಂಗಳೂರು ಜಲಮಂಡಳಿಯು ಇಂದು 14 ದಶಲಕ್ಷಕ್ಕೂ ಹೆಚ್ಚು ನಾಗರಿಕರಿಗೆ ಸೇವೆ ಸಲ್ಲಿಸುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಎಫ್‍ಕೆಸಿಸಿಐ ಅಧ್ಯಕ್ಷೆ ಉಮಾರೆಡ್ಡಿ, ಎಲೆಟ್ಸ್ ಟೆಕ್ನೋ ಮೀಡಿಯಾ ಸಂಸ್ಥೆಯ ಸಂಸ್ಥಾಪಕ ಹಾಗೂ ಸಿಇಓ ರವಿಗುಪ್ತಾ, ಕೆಪಿಎಂಜಿ ಪಾರ್ಟ್‍ನರ್ ಹೆಡ್ ಆಫ್ ದ ಗವರ್ನಮೆಂಟ್ ಅಂಡ್ ಪಬ್ಲಿಕ್ ಸರ್ವಿಸಸ್ ನಿಲಾಚಲ್ ಮಿಶ್ರಾ ಸೇರಿದಂತೆ ಜಾಗತಿಕ ಜಲ ತಜ್ಞರು, ಎಐ ಪರಿಣತರು, ನೀತಿ ನಿರೂಪಕರು, ತಂತ್ರಜ್ಞಾನ ಕಂಪನಿಗಳು, ನವೋದ್ಯಮಗಳು (ಸ್ಟಾರ್ಟ್-ಅಪ್‍ಗಳು) ಹಾಗೂ ದೇಶ-ವಿದೇಶಗಳ ನಗರ ಆಡಳಿತ ವೃತ್ತಿಪರರು ಭಾಗವಹಿಸಿದ್ದರು.

ಕರ್ನಾಟಕವು ಕೈಗಾರಿಕಾ ಬೆಳವಣಿಗೆ ಮತ್ತು ಅದರಿಂದ ನೀರಿನ ಬೇಡಿಕೆ ಹೆಚ್ಚುತ್ತಿರುವ ಸಂದಿಗ್ಧ ಕಾಲದಲ್ಲಿದೆ. ಸುಸ್ಥಿರ ಮತ್ತು ಸಮಾನ ನಗರ ಬೆಳವಣಿಗೆಯನ್ನು ಖಚಿತಪಡಿಸಿಕೊಳ್ಳಲು ಎಐ-ಆಧಾರಿತ ಆಡಳಿತ ಮತ್ತು ಬುದ್ಧಿವಂತ ಜಲ ವ್ಯವಸ್ಥೆಗಳು ಅತ್ಯಂತ ನಿರ್ಣಾಯಕವಾಗಿವೆ. ಈ ನಿಟ್ಟಿನಲ್ಲಿ ಹೊಸ ತಂತ್ರಜ್ಞಾನ ಅಳವಡಿಕೆಯಲ್ಲಿ ಬೆಂಗಳೂರು ಜಲಮಂಡಳಿ ದೇಶಕ್ಕೆ ಮಾದರಿಯಾಗಿದೆ.

ಡಿ.ಕೆ.ಶಿವಕುಮಾರ್, ಉಪ ಮುಖ್ಯಮಂತ್ರಿ

Tags

Bengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X